ದೆಹಲಿಯಲ್ಲಿ ಶೀಘ್ರ ಶಾಲೆಗಳನ್ನು ಆರಂಭಿಸುವ ಚಿಂತನೆ ಇಲ್ಲ: ಸಿಸೋಡಿಯಾ
ನವದೆಹಲಿ, ನವೆಂಬರ್ 24: ದೆಹಲಿಯಲ್ಲಿ ಈ ಕೊರೊನಾ ಸೋಂಕಿನ ನಡುವೆ ಶೀಘ್ರ ಶಾಲೆಗಳನ್ನು ಆರಂಭಿಸುವ ಚಿಂತನೆ ಸರ್ಕಾರದಲ್ಲಿಲ್ಲ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.
ಕಳೆದ ಮಾರ್ಚ್ ತಿಂಗಳಿಂದ ಕೊರೊನಾ ಸೋಂಕು ದೇಶದಲ್ಲಿ ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಇದೀಗ ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಕಡಿಮೆಯಾಗಿದ್ದರೂ ದೆಹಲಿಯಲ್ಲಿ ಮೂರನೇ ಅಲೆ ಪ್ರಾರಂಭವಾಗಿರುವ ಕಾರಣ ಶೀಘ್ರ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಹೇಳಿದ್ದಾರೆ.
ಭಾರತಕ್ಕೆ ಪಿಫೈಜರ್ ಕೊರೊನಾ ಲಸಿಕೆಯ ಅಗತ್ಯವಿಲ್ಲ: ಹರ್ಷವರ್ಧನ್
ಯಾವುದೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಿದ್ಧವಿಲ್ಲ. ಅವರಿಗೆ ತಮ್ಮ ಮಕ್ಕಳು ಇನ್ನು ಸುರಕ್ಷಿತ ಎಂದು ಅನಿಸುವವರೆಗೂ ಶಾಲೆಗಳಿಗೆ ಕಳುಹಿಸುವುದಿಲ್ಲ. ಮುಂದಿನ ನೋಟಿಸ್ ವರೆಗೆ ದೆಹಲಿಯ ಶಾಲೆಗಳು ತೆರೆಯುವುದಿಲ್ಲ ಎಂದು ಸರ್ಕಾರ ಕಳೆದ ತಿಂಗಳು ಹೇಳಿತ್ತು.
ಪೋಷಕರಿಂದ ಅಭಿಪ್ರಾಯವನ್ನು ಕೇಳಿದ್ದೆವು, ಆದರೆ ಶಾಲೆಗೆ ಹೋಗುವುದರಿಂದ ನಮ್ಮ ಮಕ್ಕಳು ಸುರಕ್ಷಿತವಾಗಿರುತ್ತಾರೆ ಎನ್ನುವ ನಂಬಿಕೆಯನ್ನು ಪೋಷಕರು ವ್ಯಕ್ತಪಡಿಸಿಲ್ಲ. ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ನಿತ್ಯ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ.
ದೆಹಲಿಯಲ್ಲಿ ಪ್ರತಿ ನಿಮಿಷಕ್ಕೆ ಓರ್ವ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಡುತ್ತಿದ್ದಾರೆ ಎನ್ನುವ ಆತಂಕಕಾರಿ ವಿಷಯ ತಿಳಿದುಬಂದಿದೆ.
ಕನಿಷ್ಠ ಐದು ಮಂದಿ ಪ್ರತಿ ಗಂಟೆಗೆ ಮೃತಪಡುತ್ತಿದ್ದಾರೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಮೃತಪಟ್ಟಿರುವ ಒಟ್ಟು ಸಂಖ್ಯೆಯ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ವಿಶ್ಲೇಷಣೆ ನಡೆಸಿದೆ.