ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ವಾತಂತ್ರ್ಯ ದಿನಾಚರಣೆ ದಿನ ಕೆಂಪುಕೋಟೆಗೆ ಮಕ್ಕಳ ಪ್ರವೇಶ ಇಲ್ಲ

|
Google Oneindia Kannada News

ದೆಹಲಿ, ಜುಲೈ 24: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈ ವರ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

Recommended Video

40 ಸಾವಿರ ಸೈನಿಕರಿಗೆ ಶಸ್ತ್ರಾಸ್ತ್ರ ಕೊಟ್ಟು ಕಳುಹಿಸಿದ ಚೀನಾ | Oneindia Kannada

ದೆಹಲಿಯ ಕೆಂಪುಕೋಟೆಯಲ್ಲಿ ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಸಾವಿರಾರು ಮಕ್ಕಳು, ಸೇನೆ ಹಾಗೂ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗುತ್ತಾರೆ. ಆದರೆ, ಈ ವರ್ಷ ಅಂತಹ ಅದ್ಧೂರಿತನ ಇರಲ್ಲ ಎಂಬ ಸುಳಿವು ಸಿಕ್ಕಿದೆ.

ಭಾರತದಲ್ಲಿ 24 ಗಂಟೆಯಲ್ಲಿ 49,310 ಹೊಸ ಕೋವಿಡ್ ಪ್ರಕರಣಭಾರತದಲ್ಲಿ 24 ಗಂಟೆಯಲ್ಲಿ 49,310 ಹೊಸ ಕೋವಿಡ್ ಪ್ರಕರಣ

ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಮಕ್ಕಳಿಗೆ ಪ್ರವೇಶ ನೀಡದಿರಲು ತೀರ್ಮಾನಿಸಲಾಗಿದೆ. ಕೊವಿಡ್‌ನಿಂದ ಮಕ್ಕಳನ್ನು ರಕ್ಷಿಸಬೇಕಾಗಿರುವುದು ಪ್ರಮುಖ ಕರ್ತವ್ಯವಾಗಿರುವುದರಿಂದ ಈ ವರ್ಷ ಮಕ್ಕಳ ಭಾಗವಹಿಸುವಿಕೆಗೆ ನಿರ್ಬಂಧ ಹೇರಲು ನಿರ್ಧರಿಸಲಾಗಿದೆ.

No Children Participation In Independence Day At Red Fort

ಹಾಗಯೇ, ಪ್ರತಿ ವರ್ಷದಂತೆ ಹೆಚ್ಚು ಗಣ್ಯರಿಗೆ ಅವಕಾಶ ನೀಡಲಾಗುತ್ತಿಲ್ಲ. ಪ್ರತಿ ವರ್ಷ 1000ಕ್ಕೂ ಅಧಿಕ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿತ್ತು. ಈ ಸಲ 250 ಮಂದಿಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಅಗತ್ಯವೆನಿಸುವ ಮುನ್ನೆಚ್ಚರಿಕೆ ಕ್ರಮಗಳನ್ನು ಸಹ ತೆಗೆದುಕೊಳ್ಳಲಾಗುವುದು.

ಈ ಸಮಾರಂಭದಲ್ಲಿ ಯಾರೆಲ್ಲಾ ಭಾಗವಹಿಸಬೇಕು ಎಂದು ಕೇಂದ್ರ ರಕ್ಷಣಾ ಸಚಿವಾಲಯ ಅಂತಿಮ ಪಟ್ಟಿ ಸಿದ್ದಪಡಿಸಲಿದೆ. ಎನ್‌ಸಿಸಿ ಸಿಬ್ಬಂದಿಗೆ ಅವಕಾಶ ಸಿಗುತ್ತೆ ಹಾಗು ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

English summary
No children participation in independence day celebration at Red fort this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X