ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಭಾರೀ ಗಿಫ್ಟ್
ನವದೆಹಲಿ, ನವೆಂಬರ್ 06: ವೈಫಲ್ಯ ಕಾಣುತ್ತಿರುವ ಆರ್ಥಿಕತೆಯನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಭಾರೀ ಕೊಡುಗೆ ನೀಡಿದೆ.
ನವದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸ್ಥಗಿತಗೊಂಡಿರುವ ರಿಯಲ್ ಎಸ್ಟೇಟ್ ಪ್ರಾಜೆಕ್ಟ್ ಗಳುಗೆ 25000 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದರು.
ಮಧ್ಯಮ ವರ್ಗಕ್ಕೆ ಅನುಕೂಲವಾಗುವಂತೆ ನಿರ್ಮಾಣವಾಗುತ್ತಿದ್ದ ಹಲವು ಗೃಹ ನಿರ್ಮಾಣ ಕಾರ್ಯಗಳು ಬೇರೆ ಬೇರೆ ಕಾರಣದಿಂದ ಸ್ಥಗಿತವಾಗಿದ್ದು, ಅವು ಪೂರ್ಣಗೊಳ್ಳಬೇಕೆಂಬ ಕಾರಣಕ್ಕೆ ಸರ್ಕಾರ ಈ ಅನುದಾನವನ್ನು ಘೋಷಿಸಿದೆ.

ಇದರಿಂದಾಗಿ ಸ್ಥಗಿತಗೊಂಡ ಸುಮಾರು 1600 ಕ್ಕೂ ಹೆಚ್ಚು ಗೃಹ ನಿರ್ಮಾಣ ಯೋಜನೆಗಳಿಗೆ ನೆರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರಿಯಲ್ ಎಸ್ಟೇಟ್ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಲಿದೆ ಎಂದು ಮಂಗಳವಾರವಷ್ಟೇ ನಿರ್ಮಲಾ ಸೀತಾರಾಮನ್ ಹೇಳಿದ್ದರು.












Click it and Unblock the Notifications