ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Yes Bank; ವಿಚಿತ್ರವಾಗಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ!

|
Google Oneindia Kannada News

ನವದೆಹಲಿ, ಮಾರ್ಚ್ 7: ದೇಶದ ಬ್ಯಾಂಕಿಂಗ್ ವಲಯದಲ್ಲಿ ಸಂಚಲನ ಮೂಡಿಸಿರುವ ಯೆಸ್ ಬ್ಯಾಂಕ್ ಆರ್ಥಿಕ ಸಂಕಷ್ಟದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಿತ್ರವಾಗಿ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಡಿ ಕಾರಿದ್ದಾರೆ.

ಹೌದು, ಯೆಸ್ ಬ್ಯಾಂಕ್ ಬದಲು No Bank ಎಂಬ ಟ್ವಿಟ್ಟರ್ #ಟ್ಯಾಗ್‌ನ್ನು ರಾಹುಲ್ ಗಾಂಧಿ ಆರಂಭಿಸಿದ್ದಾರೆ. "ನೋ ಯೆಸ್ ಬ್ಯಾಂಕ್, ಮೋದಿ ಮತ್ತು ಅವರ ತಂಡ ಯೆಸ್ ಬ್ಯಾಂಕ್‌ ಹಾಗೂ ದೇಶದ ಆರ್ಥಿಕತೆಯನ್ನು ನಿರ್ನಾಮ ಮಾಡಿದೆ'' ಎಂದು ಟ್ವೀಟ್ ಮಾಡಿದ್ದಾರೆ. ಇನ್ಮುಂದೆ ದೇಶದಲ್ಲಿ ಬ್ಯಾಂಕ್‌ಗಳು ಇಲ್ಲ ಎಂದು No Bank ಎಂಬ ಟ್ಯಾಗ್ ಆರಂಭಿಸಿದ್ದಾರೆ.

Yes Bank ಸ್ಥಾಪಕ ರಾಣಾ ಕಪೂರ್ ವಶಕ್ಕೆ ಪಡೆದ ಇಡಿYes Bank ಸ್ಥಾಪಕ ರಾಣಾ ಕಪೂರ್ ವಶಕ್ಕೆ ಪಡೆದ ಇಡಿ

ರಾಹುಲ್ ಗಾಂಧಿ ಅವರು ಮೋದಿ ಅವರ ಕಾಲೆಳದಿರುವ ಈ ಟ್ವೀಟ್ ಸಕತ್ ಸದ್ದು ಮಾಡುತ್ತಿದೆ. 70 ಸಾವಿರಕ್ಕೂ ಅಧಿಕ ಕಾಮೆಂಟ್‌ಗಳು ಹಾಗೂ 14 ಸಾವಿರಕ್ಕೂ ಅಧಿಕ ರಿಟ್ವಿಟ್‌ಗಳು ರಾಹುಲ್ ಗಾಂಧಿ ಟ್ವೀಟ್‌ಗೆ ಸಂದಿವೆ. ದೇಶದ ಬ್ಯಾಂಕಿಂಗ್ ವಲಯದಲ್ಲಿ ಯೆಸ್ ಬ್ಯಾಂಕ್ ಬಿರುಗಾಳಿ ಎಬ್ಬಿಸಿದೆ. ಯೆಸ್ ಬ್ಯಾಂಕ್ ದಿವಾಳಿಯಿಂದ ಬ್ಯಾಂಕ್ ಗ್ರಾಹಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಬ್ಯಾಂಕ್‌ ಠೇವಣಿದಾರರು ತಮ್ಮ ಹಣ ವಾಪಸ್ ಸಿಗುತ್ತೋ ಇಲ್ಲವೋ ಎಂದು ಚಿಂತಾಕ್ರಾಂತರಾಗಿದ್ದಾರೆ.

No Yes Bank Rahul Gandhi Special Tweet About Yes Bank

ಎಲ್ಲಾ ಖಾತೆಗಳನ್ನೂ ಒಳಗೊಂಡಂತೆ ಬ್ಯಾಂಕ್ ಗ್ರಾಹಕರು ಮಾರ್ಚ್‌ 31 ರ ವರಗೆ ಕೇವಲ 50 ಸಾವಿರ ರುಪಾಯಿಗಳನ್ನು ಮಾತ್ರ ಹಿಂತೆಗೆಯಬೇಕು ಎಂದು ಆರ್‌ಬಿಐ ಹೇಳಿದೆ. ಸದ್ಯ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯೆಸ್ ಬ್ಯಾಂಕ್ ಆಡಳಿತ ಮಂಡಳಿಯನ್ನು ಆರ್‌ಬಿಐ ವಜಾಗೊಳಿಸಿದೆ. ಎಸ್‌ಬಿಐನ ಮಾಜಿ ಸಿಎಫ್ ಓ ಪ್ರಶಾಂತ್ ಕುಮಾರ್ ಅವರನ್ನು ಆಡಳಿತ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಯೆಸ್ ಬ್ಯಾಂಕ್‌ನ್ನು ಎಸ್‌ಬಿಐನೊಂದಿಗೆ ವಿಲೀನ ಮಾಡಲಾಗುತ್ತಿದೆ ಎನ್ನಲಾಗಿದೆ.

English summary
No Yes Bank Rahul Gandhi Special Tweet About Yes Bank. ''Modi and his ideas have destroyed India’s economy'' he tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X