ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಈ ಬಾರಿ ಸಂಸತ್ ಚಳಿಗಾಲದ ಅಧಿವೇಶನ ಇಲ್ಲ

|
Google Oneindia Kannada News

ನವದೆಹಲಿ, ಡಿಸೆಂಬರ್ 15: ಕೊರೊನಾ ಸೋಂಕಿನ ಭಯದಿಂದಾಗಿ ಈ ಬಾರಿ ಸಂಸತ್ ಚಳಿಗಾಲದ ಅಧಿವೇಶನ ನಡೆಸುವುದಿಲ್ಲ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಜನವರಿಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಸಂಸತ್ ಅಧಿವೇಶನವನ್ನು ಮೊಟಕುಗೊಳಿಸಲು ವಿರೋಧಪಕ್ಷ ನಾಯಕರು ಕೂಡ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಸಂಸತ್ ಚಳಿಗಾಲದ ಅಧಿವೇಶನ ನಡೆಯುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ನೂತನ ಸಂಸತ್ ಭವನ ನಿರ್ಮಾಣವೇಕೆ? ಇಲ್ಲಿದೆ ಉತ್ತರನೂತನ ಸಂಸತ್ ಭವನ ನಿರ್ಮಾಣವೇಕೆ? ಇಲ್ಲಿದೆ ಉತ್ತರ

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಲು ಚಳಿಗಾಲದ ಅಧಿವೇಶನ ನಡೆಸಬೇಕು ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಪತ್ರ ಬರೆದಿದ್ದರು.

No Winter Session Of Parliament Due To COVID-19

ಅವರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿರುವ ಪ್ರಲ್ಹಾದ್ ಜೋಶಿ ಈ ಬಾರಿ ಸಂಸತ್ ಅಧಿವೇಶನ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಎಲ್ಲಾ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಿದ್ದೇನೆ, ಮತ್ತು ಕೊರೊನಾ ಸೋಂಕಿನ ಕಾರಣದಿಂದ ಅಧಿವೇಶನವನ್ನು ಕರೆಯದಿರಲು ಒಮ್ಮತವಿದೆ ಎಂದರು.ಸೆಪ್ಟೆಂಬರ್‌ನಲ್ಲಿ ನಡೆಸ ಮುಂಗಾರು ಅಧಿವೇಶನವು ಕೊರೊನಾ ಸೋಂಕಿನಿಂದಾಗಿ ವಿಳಂಬವಾಗಿತ್ತು.

ಸಂಸತ್ ಆರು ತಿಂಗಳಲ್ಲಿ ಸಭೆ ಸೇರಬೇಕು ಎಂದು ಹೇಳುತ್ತದೆ. ಫೆಬ್ರವರಿ 1 ರಂದು ಬಜೆಟ್ ಮಂಡನೆಯಾಗುವ ಮುಂಚಿತವಾಗಿ ಜನವರಿ ಕೊನೆಯ ವಾರದಲ್ಲಿ ಅಧಿವೇಶನ ನಡೆಯುವ ಸಾಧ್ಯತೆ ಇದೆ.

ಸಾಂಕ್ರಾಮಿಕ ರೋಗವನ್ನು ನಿರ್ವಹಿಸಲು ಚಳಿಗಾಲದ ತಿಂಗಳುಗಳು ಬಹಳ ನಿರ್ಣಾಯಕವಾಗಿವೆ. ಏಕೆಂದರೆ ಈ ಅವಧಿಯಲ್ಲಿ ವಿಶೇಷವಾಗಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಿದೆ ಎಂದು ಹೇಳಿದ್ದಾರೆ.

ಹೊಸ ಸಂಸತ್ ಭವನ ನಿರ್ಮಾಣವಾಗುತ್ತಿದ್ದು, 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದೇ ಭವನದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಭೂಮಿ ಪೂಜೆ ನಂತರ ಕೆಲವೇ ದಿನಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ.

ಹೊಸ ಸಂಸತ್ ಭವನದಲ್ಲಿ ಲೋಕಸಭೆಯ ಚೇಂಬರ್‌ನಲ್ಲಿ ಈ ಗಿರುವ 543 ಆಸನಗಳ ಬದಲು 888 ಆಸನಗಳು ಹಾಗೂ ರಾಜ್ಯಸಭೆ ಚೇಂಬರ್‌ನಲ್ಲಿ ಈಗಿರುವ 245 ಆಸನಗಳ ಬದಲು 384 ಆಸನಗಳಿರಲಿವೆ. ಜಂಟಿ ಸಮಾವೇಶ ನಡೆಸಲು ಹೆಚ್ಚು ಆಸನಗಳ ಸಭಾಂಗಣ ನಿರ್ಮಾಣವಾಗಲಿದೆ. ಇಡೀ ಕಟ್ಟಡ ಭೂಕಂಪ ನಿರೋಧಕ ಶಕ್ತಿ ಹೊಂದಿರಲಿದೆ.

English summary
There will be no winter session of Parliament this time because of the coronavirus outbreak, the government has said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X