ನಿರ್ಭಯ ಹಂತಕರಿಗೆ ಫೆ.11ರ ತನಕ ಗಲ್ಲು ಶಿಕ್ಷೆ ಇಲ್ಲ

ಬೆಂಗಳೂರು, ಫೆಬ್ರವರಿ 07 : ನಿರ್ಭಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳಿಗೆ ಫೆಬ್ರವರಿ 11ರ ತನಕ ಮರಣದಂಡನೆ ಜಾರಿಗೊಳಿಸುವುದಿಲ್ಲ. ನಾಲ್ವರು ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಬಾರದು ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿದೆ.

ದೆಹಲಿ ಹೈಕೋರ್ಟ್ ಆದೇಶವನ್ನು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದೆ. ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ಫೆಬ್ರವರಿ 11ರಂದು ತೀರ್ಪನ್ನು ಪ್ರಕಟಿಸಲಿದೆ.

ಎಸ್‌ಎಸ್‌ಜಿ ಕೆ. ಎಂ. ನಟರಾಜ್ ನ್ಯಾಯಮೂರ್ತಿ ಎನ್‌. ವಿ. ರಮಣ ನೇತೃತ್ವದ ಪೀಠದ ಮುಂದೆ ಅರ್ಜಿಯ ವಿಚಾರಣೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಗುರುವಾರ ಮನವಿ ಸಲ್ಲಿಸಿದ್ದರು.

Nirbhaya Killers Hanging Separately SC Verdict On Feb 11

ನ್ಯಾಯಮೂರ್ತಿಗಳು ಶುಕ್ರವಾರಕ್ಕೆ ಪ್ರಕರಣವನ್ನು ಲಿಸ್ಟ್ ಮಾಡಿಸಿದ್ದರು. ಇಂದು ಫೆಬ್ರವರಿ 11ರಂದು ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ. ಆದ್ದರಿಂದ, ಅಲ್ಲಿಯ ತನಕ ಅಪರಾಧಿಗಳು ಗಲ್ಲು ಶಿಕ್ಷೆಯಿಂದ ಪಾರಾಗಿದ್ದಾರೆ.

ಕೇಂದ್ರ ಸರ್ಕಾರ ನಿರ್ಭಯ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಲು ಅವಕಾಶ ನೀಡಬೇಕು ಎಂದು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿತ್ತು. ಕೇಂದ್ರ ಸರ್ಕಾರ ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದೆ.

ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮುಕೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31) ಅಪರಾಧಿಗಳು. ಎಲ್ಲಾ ಅರಾಧಿಗಳು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+