ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾದರೆ ಅಭ್ಯಂತರವಿಲ್ಲ: ದೇವೇಗೌಡ
Recommended Video

ಬೆಂಗಳೂರು, ಜು.23: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾದರೆ ನಮ್ಮ ಅಭ್ಯಂತರವೇನೂ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಇದೇ ರೀತಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದೆ, ಈ ಮೈತ್ರಿ ಲೋಕಸಭೆ ಚುನಾವಣೆಗೂ ಮುಂದುವರೆಯಲಿದೆ, ಮುಂದಿನ ಅವಧಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ಪ್ರಧಾನಿ ಅಭ್ಯರ್ಥಿಯಾದರೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ದೆಹಲಿಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಸಿಡಬ್ಲುಸಿ ಸಭೆಯಲ್ಲಿ ಕಾಂಗ್ರೆಸ್ನಿಂದ ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿ ಎಂದು ನಿರ್ಧಾರ ಮಾಡಲಾಗಿತ್ತು. ಆದರೆ, ಈ ನಿರ್ಣಯವನ್ನು ಮಿತ್ರಪಕ್ಷಗಳು ಬೆಂಬಲಿಸುತ್ತವಾ? ವಿರೋಧ ವ್ಯಕ್ತಪಡಿಸುತ್ತವಾ ಎಂಬ ಅನುಮಾನವೂ ಇತ್ತು. ಅದಕ್ಕೆಲ್ಲ ತೆರೆ ಎಳೆದಿರುವ ಹಿರಿಯ ರಾಜಕಾರಣಿ ಮತ್ತು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡರು ಜೆಡಿಎಸ್ನ ಬೆಂಬಲವನ್ನು ಕಾಂಗ್ರೆಸ್ಗೆ ನೀಡಿದ್ದಾರೆ.

ಮಹಾಮೈತ್ರಿಯಲ್ಲಿ ಅತ್ಯಂತ ಹಿರಿಯ ರಾಜಕಾರಣಿ ಮತ್ತು ಮಾಜಿ ಪ್ರಧಾನಿಯೂ ಆಗಿರುವ ದೇವೇಗೌಡರೇ ಮುಂದಿನ ಪ್ರಧಾನಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳೊಂದಿಗೆ ಸೇರಿ ಕಣಕ್ಕಿಳಿಯುವ ಮೂಲಕ ತೃತೀಯರಂಗದ ಪಕ್ಷಗಳು ಒಗ್ಗಟ್ಟಾಗಿ ಎನ್ಡಿಎ ವಿರುದ್ಧ ನಿಲ್ಲಲು ತಂತ್ರ ರೂಪಿಸಿದ್ದವು.
ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗುವುದಕ್ಕೂ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಯಾವುದೇ ಸಂದರ್ಭದಲ್ಲಿ ಧಕ್ಕೆಯಾಗುವುದಿಲ್ಲ ಎಂದರು.












Click it and Unblock the Notifications