• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ: ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

|
Google Oneindia Kannada News

ನವದೆಹಲಿ, ಮಾರ್ಚ್ 15: ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತರುವ ಕುರಿತು ಸಾಕಷ್ಟು ದಿನಗಳಿಂದ ಚರ್ಚೆ ನಡೆಯುತ್ತಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಯಾವುದೇ ಕಾರಣಕ್ಕೂ ಪೆಟ್ರೋಲ್ ಹಾಗೂ ಡೀಸೆಲ್‌ನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಿಲ್ಲ ಎಂದಿದ್ದಾರೆ.

ಇಂಧನ ಬೆಲೆ ಏರಿಕೆ ತಾತ್ಕಾಲಿಕ ಧರ್ಮೇಂದ್ರ ಪ್ರಧಾನ್ ಪುನರುಚ್ಚಾರಇಂಧನ ಬೆಲೆ ಏರಿಕೆ ತಾತ್ಕಾಲಿಕ ಧರ್ಮೇಂದ್ರ ಪ್ರಧಾನ್ ಪುನರುಚ್ಚಾರ

ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ಉತ್ತರದೊಂದಿಗೆ ಮಾತನಾಡಿರುವ ನಿರ್ಮಲಾ ಸೀತಾರಾಮನ್, ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್, ಜೆಟ್ ಇಂಧನ ಹಾಗೂ ನೈಸರ್ಗಿಕ ಅನಿಲಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರುವ ಪ್ರಸ್ತಾವನೆ ಈ ವರೆಗೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

5 ತೈಲಗಳು ಜಿಎಸ್‌ಟಿಯಿಂದ ಹೊರಕ್ಕೆ

5 ತೈಲಗಳು ಜಿಎಸ್‌ಟಿಯಿಂದ ಹೊರಕ್ಕೆ

2017 ರಲ್ಲಿ ಜಿಎಸ್ ಟಿ ಜಾರಿಗೆ ತಂದಾಗ, 5 ತೈಲಗಳನ್ನು ಜಿಎಸ್ ಟಿ ವ್ಯಾಪ್ತಿಯಿಂದ ಹೊರಗೆ ಇಟ್ಟು, ರಾಜ್ಯ, ಕೇಂದ್ರ ಸರ್ಕಾರಗಳ ಆದಾಯಕ್ಕೆ ಇವುಗಳಿಂದ ದಾರಿ ಮಾಡಿಕೊಡಲಾಗಿತ್ತು.

ಅಬಕಾರಿ ಸುಂಕದ ಬಗ್ಗೆ ಮಾಹಿತಿ

ಅಬಕಾರಿ ಸುಂಕದ ಬಗ್ಗೆ ಮಾಹಿತಿ

ಪ್ರತ್ಯೇಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಕಳೆದ ವರ್ಷ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 19.98 ರೂಪಾಯಿಗಳಷ್ಟು ಇತ್ತು. ಈ ವರ್ಷ ಅದು 32.9 ರೂಪಾಯಿಗಳಾಗಿದೆ ಎಂಬ ಮಾಹಿತಿ ನೀಡಿದ್ದಾರೆ. ಅದೇ ರೀತಿ ಕಳೆದ ವರ್ಷ 15.83 ರಷ್ಟಿದ್ದ ಡೀಸೆಲ್ ಮೇಲಿನ ಅಬಕಾರಿ ಸುಂಕ ಈ ವರ್ಷ 31.8 ರಷ್ಟಾಗಿದೆ ಎಂದು ತಿಳಿಸಿದ್ದಾರೆ.

ವ್ಯಾಟ್ ವಿಧಿಸುವುದಕ್ಕೆ ಅವಕಾಶವಿದೆ

ವ್ಯಾಟ್ ವಿಧಿಸುವುದಕ್ಕೆ ಅವಕಾಶವಿದೆ

ತೈಲವನ್ನು ಜಿಎಸ್ ಟಿ ವ್ಯಾಪ್ತಿಗೆ ತರದೇ ಇರುವುದರಿಂದ ಪೆಟ್ರೋಲ್, ಡೀಸೆಲ್ ಮುಂತಾದವುಗಳ ಮೇಲೆ ಕೇಂದ್ರ ಸರ್ಕಾರ ಅಬಕಾರಿ ಸುಂಕ ವಿಧಿಸಲು ಅವಕಾಶವಿದ್ದರೆ, ವ್ಯಾಟ್ ನ್ನು(ಮೌಲ್ಯ ವರ್ಧಿತ ತೆರಿಗೆ) ವಿಧಿಸುವುದಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶವಿದೆ. ಈ ತೆರಿಗೆಗಳಿಂದಾಗಿ ತೈಲ ದರ ಗಗನಕ್ಕೇರುತ್ತಿದೆ.

ಪೆಟ್ರೋಲ್, ಡೀಸೆಲ್ ದರವನ್ನು ಜಿಎಸ್‌ಟಿಗೆ ತರಬೇಕೆಂದು ಒತ್ತಾಯ

ಪೆಟ್ರೋಲ್, ಡೀಸೆಲ್ ದರವನ್ನು ಜಿಎಸ್‌ಟಿಗೆ ತರಬೇಕೆಂದು ಒತ್ತಾಯ

ಒಂದೆಡೆ ರಾಜ್ಯ, ಕೇಂದ್ರ ಸರ್ಕಾರಗಳು ಹಾಕುತ್ತಿರುವ ತೆರಿಗಳನ್ನು ಇಳಿಕೆ ಮಾಡುತ್ತಿಲ್ಲ ಮತ್ತೊಂದೆಡೆ, ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದೆ. ತತ್ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ದರಗಳು ಸಾರ್ವಕಾಲಿಕ ದಾಖಲೆಯ ಏರಿಕೆ ಕಾಣುತ್ತಿದ್ದು, ಇವುಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕೆಂಬ ಒತ್ತಾಯ ಹೆಚ್ಚುತ್ತಿದೆ. ತೈಲವನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕೆಂದರೆ ಜಿಎಸ್ ಟಿ ಪರಿಷತ್ ಶಿಫಾರಸು ಕಳಿಸಬೇಕು. ಜಿಎಸ್ ಟಿ ಪರಿಷತ್ ನಲ್ಲಿ ರಾಜ್ಯಸರ್ಕಾರಗಳೂ ಪ್ರತಿನಿಧಿಗಳಾಗಿದ್ದು, ಈ ವರೆಗೂ ಅಂತಹ ಶಿಫಾರಸು ಬಂದಿಲ್ಲ, ಮುಂದೆ ಪ್ರಸ್ತಾವನೆ ಬಂದರೂ ಬರಬಹುದು ಎಂದು ನಿರ್ಮಲಾ ಸೀತಾರಾಮನ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

English summary
Finance Minister Nirmala Sitharaman on Monday said that there is no proposal at present to bring crude petroleum, petrol, diesel, ATF and natural gas under Goods and Services Tax (GST).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X