ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಟಾಕಿ ಮಾರಾಟಕ್ಕೆ ನಿಷೇಧವಿಲ್ಲ, ಆದರೆ ಷರತ್ತುಗಳು ಅನ್ವಯ: ಸುಪ್ರೀಂ

|
Google Oneindia Kannada News

Recommended Video

ಪಟಾಕಿಯನ್ನು ಸಂಪೂರ್ಣ ನಿಷೇಧಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್ | Oneindia Kannada

ನವದೆಹಲಿ, ಅಕ್ಟೋಬರ್ 23: ಪಟಾಕಿ ಮಾರಾಟದ ಮೇಲೆ ನಿಷೇಧ ಹೇರಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಈ ಬಾರಿಯ ದೀಪಾವಳಿಯಲ್ಲಿ ಮತ್ತೆ ಪಟಾಕಿಯ ಸದ್ದು ಮೊಳಗಲಿದೆ.

ಆದರೆ ಪಟಾಕಿ ಮೇಲೆ ನಿಷೇಧ ಹೇರಲು ನಿರಾಕರಿಸಿದ್ದರೂ ಕೆಲವು ಷರತ್ತುಗಳನ್ನು ಸುಪ್ರೀಂ ಕೋರ್ಟ್ ವಿಧಿಸಿದೆ.

ಢಂ ಢಂ ಪಟಾಕಿನ ಧಾಂ ಧೂಂ ಅಂತ ಎಲ್ಲೆಂದರಲ್ಲಿ ಮಾರುವಹಾಗಿಲ್ಲ!ಢಂ ಢಂ ಪಟಾಕಿನ ಧಾಂ ಧೂಂ ಅಂತ ಎಲ್ಲೆಂದರಲ್ಲಿ ಮಾರುವಹಾಗಿಲ್ಲ!

No ban on sale of firecrackers: Supreme Court

ನವೆಂಬರ್ 6 ರಿಂದ 8 ರವರೆಗೆ ಸಂಭ್ರಮದ ದೀಪಾವಳಿ ಹಬ್ಬದ ಆಚರಣೆ ನಡೆಯಲಿದ್ದು, ಆ ಸಮಯದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರವೇ ಪಟಾಕಿಯನ್ನು ಹಚ್ಚಬಹುದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಕ್ರಿಸ್ ಮತ್ತು ಹೊಸ ವರ್ಷದ ಸಮಯದಲ್ಲಿ ರಾತ್ರಿ 11:55 ರಿಂದ 12:30 ರವರೆಗೆ ಮಾತ್ರವೇ ಪಟಾಕಿ ಹಚ್ಚಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪಟಾಕಿಯಿಂದ ಪರಿಸರ ಮಾಲಿನ್ಯವಾಗುತ್ತದೆ ಎಂಬ ಕೂಗು ಹೆಚ್ಚಿರುವ ಹಿನ್ನೆಲೆಯಲ್ಲಿ ಪಟಾಕಿ ಮಾರಾಟದ ಮೇಲೆ ನಿಷೇಧ ಹೇರಲು ಕೋರಲಾಗಿತ್ತು.

ಪಟಾಕಿಗಳ ಶಬ್ದಗಳಿಗೂ ಮಿತ ಹೇರಲಾಗಿದ್ದು, ಹೆಚ್ಚು ಶಬ್ದವನ್ನು, ಹೊಗೆಯನ್ನೂ ಉಗುಳುವ ಪಟಾಕಿಗಳನ್ನು ಮಾರಲು ಅನುಮತಿಯನ್ನೇ ನೀಡುವಂತಿಲ್ಲ ಎಂದು ಸಹ ಸುಪ್ರೀಂ ಕೋರ್ಟ್ ಹೇಳಿದೆ.

ದೀಪಾವಳಿಗೆ ಪಟಾಕಿ ಹೊಡೆಯಬೇಕಿಲ್ಲ, ಸಿಹಿ ಹಂಚಿದರೂ ಸಾಕು: ಸುಪ್ರೀಂಕೋರ್ಟ್ದೀಪಾವಳಿಗೆ ಪಟಾಕಿ ಹೊಡೆಯಬೇಕಿಲ್ಲ, ಸಿಹಿ ಹಂಚಿದರೂ ಸಾಕು: ಸುಪ್ರೀಂಕೋರ್ಟ್

ಕಡಿಮೆ ಹೊಗೆ ಉಗುಳುವ ಪಟಾಕಿಗಳಿಗಷ್ಟೇ ಅನುಮತಿ ನೀಡಲಾಗುವುದು ಎಂದಿರುವ ಕೋರ್ಟ್, ಆನ್ ಲೈನ್ ನಲ್ಲಿ ಪಟಾಕಿ ಮಾರಾಟಕ್ಕೆ ನಿರ್ಬಂಧ ಹೇರಿದೆ.

ನ್ಯಾ.ಎಕೆ ಸಿಕ್ರಿ ಮತ್ತು ನ್ಯಾ.ಅಶೋಕ್ ಭೂಷಣ್ ಅವರಿದ್ದ ದ್ವೀಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತ್ತು.

English summary
Amid huge concerns over pollution, firecrackers have been allowed by the Supreme Court, but with conditions. Only less polluting crackers will be allowed, for a limited time and in designated areas, the court said, rejecting an outright ban.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X