ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ ಲಾಕ್ ಡೌನ್ ವೇಳೆ ಪೊಲೀಸರಿಂದ ಹಲ್ಲೆ ಬಗ್ಗೆ ಕೇಸ್ ದಾಖಲಾಗಿಲ್ಲ

|
Google Oneindia Kannada News

ನವದೆಹಲಿ, ಸಪ್ಟೆಂಬರ್.16: ಭಾರತ ಲಾಕ್ ಡೌನ್ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ ಸಾರ್ವಜನಿಕರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಬಗ್ಗೆ ಯಾವುದೇ ಘಟನೆಗಳ ಬಗ್ಗೆ ವರದಿಯಾಗಿಲ್ಲ ಎಂದು ರಾಜ್ಯಸಭೆಗೆ ಕೇಂದ್ರ ಗೃಹ ಸಚಿವಾಲಯವು ಮಾಹಿತಿ ನೀಡಿದೆ.

ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿತ್ತು. ಈ ವೇಳೆ ನಿಯಮ ಉಲ್ಲಂಘಿಸಿದ ಸಾರ್ವಜನಿಕರ ಮೇಲೆ ಪೊಲೀಸರು ನಿರ್ದಾಕ್ಷಿಣ್ಯವಾಗಿ ಹಲ್ಲೆ ನಡೆಸಿದ್ದರು. ಇದರಿಂದ ಸಾಕಷ್ಟು ಜನ ಗಾಯಗೊಂಡಿದ್ದು, ಕೆಲವರು ಪ್ರಾಣವನ್ನೂ ಬಿಟ್ಟಿರುವ ಘಟನೆಗಳು ನಡೆದಿವೆ ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ ಪ್ರಶ್ನಿಸಿದರು.

ಕಷ್ಟ ಕಾಲದಲ್ಲಿ ಲಾಭ ಮಾಡಿಕೊಳ್ಳುವ ಹುನ್ನಾರ: ರಾಹುಲ್ ಗಾಂಧಿ ವಾಗ್ದಾಳಿಕಷ್ಟ ಕಾಲದಲ್ಲಿ ಲಾಭ ಮಾಡಿಕೊಳ್ಳುವ ಹುನ್ನಾರ: ರಾಹುಲ್ ಗಾಂಧಿ ವಾಗ್ದಾಳಿ

ರಾಜ್ಯ ಸಭೆಯ ಹಿರಿಯ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ ಅವರ ಪ್ರಶ್ನೆಗೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ. ಕೃಷ್ಣಾ ರೆಡ್ಡಿ ಲಿಖಿತ ಉತ್ತರ ನೀಡಿದ್ದಾರೆ. ಪೊಲೀಸರಿಂದ ಹಲ್ಲೆ, ಸಾರ್ವಜನಿಕರಿಗೆ ಗಾಯ ಮತ್ತು ಸಾವಿನ ಬಗ್ಗೆ ಯಾವುದೇ ದಾಖಲೆಗಳಿಲ್ಲ. ದೂರುಗಳು ಬಂದಿಲ್ಲ ಮತ್ತು ಎಫ್ಐಆರ್ ಕೂಡಾ ದಾಖಲಾಗಿಲ್ಲ ಎಂದು ಉತ್ತರದಲ್ಲಿ ಉಲ್ಲೇಖಿಸಲಾಗಿದೆ.

No data Of Alleged Police Harassment During Coroanvirus Lockdown Maintained By Centre: MHA

ರಾಜ್ಯ ಸರ್ಕಾರಗಳಿಂದ ಕ್ರಮ:

Recommended Video

Diganth ಹಾಗು Aindrita Ray ಮೊದಲ ದಿನದ ವಿಚಾರಣೆ ಹೇಗಾಯ್ತು | Oneindia Kannada

"ಭಾರತೀಯ ಸಂವಿಧಾನದ 7ನೇ ವಿಧ ಅಡಿಯಲ್ಲಿ ಪೊಲೀಸ್ ಮತ್ತು ಸಾರ್ವಜನಿಕ ವಿಚಾರವು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸೇರಿರುತ್ತದೆ. ಹೀಗಾಗಿ ಕ್ರಮ ತೆಗೆದುಕೊಳ್ಳುವ ತೀರ್ಮಾನವನ್ನು ಆಯಾ ರಾಜ್ಯ ಸರ್ಕಾರಗಳಿಗೆ ವಹಿಸಲಾಗಿದೆ ಎಂದು ಸಚಿವ ಜಿ. ಕೃಷ್ಣಾ ರೆಡ್ಡಿ ತಿಳಿಸಿದ್ದಾರೆ. ಅಲ್ಲದೇ ಇಂಥ ದೂರುಗಳಿಗೆ ಸಂಬಂಧಿಸಿದ ಪ್ರಕರಣಗಳು ಮತ್ತು ಎಫ್ಐಆರ್ ಬಗ್ಗೆ ಕೇಂದ್ರವು ನಿರ್ವಹಿಸುವುದಕ್ಕೆ ಆಗುವುದಿಲ್ಲ ಎಂದು ತಿಳಿಸಲಾಗಿದೆ.

English summary
No data Of Alleged Police Harassment During Coroanvirus Lockdown Maintained By Centre: MHA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X