ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್‌ ಗಾಂಧಿ ಪ್ರಧಾನಿ ಅಭ್ಯರ್ಥಿಯಾದರೆ ಅಭ್ಯಂತರವಿಲ್ಲ: ದೇವೇಗೌಡ

By Nayana
|
Google Oneindia Kannada News

Recommended Video

ರಾಹುಲ್‌ ಗಾಂಧಿ ಪ್ರಧಾನಿಯಾಗೋಬಗ್ಗೆ ಗೌಡ್ರು ಹೇಳಿದ್ದೇನು ? | Oneindia Kannada

ಬೆಂಗಳೂರು, ಜು.23: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾದರೆ ನಮ್ಮ ಅಭ್ಯಂತರವೇನೂ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಇದೇ ರೀತಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರವಿದೆ, ಈ ಮೈತ್ರಿ ಲೋಕಸಭೆ ಚುನಾವಣೆಗೂ ಮುಂದುವರೆಯಲಿದೆ, ಮುಂದಿನ ಅವಧಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಪ್ರಧಾನಿ ಅಭ್ಯರ್ಥಿಯಾದರೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ದೆಹಲಿಯಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರೇ ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿರಾಹುಲ್ ಗಾಂಧಿಯವರೇ ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿ

ಈಗಾಗಲೇ ಸಿಡಬ್ಲುಸಿ ಸಭೆಯಲ್ಲಿ ಕಾಂಗ್ರೆಸ್​ನಿಂದ ರಾಹುಲ್​ ಗಾಂಧಿಯೇ ಪ್ರಧಾನಿ ಅಭ್ಯರ್ಥಿ ಎಂದು ನಿರ್ಧಾರ ಮಾಡಲಾಗಿತ್ತು. ಆದರೆ, ಈ ನಿರ್ಣಯವನ್ನು ಮಿತ್ರಪಕ್ಷಗಳು ಬೆಂಬಲಿಸುತ್ತವಾ? ವಿರೋಧ ವ್ಯಕ್ತಪಡಿಸುತ್ತವಾ ಎಂಬ ಅನುಮಾನವೂ ಇತ್ತು. ಅದಕ್ಕೆಲ್ಲ ತೆರೆ ಎಳೆದಿರುವ ಹಿರಿಯ ರಾಜಕಾರಣಿ ಮತ್ತು ಜೆಡಿಎಸ್​ ರಾಷ್ಟ್ರಾಧ್ಯಕ್ಷ ಹೆಚ್​.ಡಿ. ದೇವೇಗೌಡರು ಜೆಡಿಎಸ್​ನ ಬೆಂಬಲವನ್ನು ಕಾಂಗ್ರೆಸ್​ಗೆ ನೀಡಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷರ ನೇಮಕ: ದೇವೇಗೌಡರ ಚಾಣಕ್ಷತನಕ್ಕೆ ಸವಾಲು ಜೆಡಿಎಸ್ ರಾಜ್ಯಾಧ್ಯಕ್ಷರ ನೇಮಕ: ದೇವೇಗೌಡರ ಚಾಣಕ್ಷತನಕ್ಕೆ ಸವಾಲು

No objection from Devegowda for Rahul PM candidature

ಮಹಾಮೈತ್ರಿಯಲ್ಲಿ ಅತ್ಯಂತ ಹಿರಿಯ ರಾಜಕಾರಣಿ ಮತ್ತು ಮಾಜಿ ಪ್ರಧಾನಿಯೂ ಆಗಿರುವ ದೇವೇಗೌಡರೇ ಮುಂದಿನ ಪ್ರಧಾನಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳೊಂದಿಗೆ ಸೇರಿ ಕಣಕ್ಕಿಳಿಯುವ ಮೂಲಕ ತೃತೀಯರಂಗದ ಪಕ್ಷಗಳು ಒಗ್ಗಟ್ಟಾಗಿ ಎನ್​ಡಿಎ ವಿರುದ್ಧ ನಿಲ್ಲಲು ತಂತ್ರ ರೂಪಿಸಿದ್ದವು.

ಜೆಡಿಎಸ್‌ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ: ಎಚ್‌ಡಿ ದೇವೇಗೌಡ ಜೆಡಿಎಸ್‌ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ: ಎಚ್‌ಡಿ ದೇವೇಗೌಡ

ಯಾವುದೇ ಕಾರಣಕ್ಕೂ ರಾಹುಲ್‌ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗುವುದಕ್ಕೂ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಯಾವುದೇ ಸಂದರ್ಭದಲ್ಲಿ ಧಕ್ಕೆಯಾಗುವುದಿಲ್ಲ ಎಂದರು.

English summary
Former prime minister HD Devegowda announces that his party has no objection to declare Rahul Gandhi as Congress prime ministerial face.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X