ಸಿದ್ದರಾಮಯ್ಯ ಮನವೊಲಿಕೆ ಅವಶ್ಯಕತೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಜೂನ್ 29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಕೆಯ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನವದೆಹಲಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಮೈತ್ರಿ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅವರ ಮನವೊಲಿಕೆ ಮಾಡುವಂತೆ ನನಗೆ ಯಾರೂ ಹೇಳಿಲ್ಲ. ಅಲ್ಲದೆ, ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಮನವೊಲಿಕೆ ಮಾಡುವ ಅಗತ್ಯವೂ ಇಲ್ಲ.

ಸಿದ್ದರಾಮಯ್ಯ ಅವರಿಗೆ ಸಾಕಷ್ಟು ಅನುಭವವಿದೆ. ಅವರಿಗೆ ರಾಜ್ಯದ ಎಲ್ಲ ಬೆಳವಣಿಗೆಗಳ ಬಗ್ಗೆ ಚೆನ್ನಾಗಿ ಗೊತ್ತಿದೆ. ಅವರು ಸರ್ಕಾರದ ವಿರುದ್ಧ ಮುನಿಸಿಕೊಂಡಿಲ್ಲ. ಉಜಿರೆಗೆ ಹೋದಾಗ ಅವರ ಬಗ್ಗೆ ಅನೇಕ ಊಹಾಪೋಹಗಳು ಸೃಷ್ಟಿಯಾಗಿವೆ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.

no need to convice siddaramaiah: kharge

ಅವಧಿಗೆ ಮುನ್ನವೇ ಚುನಾವಣೆ:
ಲೋಕಸಭೆ ಚುನಾವಣೆಯು ಅವಧಿಗೆ ಮುನ್ನವೇ ನಡೆಯಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ.

ಈ ವರ್ಷವೇ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ನವೆಂಬರ್‌ನಲ್ಲಿ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿವೆ. ಈ ವೇಳೆಯಲ್ಲಿಯೇ ಲೋಕಸಭೆ ಚುನಾವಣೆಯನ್ನು ಸಹ ಎದುರಿಸಲು ಬಿಜೆಪಿ ಸರ್ಕಾರ ಬಯಸಿದೆ ಎಂದು ಖರ್ಗೆ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಅವರೂ ಸಹ ಅವಧಿಗೆ ಮುನ್ನವೇ ಚುನಾವಣೆ ಎದುರಾಗುವ ಕುರಿತು ಗುರುವಾರ ಹೇಳಿಕೆ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+