ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೌರತ್ವ ತಿದ್ದುಪಡಿ ಕಾನೂನಿಗೆ ತಡೆ ನೀಡುವುದಿಲ್ಲ: ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಡಿಸೆಂಬರ್ 18: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನು ಸಿಂಧುತ್ವ ಪ್ರಶ್ನಿಸಿ, ದೇಶದ ಕೆಲ ರಾಜಕೀಯ ಪಕ್ಷಗಳು ಹಾಗೂ ಕೆಲ ಸಂಘಟನೆಗಳು ಸುಪ್ರೀಂಕೋರ್ಟ ಗೆ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ತ್ರಿ ಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನಿಗೆ ತಡೆ ನೀಡಲು ಸುಪ್ರೀಂಕೋರ್ಟ ನಿರಾಕರಿಸಿದ್ದು, ಈ ಕುರಿತು ಸಿಂಧುತ್ವ ಪ್ರಶ್ನಿಸಿ, ದೇಶದ ಕೆಲ ರಾಜಕೀಯ ಪಕ್ಷಗಳು ಹಾಗೂ ಕೆಲ ಸಂಘಟನೆಗಳು ಸುಪ್ರೀಂಕೋರ್ಟ ಗೆ ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಈ ಕುರಿತು ಜನವರಿ ಹೆಚ್ಚಿನ ವಿಚಾರಣೆಯನ್ನು ಜನೇವರಿ 22 ಕ್ಕೆ ಮುಂದೂಡಿದೆ. ಪೀಠದಲ್ಲಿ ಇನ್ನಿಬ್ಬರು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಹಾಗೂ ಸೂರ್ಯಕಾಂತ್ ಇದ್ದರು.

ಪೌರತ್ವ ಕಾಯ್ದೆ ವಿರೋಧಿ ಹೋರಾಟದ ಬಗ್ಗೆ 'ನಮೋ' ಮಾತುಪೌರತ್ವ ಕಾಯ್ದೆ ವಿರೋಧಿ ಹೋರಾಟದ ಬಗ್ಗೆ 'ನಮೋ' ಮಾತು

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನು ಖಂಡಿಸಿ ದೇಶಾದ್ಯಂತ ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದು, ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು 59 ಅರ್ಜಿಗಳು ಸಲ್ಲಿಕೆಯಾಗಿದ್ದವು.

No Stay On Citizenship Act: Supreme Court

ಜಾಮಿಯಾ ಗಲಾಟೆ; ದೆಹಲಿ ಹೈಕೋರ್ಟ್ ವಿಚಾರಣೆ

ಇನ್ನು, ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ಕಳೆದ ಸೋಮವಾರ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಪೊಲೀಸ್ ಹಾಗೂ ವಿದ್ಯಾರ್ಥಿಗಳ ನಡುವಿನ ಘರ್ಷಣೆ ಕುರಿತು ವಿಚಾರಣೆಯನ್ನು ಡಿ.19 ರಂದು ನಡೆಸಲು ದೆಹಲಿ ಹೈಕೋರ್ಟ್ ಒಪ್ಪಿದೆ. ಪೊಲೀಸ್ ಹಾಗೂ ವಿದ್ಯಾರ್ಥಿಗಳ ಗಲಾಟೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಇದನ್ನು ಪರಿಗಣಿಸಿರುವ ಹೈಕೋರ್ಟ ನಾಳೆ ವಿಚಾರಣೆ ನಡೆಸಲಿದೆ.

English summary
Supreme Court 3 Justice Bench Said no Stay on Anti Citizenship Amendment Act. Supreme issues notice to central.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X