ಮೋದಿಯನ್ನು ಭೇಟಿಯಾದ ಸಾಹಿತಿ ಎಸ್‌.ಎಲ್.ಭೈರಪ್ಪ, ಚಂದ್ರಶೇಖರ ಕಂಬಾರ

ನವದೆಹಲಿ, ಡಿಸೆಂಬರ್ 05: ಪ್ರಧಾನಿ ಮೋದಿ ಅವರನ್ನು ಕನ್ನಡದ ಖ್ಯಾತ ಸಾಹಿತಿಗಳಾದ ಎಸ್.ಎಲ್.ಭೈರಪ್ಪ ಮತ್ತು ಚಂದ್ರಶೇಖರ ಕಂಬಾರ ಅವರು ಇಂದು ಭೇಟಿ ಆಗಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ವಿಜೇತ ಚಂದ್ರಶೇಖರ ಕಂಬಾರ ಹಾಗೂ ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್‌.ಎಲ್.ಭೈರಪ್ಪ ಅವರು ದೆಹಲಿಯಲ್ಲಿ ಮೋದಿ ಅವರನ್ನು ಭೇಟಿ ಆಗಿದ್ದಾರೆ. ಈ ಸಮಯದಲ್ಲಿ ಕಂಬಾರರು ಸಾಹಿತ್ಯ ಕೃತಿಯನ್ನು ಮೋದಿ ಅವರಿಗೆ ನೀಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಮೊದಲಿಗೆ ಭೇಟಿ ಆಗಿರುವ ಇಬ್ಬರು ಸಾಹಿತಿಗಳು ನಂತರ ಮೋದಿ ಅವರನ್ನು ಭೇಟಿ ಆಗಿದ್ದಾರೆ. ಜೋಶಿ ಅವರೇ ಸಾಹಿತಿಗಳನ್ನು ಮೋದಿ ಅವರಿಗೆ ಪರಿಚಯಿಸಿಕೊಟ್ಟಿದ್ದಾರೆ.

Novelist SL Bairappa And Poet Chandrashekhar Kambar Met Narendra Modi Today

ಪ್ರಹ್ಲಾದ್ ಜೋಶಿ ಅವರು ತಮ್ಮ ಫೇಸ್‌ಬುಕ್ ಪುಟದಲ್ಲಿ ಈ ಬಗ್ಗೆ ಚಿತ್ರ ಸಹಿತ ಮಾಹಿತಿ ಪ್ರಕಟಿಸಿದ್ದು, ಜೋಶಿ ಅವರು ಇಬ್ಬರು ಸಾಹಿತಿಗಳ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಚಿತ್ರವನ್ನೂ ಪ್ರಕಟಿಸಿದ್ದಾರೆ. ಸಾಹಿತಿಗಳು ಮೋದಿ ಅವರನ್ನು ಭೇಟಿ ಆಗಿರುವ ಕಾರಣ ತಿಳಿದುಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+