ಸ್ವಾತಂತ್ರ್ಯ ದಿನಾಚರಣೆ ದಿನ ಕೆಂಪುಕೋಟೆಗೆ ಮಕ್ಕಳ ಪ್ರವೇಶ ಇಲ್ಲ
ದೆಹಲಿ, ಜುಲೈ 24: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈ ವರ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Recommended Video
ದೆಹಲಿಯ ಕೆಂಪುಕೋಟೆಯಲ್ಲಿ ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಸಾವಿರಾರು ಮಕ್ಕಳು, ಸೇನೆ ಹಾಗೂ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗುತ್ತಾರೆ. ಆದರೆ, ಈ ವರ್ಷ ಅಂತಹ ಅದ್ಧೂರಿತನ ಇರಲ್ಲ ಎಂಬ ಸುಳಿವು ಸಿಕ್ಕಿದೆ.
ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಮಕ್ಕಳಿಗೆ ಪ್ರವೇಶ ನೀಡದಿರಲು ತೀರ್ಮಾನಿಸಲಾಗಿದೆ. ಕೊವಿಡ್‌ನಿಂದ ಮಕ್ಕಳನ್ನು ರಕ್ಷಿಸಬೇಕಾಗಿರುವುದು ಪ್ರಮುಖ ಕರ್ತವ್ಯವಾಗಿರುವುದರಿಂದ ಈ ವರ್ಷ ಮಕ್ಕಳ ಭಾಗವಹಿಸುವಿಕೆಗೆ ನಿರ್ಬಂಧ ಹೇರಲು ನಿರ್ಧರಿಸಲಾಗಿದೆ.

ಹಾಗಯೇ, ಪ್ರತಿ ವರ್ಷದಂತೆ ಹೆಚ್ಚು ಗಣ್ಯರಿಗೆ ಅವಕಾಶ ನೀಡಲಾಗುತ್ತಿಲ್ಲ. ಪ್ರತಿ ವರ್ಷ 1000ಕ್ಕೂ ಅಧಿಕ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿತ್ತು. ಈ ಸಲ 250 ಮಂದಿಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಅಗತ್ಯವೆನಿಸುವ ಮುನ್ನೆಚ್ಚರಿಕೆ ಕ್ರಮಗಳನ್ನು ಸಹ ತೆಗೆದುಕೊಳ್ಳಲಾಗುವುದು.
ಈ ಸಮಾರಂಭದಲ್ಲಿ ಯಾರೆಲ್ಲಾ ಭಾಗವಹಿಸಬೇಕು ಎಂದು ಕೇಂದ್ರ ರಕ್ಷಣಾ ಸಚಿವಾಲಯ ಅಂತಿಮ ಪಟ್ಟಿ ಸಿದ್ದಪಡಿಸಲಿದೆ. ಎನ್‌ಸಿಸಿ ಸಿಬ್ಬಂದಿಗೆ ಅವಕಾಶ ಸಿಗುತ್ತೆ ಹಾಗು ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.












Click it and Unblock the Notifications