ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಹೊಸ ಮುಖಗಳಿಲ್ಲ!

|
Google Oneindia Kannada News

Recommended Video

ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಹೊಸ ಮುಖಗಳಿಲ್ಲ! | Oneindia Kannada

ನವದೆಹಲಿ, ಫೆಬ್ರವರಿ 14: ವಿಧಾನಸಭೆ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಗೆದ್ದು ಬೀಗುತ್ತಿರುವ ಅರವಿಂದ ಕೇಜ್ರಿವಾಲ್ ಅವರು ತಮ್ಮ ಹಳೆಯ ಸಂಪುಟವನ್ನೇ ಈ ಅವಧಿಗೂ ಮುಂದುವರೆಸಲಿದ್ದಾರೆ.

ಕಳೆದ ಅವಧಿಯಲ್ಲಿ ಮಂತ್ರಿಗಳಾಗಿದ್ದ ತಮ್ಮ ಸಹವರ್ತಿಗಳನ್ನೇ ಈ ಅವಧಿಗೂ ಅರವಿಂದ ಕೇಜ್ರಿವಾಲ್ ನೆಚ್ಚಿಕೊಂಡಿದ್ದಾರೆ. ಕಳೆದ ಬಾರಿ ಉತ್ತಮ ಕೆಲಸ ಮಾಡಿ ದೆಹಲಿ ಬದಲಾವಣೆಗೆ ಕಾರಣವಾದವರನ್ನೇ ಈ ಬಾರಿಯೂ ಉಳಿಸಿಕೊಳ್ಳುವುದು ಉತ್ತಮ ಎಂದು ಅರವಿಂದ ಕೇಜ್ರಿವಾಲ್ ಯೋಚಿಸಿದ್ದಾರೆ.

ಕೇಜ್ರಿವಾಲ್ ಕ್ಯಾಬಿನೆಟ್ಟಿಗೆ ಎಎಪಿ ಪ್ರಮುಖರಾದ ಆತಿಶಿ, ಛಡ್ಡಾ ಇಲ್ಲ? ಕೇಜ್ರಿವಾಲ್ ಕ್ಯಾಬಿನೆಟ್ಟಿಗೆ ಎಎಪಿ ಪ್ರಮುಖರಾದ ಆತಿಶಿ, ಛಡ್ಡಾ ಇಲ್ಲ?

ಮನೀಷ್ ಸಿಸೋಡಿಯಾ, ಸತ್ಯೇಂದರ್ ಜೈನ್, ಗೋಪಾಲ್ ರಾಯ್, ಕೈಲಾಶ್ ಗಹಲೋಟ್, ಇಮ್ರಾನ್ ಹುಸೇನ್ ಮತ್ತು ರಾಜೇಂದ್ರ ಪಾಲ್ ಗೌತಮ್ ಅರವಿಂದ ಕೇಜ್ರಿವಾಲ್ ಸಂಪುಟದ ಸಚಿವರಾಗಲಿದ್ದಾರೆ.

No New Face In Delhi CM Arvind Kejriwals Cabinet

ಫೆಬ್ರವರಿ 16 ರ ಭಾನುವಾರ ಅರವಿಂದ ಕೇಜ್ರಿವಾಲ್ ಅವರು ಸಿಎಂ ಆಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅದೇ ದಿನ ಸಂಪುಟದ ಸಚಿವರೂ ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಹೊಸದಾಗಿ ವಿಧಾನಸಭೆಗೆ ಆಯ್ಕೆ ಆಗಿರುವ ಆತಿಶಿ ಅವರಿಗೆ ಈ ಬಾರಿ ಸಂಪುಟದಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ ಅವರಿಗೆ ಅವಕಾಶ ನೀಡುವ ಸಂಭವ ವಿರಳ. ಅವರಿಗೆ ಅವಕಾಶ ನೀಡಬೇಕು ಎಂಬ ಕೂಗು ಸಹ ಪಕ್ಷದಲ್ಲಿ ಕೇಳಿ ಬಂದಿದೆ.

English summary
Delhi CM Arvind Kejriwal likley to retain his old cabinet which were worked good. Arvind Kejriwal will take on February 16 as CM of Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X