ನಿರ್ಭಯಾ ಅತ್ಯಾಚಾರ: ಅಪರಾಧಿ ಮುಕೇಶ್ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ನವದೆಹಲಿ, ಜನವರಿ 29: ತನ್ನ ಕ್ಷಮಾದಾನದ ಮನವಿಯನ್ನು ತಿರಸ್ಕರಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ನಿರ್ಧಾರವನ್ನು ಪ್ರಶ್ನಿಸಿ ನಿರ್ಭಯಾ ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್, ಆದ್ಯತೆ ಮೇರೆಗೆ ವಿಚಾರಣೆಗೆ ಪರಿಗಣಿಸಿತ್ತು. ಬುಧವಾರ ಆತನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರನ್ನು ಒಳಗೊಂಡ ನ್ಯಾಯಪೀಠ, ಮನವಿಯನ್ನು ವಜಾಗಳಿಸಿತು.
'ಈ ಕ್ಷಮಾದಾನದ ಅರ್ಜಿ ತಿರಸ್ಕರಿಸುವ ವಿಚಾರದಲ್ಲಿ ರಾಷ್ಟ್ರಪತಿ ತಮ್ಮ ವಿವೇಚನೆಯನ್ನು ಬಳಸಿಲ್ಲ ಎಂದು ಹೇಳುವಂತಿಲ್ಲ. ಜೈಲಿನಲ್ಲಿ ಸಮಸ್ಯೆ ಅನುಭವಿಸಿದ ಸಂಗತಿಯು ಕ್ಷಮಾದಾನದ ಅರ್ಜಿಗೆ ಯಾವುದೇ ಬೆಂಬಲ ನೀಡುವುದಿಲ್ಲ' ಎಂದು ನ್ಯಾಯಪೀಠ ಹೇಳಿತು.

ಈ ನಡುವೆ ಮತ್ತೊಬ್ಬ ಅಪರಾಧಿ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿ ಜತೆ ಇನ್ನಷ್ಟು ದಾಖಲೆಗಳನ್ನು ನೀಡುವಂತೆ ಸುಪ್ರೀಂಕೋರ್ಟ್ ರಿಜಿಸ್ಟ್ರಿ ವಕೀಲರಿಗೆ ಸೂಚಿಸಿದೆ. ಈ ಅಗತ್ಯ ದಾಖಲೆಗಳನ್ನು ಒದಗಿಸಲು ಕೆಲಸ ಮಾಡುತ್ತಿರುವುದಾಗಿ ಆತನ ಪರ ವಕೀಲ ಎ.ಪಿ. ಸಿಂಗ್ ತಿಳಿಸಿದ್ದಾರೆ.












Click it and Unblock the Notifications