ನ.11 ಮಧ್ಯರಾತ್ರಿಯವರೆಗೆ ಟೋಲ್ ಶುಲ್ಕ ಪಾವತಿ ಇಲ್ಲ

Posted By:
Subscribe to Oneindia Kannada

ನವದೆಹಲಿ, ನವೆಂಬರ್, 9: 500ರೂ. ಮತ್ತು 100ರೂ. ಮುಖಬೆಲೆಯ ನೋಟುಗಳ ಚಲಾವಣೆ ರದ್ದುಮಾಡಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲ ಹೆದ್ದಾರಿಗಳಲ್ಲಿರುವ ಟೋಲ್ ಸಂಗ್ರಹ ಕೇಂದ್ರದ್ಲಲಿ ಟೋಲ್ ಪಾವತಿಸುವಂತಿಲ್ಲ ಕೇಂದ್ರ ಭೂ ಸಾರಿಗೆ ಇಲಾಖೆ ತಿಳಿಸಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಅಭಿವೃದ್ಧಿ ಸಚಿವ ನಿತಿನ್ ಗಡ್ಕರಿ ಅವರು "ನ.11 ಮಧ್ಯರಾತ್ರಿಯವರೆಗೆ ದೇಶದ ಹೆದ್ದಾರಿಗಳಲ್ಲಿರುವ ಟೋಲ್ ಕೇಂದ್ರಗಳಲ್ಲಿ ಹಣ ಪಾವತಿಸುವ ಅಗತ್ಯವಿಲ್ಲ" ಎಂದು ತಿಳಿಸಿದ್ದಾರೆ. [ರೂ. 500 - 1000 ನೋಟುಗಳ ರದ್ದತಿ: ಸಾರ್ವಜನಿಕರು ತಿಳಿದುಕೊಳ್ಳಬೇಕಾದ ಅಂಶಗಳೇನು?]

No toll charges on highways till 11th November

ಕಪ್ಪುಹಣ ತಡೆಗೆ ಕೇಂದ್ರ ಸರ್ಕಾರ 500ರೂ. ಹಾಗೂ 1000ರೂ. ಮುಖಬೆಲೆಯ ನೋಟುಗಳ ಮೇಲೆ ನಿಷೇಧ ಹೇರಿರುವುದರಿಂದ, ಕಳ್ಳಮಾರ್ಗಗಳನ್ನು ಹುಡುಕುತ್ತಿರುವ ಕಾಳ ಧನಿಕರು ಟೋಲ್ ಕೇಂದ್ರಗಳಲ್ಲಿ ಹಣ ವಿನಿಮಯ ಮಾಡುವ ಸಾಧ್ಯತೆ ಇರುವುದರಿಂದ ಕೇಂದ್ರ ಭುಸಾರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. [FAQ : ಹಳೇ 500, 1,000 ರುಪಾಯಿ ನೋಟು ಏನು ಮಾಡೋದು?]

ಇನ್ನು ಮಹಾರಾಷ್ಟ್ರ ಸರ್ಕಾರವೂ ಸಹ ನವೆಂಬರ್ 11ರ ವರೆಗೆ ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Nitin Gadkari, minister for Central Road transport,highway and shipping has announced that no toll will be collected on highways til 11th November midnight
Please Wait while comments are loading...