ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಭಾರೀ ಗಿಫ್ಟ್

|
Google Oneindia Kannada News

ನವದೆಹಲಿ, ನವೆಂಬರ್ 06: ವೈಫಲ್ಯ ಕಾಣುತ್ತಿರುವ ಆರ್ಥಿಕತೆಯನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಭಾರೀ ಕೊಡುಗೆ ನೀಡಿದೆ.

ನವದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸ್ಥಗಿತಗೊಂಡಿರುವ ರಿಯಲ್ ಎಸ್ಟೇಟ್ ಪ್ರಾಜೆಕ್ಟ್ ಗಳುಗೆ 25000 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದರು.

ಆಟೋ ಇಂಡಸ್ಟ್ರಿ ಬಿಕ್ಕಟ್ಟು: 'ನಿರ್ಮಲಾ ತಾಯ್' ಹೇಳದೆ ಉಳಿಸಿದ ಅಸಲಿ ಕಾರಣಗಳು! ಆಟೋ ಇಂಡಸ್ಟ್ರಿ ಬಿಕ್ಕಟ್ಟು: 'ನಿರ್ಮಲಾ ತಾಯ್' ಹೇಳದೆ ಉಳಿಸಿದ ಅಸಲಿ ಕಾರಣಗಳು!

ಮಧ್ಯಮ ವರ್ಗಕ್ಕೆ ಅನುಕೂಲವಾಗುವಂತೆ ನಿರ್ಮಾಣವಾಗುತ್ತಿದ್ದ ಹಲವು ಗೃಹ ನಿರ್ಮಾಣ ಕಾರ್ಯಗಳು ಬೇರೆ ಬೇರೆ ಕಾರಣದಿಂದ ಸ್ಥಗಿತವಾಗಿದ್ದು, ಅವು ಪೂರ್ಣಗೊಳ್ಳಬೇಕೆಂಬ ಕಾರಣಕ್ಕೆ ಸರ್ಕಾರ ಈ ಅನುದಾನವನ್ನು ಘೋಷಿಸಿದೆ.

Nirmala Sitharaman announced Rs. 25,000 crore fund for stalled real estate projects

ಇದರಿಂದಾಗಿ ಸ್ಥಗಿತಗೊಂಡ ಸುಮಾರು 1600 ಕ್ಕೂ ಹೆಚ್ಚು ಗೃಹ ನಿರ್ಮಾಣ ಯೋಜನೆಗಳಿಗೆ ನೆರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ವೈಯಕ್ತಿಕ ಆದಾಯ ತೆರಿಗೆ ದರದಲ್ಲಿ ಕಡಿತ, ವದಂತಿ ಬಗ್ಗೆ ಸರ್ಕಾರ ಹೇಳಿದ್ದು...ವೈಯಕ್ತಿಕ ಆದಾಯ ತೆರಿಗೆ ದರದಲ್ಲಿ ಕಡಿತ, ವದಂತಿ ಬಗ್ಗೆ ಸರ್ಕಾರ ಹೇಳಿದ್ದು...

ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರಿಯಲ್ ಎಸ್ಟೇಟ್ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಲಿದೆ ಎಂದು ಮಂಗಳವಾರವಷ್ಟೇ ನಿರ್ಮಲಾ ಸೀತಾರಾಮನ್ ಹೇಳಿದ್ದರು.

English summary
Finance Minister Nirmala Sitharaman announced Rs. 25,000 crore fund for stalled real estate projects,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X