ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೊಯ್ಡಾದಲ್ಲಿ ಪೋಷಕರಿಗೆ ಕೊರೊನಾ: ಮಕ್ಕಳು ಓದುತ್ತಿರುವ ಶಾಲೆಗೆ ರಜೆ

|
Google Oneindia Kannada News

ನವದೆಹಲಿ, ಮಾರ್ಚ್ 3: ಪೋಷಕರಿಗೆ ಕೊರೊನಾ ದೃಢಪಟ್ಟಿರುವ ಕಾರಣ ನೊಯ್ಡಾದ ಶಾಲೆಯೊಂದಕ್ಕೆ ರಜೆ ಘೋಷಿಸಲಾಗಿದೆ.

ನೋಯ್ಡಾದ ಗೌತಮ್ ಬುದ್ಧ ನಗರದಲ್ಲಿರುವ ಶಾಲೆಯೊಂದನ್ನು ವೈರಸ್ ಭೀತಿಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ನೋಯ್ಡಾದ ಗೌತಮ್ ಬುದ್ಧ ನಗರದಲ್ಲಿರುವ ಶ್ರೀರಾಮ್ ಮಿಲ್ಲೇನಿಯಂ ಶಾಲೆಯ ವಿದ್ಯಾರ್ಥಿಗಳ ಪೋಷಕರೊಬ್ಬರಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಕಂಡುಬಂದಿದ್ದು, ಆ ಸೋಂಕು ವಿದ್ಯಾರ್ಥಿ ಮೂಲಕ ಶಾಲೆಯ ಇತರೆ ವಿದ್ಯಾರ್ಥಿಗಳಲ್ಲೂ ಹರಡಿರುವ ಶಂಕೆ ಮೇರೆಗೆ ಮುಂದಿನ 2ರಿಂದ 3 ದಿನಗಳ ಕಾಲ ಶಾಲೆಯ ವೈಜ್ಞಾನಿಕ ಸ್ವಚ್ಛತಾ ಕಾರ್ಯ ನಡೆಯಲಿದ್ದು, ಇದೇ ಕಾರಣಕ್ಕೆ ಶಾಲೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

school

ಇನ್ನು ಶಾಲೆಯಲ್ಲಿನ 40 ವಿದ್ಯಾರ್ಥಿಗಳಲ್ಲಿ ಸೋಂಕು ಹರಡಿರುವ ಶಂಕೆ ಮೇರೆಗೆ 40 ವಿದ್ಯಾರ್ಥಿಗಳ ಮೇಲೆ 28 ದಿನಗಳ ಕಾಲ ತೀವ್ರ ನಿಗಾ ಇರಿಸಲಾಗಿದೆ.

ಚೀನಾ ಮಾತ್ರವಲ್ಲದೇ ವಿಶ್ವಾದ್ಯಂತ ಮೂರು ಸಾವಿರಕ್ಕೂ ಅಧಿಕ ಮಂದಿಯ ಬಲಿ ತೆಗೆದುಕೊಂಡಿರುವ ಮಾರಕ ಕೊರೋನಾ ವೈರಸ್ ಭೀತಿಯಿಂದಾಗಿ ನೋಯ್ಡಾದ ಶಾಲೆಯೊಂದರ 40 ಶಾಲಾಮಕ್ಕಳನ್ನು 28 ದಿನಗಳ ಕಾಲ ತೀವ್ರ ನಿಗಾದಲ್ಲಿರಿಸಲಾಗಿದ್ದು, ಪ್ರಸ್ತುತ ಶಾಲೆಯನ್ನು ಸ್ಥಗಿತ ಮಾಡಲಾಗಿದೆ.

ಬೆಂಗಳೂರು: ಕೊರೊನಾ ಸೋಂಕಿತ ಟೆಕ್ಕಿ ಕೆಲಸ ಮಾಡುತ್ತಿದ್ದ ಕಂಪನಿಗೆ ರಜೆಬೆಂಗಳೂರು: ಕೊರೊನಾ ಸೋಂಕಿತ ಟೆಕ್ಕಿ ಕೆಲಸ ಮಾಡುತ್ತಿದ್ದ ಕಂಪನಿಗೆ ರಜೆ

'ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶಾಲೆಗೆ ರಜೆ ನೀಡಲಾಗಿದೆ. ಈ ಅವಧಿಯಲ್ಲಿ ಶಾಲೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗುತ್ತದೆ. ಶಾಲಾ ಆವರಣ ಸೇರಿದಂತೆ ಶಾಲಾ ಕೊಠಡಿಗಳನ್ನು ಸ್ವಚ್ಛಗೊಳಿಸಲಾಗುತ್ತದೆ.

ಹಾಗೆಯೇ 40 ವಿದ್ಯಾರ್ಥಿಗಳನ್ನು ನೋಯ್ಡಾದಲ್ಲಿ ಪರೀಕ್ಷಿಸಲಾಗಿದೆ. ಇನ್ನು ಕೆಲವೇ ಗಂಟೆಗಳಲ್ಲಿ ವರದಿ ಬರಲಿದೆ ಎಂದು ತಿಳಿಸಿದ್ದಾರೆ ಅನುರಾಗ್ ಭಾರ್ಗವ್ ಹೇಳಿದ್ದಾರೆ.

ಅಲ್ಲದೆ ಎಲ್ಲ ವಿದ್ಯಾರ್ಥಿಗಳ ಮಕ್ಕಳ ರಕ್ತ ಮಾದರಿಗಳನ್ನು ತನಿಖೆಗೆ ಕಳುಹಿಸಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿದೆ. ಅಲ್ಲದೆ ಎಲ್ಲ ವಿದ್ಯಾರ್ಥಿಗಳನ್ನು 28 ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ ಎಂದು ಗೌತಮ ಬುದ್ಧ ನಗರದ ಮುಖ್ಯ ಆರೋಗ್ಯಾಧಿಕಾರಿ ಅನುರಾಗ್ ಭಾರ್ಗವ್ ತಿಳಿಸಿದ್ದಾರೆ.

English summary
:A top school in Noida has reportedly been closed after it turned out that a class 6 student's parent tested positive with COVID-19 on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X