• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ರೋಹಿಂಗ್ಯಾಗಳಿಗೆ ಫ್ಲ್ಯಾಟ್ ಇಲ್ಲ' ಸಚಿವರ ಟ್ವೀಟ್‌ಗೆ ಉಲ್ಟಾ ಹೊಡೆದ ಕೇಂದ್ರ

|
Google Oneindia Kannada News

ನವದೆಹಲಿ ಆಗಸ್ಟ್ 17: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮ್ಯಾನ್ಮಾರ್‌ನಿಂದ ಬಂದಿರುವ ರೋಹಿಂಗ್ಯಾ ನಿರಾಶ್ರಿತರಿಗೆ ಮನೆಗಳು ಮತ್ತು ಭದ್ರತೆಯನ್ನು ಘೋಷಿಸಿ ಟ್ವೀಟ್ ಮಾಡಿದ ಗಂಟೆಗಳ ನಂತರ ರೋಹಿಂಗ್ಯಾಗಳಿಗೆ ಫ್ಲ್ಯಾಟ್ ಇಲ್ಲ ಎಂದು ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ. ಇದರಿಂದ ನಿರಾಶ್ರಿತರು ನಿರಾಸೆಗೊಂಡಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್‌ ಅನ್ನು ಸ್ವಂತ ಸರ್ಕಾರವೇ ವಿರೋಧಿಸಿದೆ. "ರೋಹಿಂಗ್ಯಾ ನಿರಾಶ್ರಿತರಿಗೆ" ಅಂತಹ ಯಾವುದೇ ಪ್ರಯೋಜನಗಳನ್ನು ಘೋಷಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ಸರ್ಕಾರ ಮಯನ್ಮಾರ್‌ ದೇಶದ ರೊಹಿಂಗ್ಯಾ ನಿರಾಶ್ರಿತರಿಗೆ ದೆಹಲಿಯಲ್ಲಿ ಆಶ್ರಯ ಕೊಡುವ ನಿರ್ಧಾರ ಮಾಡಿದೆ. ದೆಹಲಿಯ ಬಕ್ಕರ್ವಾಲಾ ಪ್ರದೇಶದಲ್ಲಿ ಸೆಕ್ಯುರಿಟಿ ಸಮೇತ ಫ್ಲಾಟ್‌ಗಳನ್ನು ನೀಡಲು ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ ಮಾಹಿತಿ ನೀಡಿದ್ದು, ಇದೊಂದು ಐತಿಹಾಸಿಕ ನಿರ್ಣಯ ಎಂದು ಕರೆದಿದ್ದಾರೆ. "ಭಾರತ ಯಾವಾಗಲೂ ನಿರಾಶ್ರಿತರಿಗೆ ಆಶ್ರಯ ಕೊಟ್ಟಿದೆ. ಬೇರೆ ದೇಶಗಳಿಂದ ಆಶ್ರಯ ಅರಸಿ ಬಂದವರನ್ನು ಸ್ವಾಗತಿಸಿದೆ. ರೊಹಿಂಗ್ಯಾ ನಿರಾಶ್ರಿತರಿಗೆ ಫ್ಲಾಟ್‌ ಕೊಡಲು ನಿರ್ಧರಿಸಿದ್ದೇವೆ. ಇದೊಂದು ಐತಿಹಾಸಿಕ ನಿರ್ಣಯ," ಎಂದು ಸಚಿವ ಪುರಿ ಹೇಳಿದ್ದಾರೆ.

Breaking: ಬಿಜೆಪಿ ಕೇಂದ್ರ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದ ಬಿಎಸ್ ಯಡಿಯೂರಪ್ಪBreaking: ಬಿಜೆಪಿ ಕೇಂದ್ರ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದ ಬಿಎಸ್ ಯಡಿಯೂರಪ್ಪ

ಸಚಿವರ ಟ್ವೀಟ್‌ಗೆ ಉಲ್ಟಾ ಹೊಡೆದ ಕೇಂದ್ರ

ಸಚಿವರ ಟ್ವೀಟ್‌ಗೆ ಉಲ್ಟಾ ಹೊಡೆದ ಕೇಂದ್ರ

ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಇಲಾಖೆ, ಆ ರೀತಿಯ ನಿರ್ಧಾರ ಮಾಡಿಲ್ಲ ಎಂದಿದೆ. ಈ ಮೂಲಕ ಹರ್ದೀಪ್‌ ಸಿಂಗ್‌ ಪುರಿಯವರಿಗೆ ಭಾರಿ ಮುಖಭಂಗವಾಗಿದೆ. ಅವರಿಗೆ ಮುಜುಗರವಾಗುವಂತೆ ಗೃಹ ಇಲಾಖೆ ಸ್ಪಷ್ಟೀಕರಣ ಬಂದಿದೆ.

ರೋಹಿಂಗ್ಯಾ ಮುಸ್ಲಿಮರ ನೆಲೆಯು ಭಾರತದಲ್ಲಿ ಧ್ರುವೀಕರಣದ ವಿಷಯವಾಗಿದೆ. ಅಲ್ಲಿ ಆಡಳಿತಾರೂಢ ಬಿಜೆಪಿಯ ನಾಯಕರು ಹಿಂದೂ ಬಹುಸಂಖ್ಯಾತ ಮತಗಳನ್ನು ಹೆಚ್ಚಿಸಲು ಅವರನ್ನು ಆಗಾಗ್ಗೆ ಗುರಿಯಾಗಿಸಿಕೊಂಡಿದ್ದಾರೆ. ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರೂ ಅವರ ವಿರುದ್ಧ ಕಾಮೆಂಟ್ ಮಾಡಿದ್ದಾರೆ.

ದೇಶದ ಭದ್ರತೆಗೆ ಕಂಟಕ

ದೇಶದ ಭದ್ರತೆಗೆ ಕಂಟಕ

ದೆಹಲಿಯಲ್ಲಿ ರೋಹಿಂಗ್ಯಾ ಮುಸ್ಲಿಮರಿಗೆ EWS ಫ್ಲಾಟ್‌ಗಳನ್ನು ಒದಗಿಸಲು ಯಾವುದೇ ನಿರ್ದೇಶನವನ್ನು ನೀಡಿಲ್ಲ ಎಂದು ಗೃಹ ಸಚಿವಾಲಯ (MHA) ಬುಧವಾರ ಸ್ಪಷ್ಟಪಡಿಸಿದೆ ಮತ್ತು ಅಕ್ರಮ ವಿದೇಶಿಗರು ಅವರ ಪ್ರಸ್ತುತ ಸ್ಥಳದಲ್ಲಿಯೇ ಇರುವುದನ್ನು ಖಚಿತಪಡಿಸಿಕೊಳ್ಳಲು ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಕೇಳಿದೆ.

ಮಯನ್ಮಾರಿನಲ್ಲಿ ನೆಲೆಯಿಲ್ಲದೇ ನಿರಾಶ್ರಿತರಾಗಿ ಅತಂತ್ರ ಪರಿಸ್ಥಿತಿ ಎದುರಿಸುತ್ತಿರುವ ರೋಹಿಂಗ್ಯಾ ಮುಸಲ್ಮಾನರಿಗೆ ಭಾರತದಲ್ಲಿ ಆಶ್ರಯ ನೀಡುವುದು ದೇಶದ ಭದ್ರತೆಗೆ ಕಂಟಕವಾಗಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಸುಪ್ರೀಂಕೋರ್ಟ್'ಗೆ ಅಫಿಡವಿಟ್ ಸಲ್ಲಿಸಿತ್ತು. ರೋಹಿಂಗ್ಯಾ ನಿರಾಶ್ರಿತರು ಪಾಕಿಸ್ತಾನದ ಐಸಿಎಸ್ ಜೊತೆ ಸಂಪರ್ಕ ಹೊಂದಿದ್ದಾರೆ. ಇವರನ್ನು ದೇಶದೊಳಗೆ ಇರಲು ಬಿಡುವುದು ದೇಶಕ್ಕೆ ಕಂಟಕವಾಗಲಿದೆ. ಅವರು ಇಲ್ಲಿರುವುದು ಕೂಡಾ ಅಕ್ರಮ ಎಂದು ಕೇಂದ್ರ ಸರ್ಕಾರ ಹೇಳಿತ್ತು.

ಭಾರತದಲ್ಲಿ ರೋಹಿಂಗ್ಯಾಗಳ ಸಂಖ್ಯೆ

ಭಾರತದಲ್ಲಿ ರೋಹಿಂಗ್ಯಾಗಳ ಸಂಖ್ಯೆ

ರೋಹಿಂಗ್ಯಾ ಹಕ್ಕುಗಳ ಕಾರ್ಯಕರ್ತ ಅಲಿ ಜೋಹರ್ ಅವರ ಅಂದಾಜಿನ ಪ್ರಕಾರ, ಈ ವರ್ಷದ ಆರಂಭದಲ್ಲಿ ಸುಮಾರು 1,100 ರೋಹಿಂಗ್ಯಾಗಳು ದೆಹಲಿಯಲ್ಲಿ ಮತ್ತು 17,000 ಜನರು ಭಾರತದಲ್ಲಿ ವಾಸಿಸುತ್ತಿದ್ದರು. ಈ ವರ್ಷ ಸುಮಾರು 2,000 ಜನರು ಬಾಂಗ್ಲಾದೇಶಕ್ಕೆ ಹಿಂತಿರುಗಿದ್ದಾರೆ, ಅನೇಕರನ್ನು ಗಡೀಪಾರು ಮಾಡಲಾಗುವುದು ಎಂಬ ಭಯ ಇದೆ ಎಂದು ಅವರು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದರು.

ಅಕ್ರಮ ವಿದೇಶಿಗರ ಗಡೀಪಾರು

ಅಕ್ರಮ ವಿದೇಶಿಗರ ಗಡೀಪಾರು

ರೋಹಿಂಗ್ಯಾ ಮುಸ್ಲಿಮರನ್ನು ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ದೆಹಲಿ ಸರ್ಕಾರದ ಉದ್ದೇಶಿತ ಕ್ರಮದ ಕುರಿತು, MHA ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ರೊಹಿಂಗ್ಯಾ ಅಕ್ರಮ ವಿದೇಶಿಗರು ಅವರ ಗಡೀಪಾರು ಮಾಡುವ ವಿಷಯವನ್ನು ಈಗಾಗಲೇ ಕೈಗೆತ್ತಿಕೊಂಡಿರುವ ಕಾರಣ ಅವರ ಪ್ರಸ್ತುತ ಸ್ಥಳದಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು ಎಂದಿದೆ. ಕಾನೂನು ಪ್ರಕಾರ ಅಕ್ರಮ ವಿದೇಶಿಗರನ್ನು ಗಡಿಪಾರು ಮಾಡುವವರೆಗೆ ಬಂಧನ ಕೇಂದ್ರದಲ್ಲಿ ಇರಿಸಲಾಗುವುದು. ದೆಹಲಿ ಸರ್ಕಾರವು ಪ್ರಸ್ತುತ ಸ್ಥಳವನ್ನು ಬಂಧನ ಕೇಂದ್ರವೆಂದು ಘೋಷಿಸಿಲ್ಲ. ತಕ್ಷಣವೇ ಅದೇ ರೀತಿ ಮಾಡಲು ಅವರಿಗೆ ನಿರ್ದೇಶನ ನೀಡಲಾಗಿದೆ.

English summary
Hours after Union Minister Hardeep Singh Puri tweeted announcing houses and security for Rohingya refugees from Myanmar, the central government has hit back saying the Rohingyas have no flats
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X