ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂನಿಂದ ಅರ್ಜಿ ವಜಾ; ನಿರ್ಭಯಾ ಹಂತಕರಿಗೆ ಶುಕ್ರವಾರ ಗಲ್ಲು

|
Google Oneindia Kannada News

ನವದೆಹಲಿ, ಮಾರ್ಚ್ 19 : ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮಾರ್ಚ್ 20ರ ಶುಕ್ರವಾರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗುವುದು ಖಚಿತವಾಗಿದೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಪವನ್ ಗುಪ್ತ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಗುರುವಾರ ವಜಾಗೊಳಿಸಲಾಗಿದೆ. ತಾನು ಬಾಲಾಪರಾಧಿ ಎಂದು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಅರ್ಜಿಯನ್ನು ಸಲ್ಲಿಸಲಾಗಿತ್ತು.

ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದರೆ ಪವನ್‌ಗೆ ಎಷ್ಟು ಸಿಗುತ್ತೆ? ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದರೆ ಪವನ್‌ಗೆ ಎಷ್ಟು ಸಿಗುತ್ತೆ?

ಪ್ರಸ್ತುತ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮುಕೇಶ್ ಸಿಂಗ್ ಪ್ರಕರಣದ ನಡೆದ ದಿನ ನಾನು ದೆಹಲಿಯಲ್ಲಿಯೇ ಇರಲಿಲ್ಲ, ನನ್ನ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿ ಎಂದು ಸಲ್ಲಿಸಿರುವ ಅರ್ಜಿಯ ತೀರ್ಪು ಬಾಕಿ ಇದೆ.

ಇದು ನಮ್ಮ ವ್ಯವಸ್ಥೆಯ ವೈಫಲ್ಯ, ಇಡೀ ವಿಶ್ವವೇ ನೋಡುತ್ತಿದೆ: ನಿರ್ಭಯಾ ತಾಯಿಇದು ನಮ್ಮ ವ್ಯವಸ್ಥೆಯ ವೈಫಲ್ಯ, ಇಡೀ ವಿಶ್ವವೇ ನೋಡುತ್ತಿದೆ: ನಿರ್ಭಯಾ ತಾಯಿ

Nirbhaya Case SC Dismisses Curative Petition Of Pawan Gupta

ಪ್ರಕರಣದ ಅಪರಾಧಿಯಾಗಿರುವ ಅಕ್ಷಯ್ ಕುಮಾರ್ ಸಿಂಗ್ ಪತ್ನಿ ಬಿಹಾರ ಸ್ಥಳೀಯ ನ್ಯಾಯಾಲಯದಲ್ಲಿ ವಿಚ್ಛೇಧನ ಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಈ ಎರಡೂ ಅರ್ಜಿಗಳ ತೀರ್ಪು ಬಂದರೆ ಅಪರಾಧಿಗಳ ಗಲ್ಲು ಶಿಕ್ಷೆ ಜಾರಿಗೆ ಯಾವುದೇ ಅಡೆ-ತಡೆಗಳು ಇಲ್ಲ.

ನಿರ್ಭಯ ಪ್ರಕರಣಕ್ಕೆ ಹೊಸ ತಿರುವು ಕೊಟ್ಟ ಅಪರಾಧಿ ಅರ್ಜಿ! ನಿರ್ಭಯ ಪ್ರಕರಣಕ್ಕೆ ಹೊಸ ತಿರುವು ಕೊಟ್ಟ ಅಪರಾಧಿ ಅರ್ಜಿ!

ಈಗಾಗಲೇ ಪ್ರಕರಣದಲ್ಲಿ ಮೂವರು ಡೆತ್ ವಾರೆಂಟ್ ಹೊರಡಿಸಿ ಅದನ್ನು ಮುಂದೂಡಲಾಗಿದೆ. ಶುಕ್ರವಾರ ಮುಂಜಾನೆ 5.30ಕ್ಕೆ ಅಪರಾಧಿಗಳನ್ನು ಗಲ್ಲಿಗೇರಿಸಲು 4ನೇ ಡೆತ್ ವಾರೆಂಟ್ ಜಾರಿಯಾಗಿದೆ.

English summary
Supreme Court on March 19, 2020 dismissed the curative petition of Nirbhaya case convict Pawan Gupta plea. He moved court against the dismissal of his review plea rejecting his juvenility claim.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X