ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಪಿ-ಬಿಎಸ್ಪಿ ಅಭ್ಯರ್ಥಿ ಅಮೇಥಿ, ರಾಯ್ಬರೇಲಿಯಲ್ಲಿ ಸ್ಪರ್ಧಿಸೋಲ್ಲ!

|
Google Oneindia Kannada News

Recommended Video

ಕಾಂಗ್ರೆಸ್ ಗೆ ಶಾಕ್ ನೀಡಿದ ಮಾಜಿ ಮುಖ್ಯಮಂತ್ರಿಗಳು..! | Oneindia Kannada

ನವದೆಹಲಿ, ಜನವರಿ 05: ಕಾಂಗ್ರೆಸ್ ಅನ್ನು ಹೊರಗಿಟ್ಟು ಬಿ ಎಸ್ಪಿ ನಾಯಕಿ ಮಾಯಾವತಿ ಮತ್ತು ಎಸ್ಪಿ ನಾಯಕ ಅಖಿಲೇಶ್ ಯಾದವ್ ಮಹಾಮೈತ್ರಿಕೂಟ ನಿರ್ಮಿಸುತ್ತಿರುವುದೇನೋ ನಿಜ. ಆದರೆ ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ಬರೇಲಿಗಳಲ್ಲಿ ಮಾತ್ರ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಇರಲು ಉಭಯ ನಾಯಕರೂ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ಸಿಗೆ ಭಾರೀ ಆಘಾತ ನೀಡಿದ ಮಾಯಾವತಿ-ಅಖಿಲೇಶ್ ನಡೆ ಕಾಂಗ್ರೆಸ್ಸಿಗೆ ಭಾರೀ ಆಘಾತ ನೀಡಿದ ಮಾಯಾವತಿ-ಅಖಿಲೇಶ್ ನಡೆ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಅವರು ಶುಕ್ರವಾರ ನವದೆಹಲಿಯಲ್ಲಿ ಸಭೆ ನಡೆಸಿದರು.

No Candidates from grand alliance in Amethi and Raebareli: Mayawati

ಮಹಾಘಟಬಂಧನದಲ್ಲಿ ಕಾಂಗ್ರೆಸ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕಾಂಗ್ರೆಸ್ ಬಗೆಗಿನ ಮುನಿಸನ್ನು ಹೊರಹಾಕಿದರು. ಆದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಭದ್ರಕೋಟೆಯಾದ ಅಮೇಥಿ ಮತ್ತು ರಾಯ್ಬರೇಲಿಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಸದೆ ಪರೋಕ್ಷವಾಗಿ ಕಾಂಗ್ರೆಸ್ಸಿಗೆ ಬೆಂಬಲ ನೀಡಲು ಉಭಯ ನಾಯಕರು ನಿರ್ಧರಿಸಿದಂತಿದೆ.

ಕಾಂಗ್ರೆಸ್-ಬಿಜೆಪಿ ಇಲ್ಲದ ಸಂಯುಕ್ತ ಕೂಟ: ಅಖಿಲೇಶ್ ಏನಂತಾರೆ?ಕಾಂಗ್ರೆಸ್-ಬಿಜೆಪಿ ಇಲ್ಲದ ಸಂಯುಕ್ತ ಕೂಟ: ಅಖಿಲೇಶ್ ಏನಂತಾರೆ?

ಅಮೇಥಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಾಯ್ಬರೇಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಲವು ವರ್ಷಗಳಿಂದ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುತ್ತಿದ್ದಾರೆ. ಈ ಬಾರಿ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸಿದರೆ, ಅನಾರೋಗ್ಯದ ಕಾರಣ ರಾಯ್ಬರೇಲಿಯಿಂದ ಸೋನಿಯಾ ಗಾಂಧಿ ಅವರು ಸ್ಪರ್ಧಿಸುವುದು ಅನುಮಾನ ಎನ್ನಲಾಗಿದೆ. ಅವರ ಬದಲಿಗೆ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ.

English summary
Even though the Congress will be kept out of the coalition, Akhilesh Yadav and Mayawati do not intend to field any candidate in Amethi and Raebareli - the stronghold of the Gandhis, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X