ಸಚಿವರ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಿದ ಪ್ರಧಾನಿ ಮೋದಿ
ನವದೆಹಲಿ, ಮಾರ್ಚ್ 12: ದೇಶದಲ್ಲಿ ಕೊರೊನಾ ವೈರಸ್ (ಕೋವಿಡ್ 19) ಸೋಂಕು ಪತ್ತೆ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.
ತಮ್ಮ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿಗಳು ಯಾವುದೇ ವಿದೇಶ ಪ್ರವಾಸ ಕೈಗೊಳ್ಳುವುದಿಲ್ಲ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ವ್ಯಾಪಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಸಂಸತ್‌ನಲ್ಲಿ ಮೋದಿ ಈ ವಿಷಯ ಪ್ರಸ್ತಾಪಿಸಿದರು.
ಹೋಳಿ ಮಿಲನ್ ಕಾರ್ಯಕ್ರಮದಿಂದ ಹಿಂದೆ ಸರಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ವೈರಸ್ ಸೋಂಕಿನ ಭಯದಿಂದಾಗಿ ಅವರೂ ಕೂಡ ವಿದೇಶ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಯುರೋಪ್‌ನ ಬ್ರೂಸೆಲ್ಸ್‌ನಲ್ಲಿ ನಡೆಯಬೇಕಿದ್ದ ಯೂರೋಪಿನ್ ಯೂನಿಯನ್‌ನ ಶೃಂಗಸಭೆಯಲ್ಲಿ ಮೋದಿ ಪಾಲ್ಗೊಳ್ಳಬೇಕಿತ್ತು. ಆದರೆ, ಜಾಗತಿಕವಾಗಿ ಕೊರೊನಾ ವೈರಸ್ ಸೋಂಕು ತಲ್ಲಣ ಸೃಷ್ಠಿಸಿರುವುದರಿಂದ ತಜ್ಞರ ಸಲಹೆ ಮೇರೆಗೆ ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಪಾಲ್ಗೊಳ್ಳದಿಲು ನಿರ್ಧರಿಸಿದ್ದರು.












Click it and Unblock the Notifications