ಬಜೆಟ್ ಪ್ರತಿ ಪ್ರಿಂಟಿಗೂ ಮುನ್ನ ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್
ನವದೆಹಲಿ, ಜೂನ್ 22 : ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ ನಂತರ ಮೊದಲ ಬಾರಿ ಆಯವ್ಯಯ ಮಂಡನೆಯಾಗಲಿದ್ದು, ಅದಕ್ಕೂ ಮೊದಲು ಇಂದು ಜರುಗಿದ ಸಾಂಪ್ರದಾಯಿಕ ಹಲ್ವಾ ಸಮಾರಂಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಇಲಾಖೆಯ ಸಿಬ್ಬಂದಿಗಳಿಗೆ ಹಲ್ವಾ ಹಂಚಿದರು.
ಹಿಂದಿನ ಮೋದಿ ಸರಕಾರದಲ್ಲಿ ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರ ಹೆಗಲಿಗೆ ಹಣಕಾಸು ನಿರ್ವಹಣೆಯ ಜವಾಬ್ದಾರಿಯನ್ನು ನರೇಂದ್ರ ಮೋದಿಯವರು ಹೊರಿಸಿದ್ದಾರೆ. ದೇಶದ ಆರ್ಥಿಕ ಸ್ಥಿತಿ ನಿರ್ವಹಿಸುವ ಜವಾಬ್ದಾರಿ ಹೊತ್ತಮೇಲೆ ನಿರ್ಮಲಾ ಸೀತಾರಾಮನ್ ಅವರು ಮೊದಲ ಬಾರಿದೆ ಬಜೆಟ್ ಮಂಡಿಸಲಾಗಿದ್ದಾರೆ.
ಜುಲೈ 5ರಂದು ಸ್ವತಂತ್ರ ಭಾರತದ, ಪೂರ್ಣ ಪ್ರಮಾಣದ ಮಹಿಳಾ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರು ಆಯವ್ಯಯ ಮಂಡಿಸಲಿದ್ದಾರೆ. ಬಜೆಟ್ ಪ್ರತಿಗಳನ್ನು ಪ್ರಿಂಟಿಗೆ ಕಳುಹಿಸುವ ಮುನ್ನ ಹಣಕಾಸು ಸಚಿವಾಲಯದಲ್ಲಿ ಸಾಂಪ್ರದಾಯಿಕವಾಗಿ ಹಲ್ವಾ ಸಮಾರಂಭ ಆಚರಿಸುವುದು ಚಾಲ್ತಿಯಲ್ಲಿದೆ.

ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಹಣಕಾಸು ಮತ್ತು ಕಾರ್ಪೊರೇಟ್ ಖಾತೆಯ ರಾಜ್ಯ ಸಚಿವರಾಗಿರುವ ಅನುರಾಗ್ ಠಾಕೂರ್ ಅವರು ಕೂಡ ಹಲ್ವಾ ಸಮಾರಂಭದಲ್ಲಿ ಭಾಗವಹಿಸಿ, ನಿರ್ಮಲಾ ಅವರ ಜೊತೆಯಲ್ಲಿ ಇಲಾಖೆಯ ಸಿಬ್ಬಂದಿಗಳಿಗೆ ಹಲ್ವಾವನ್ನು ಹಂಚಿದರು.
ಬಜೆಟ್ ಪ್ರತಿಗಳನ್ನು ಪ್ರಿಂಟಿಗೆ ಕಳುಹಿಸುವ ಮೊದಲು ಮತ್ತು ಬಜೆಟ್ ಮಂಡನೆಗೆ ಕೆಲ ದಿನಗಳು ಇರುವಾಗಲೇ ಹಲ್ವಾ ಸಮಾರಂಭವನ್ನು ಆಚರಿಸಲಾಗುತ್ತದೆ. ಹಣಕಾಸು ಸಚಿವಾಲಯ ಕಟ್ಟಡದ ಕೆಳಮಹಡಿಯಲ್ಲಿ, ದೊಡ್ಡ ಕಡಾಯಿಯಲ್ಲಿ ಹಲ್ವಾ ತಯಾರಿಸಲಾಗುತ್ತದೆ ಮತ್ತು 100ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಹಲ್ವಾ ಹಂಚಲಾಗುತ್ತದೆ.
ಬಜೆಟ್ ತಯಾರಿಕೆ ಸಂದರ್ಭದಿಂದ ಬಜೆಟ್ ಮಂಡನೆಯಾಗುವವರೆಗೆ ಭಾಗಿಯಾಗುವ ಸಿಬ್ಬಂದಿಗಳೆಲ್ಲರೂ ತಮ್ಮ ಮನೆಮಠಗಳನ್ನು, ಹೆಂಡತಿ ಮಕ್ಕಳನ್ನು, ಬಂಧುಮಿತ್ರರನ್ನು ಮರೆತು ಕಚೇರಿಯಲ್ಲಿಯೇ ತೊಡಗಬೇಕಾಗುತ್ತದೆ. ಫೋನ್ ಮುಖಾಂತರವಾಗಲಿ ಮತ್ತಾವುದೇ ರೀತಿಯಲ್ಲಾಗಲು ಅವರು ಯಾರನ್ನೂ ಸಂಪರ್ಕಿಸುವಂತಿಲ್ಲ. ಅಷ್ಟರ ಮಟ್ಟಿಗೆ ಮಾಹಿತಿ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಈ ಕಾರಣದಿಂದಾಗಿಯೇ ಬಜೆಟ್ ಪ್ರತಿಗಳನ್ನು ಪ್ರಿಂಟಿಗೆ ಕಳುಹಿಸುವ ಮುನ್ನ ಹಲ್ವಾ ತಯಾರಿಸಿ ಸಿಬ್ಬಂದಿಗೆ ಹಂಚುವುದು ಸಂಪ್ರದಾಯ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications