ದೆಹಲಿಯಲ್ಲಿ ಪುನಃ ಸಮ-ಬೆಸ ಸಂಖ್ಯೆ ವಾಹನ ಸಂಚಾರ

ನವದೆಹಲಿ, ಅಕ್ಟೋಬರ್ 17 : ದೇಶದ ರಾಜಧಾನಿ ನವದೆಹಲಿಯಲ್ಲಿ ಪುನಃ ಸಮ-ಬೆಸ ಸಂಖ್ಯೆ ವಾಹನ ಸಂಚಾರ ಆರಂಭವಾಗಲಿದೆ. ಈ ನಿಯಮವನ್ನು ಉಲ್ಲಂಘನೆ ಮಾಡಿದರೆ 4 ಸಾವಿರ ರೂ. ದಂಡವನ್ನು ಪಾವತಿ ಮಾಡಬೇಕು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಕುರಿತು ಮಾಹಿತಿ ನೀಡಿದರು. "ನವೆಂಬರ್ 4 ರಿಂದ 15ರ ತನಕ ಸಮ-ಬೆಸ ಸಂಖ್ಯೆ ವಾಹನ ಸಂಚಾರವನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ" ಎಂದರು.

Odd Even Scheme In Delhi From November 4

"ಭಾನುವಾರ ಹೊರತುಪಡಿಸಿ ಉಳಿದ ಎಲ್ಲಾ ದಿನಗಳು ಬೆಳಗ್ಗೆ 8 ರಿಂದ ರಾತ್ರಿ 8ರ ತನಕ ಸಮ-ಬೆಸ ವಾಹನಗಳ ಸಂಚಾರ ನಿಯಮ ಜಾರಿಯಲ್ಲಿರುತ್ತದೆ. ಹೊರ ರಾಜ್ಯಗಳಿಂದ ಬರುವ ವಾಹನಗಳಿಗೂ ಇದು ಅನ್ವಯ" ಎಂದು ಮುಖ್ಯಮಂತ್ರಿಗಳು ಹೇಳಿದರು.

"ನಗರದಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿದ್ದು, ಈ ಸಮಸ್ಯೆ ನಿವಾರಣೆಗೆ ಮತ್ತೆ ಸಮ-ಬೆಸ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಚಳಿಗಾಲದಲ್ಲಿ ದೆಹಲಿ ಜನರನ್ನು ಕಾಡುವ ವಾಯು ಮಾಲಿನ್ಯ ಅಪಾಯಮಟ್ಟ ತಲುಪುತ್ತದೆ. ಈ ಹಿನ್ನಲೆಯಲ್ಲಿ ಇದರ ವಿರುದ್ಧ ಹೋರಾಡಲು ಅಲ್ಪಾವಧಿ ಮಾಪನದ ಫೇಸ್ ಮಾಸ್ಕ್ ಬಳಸುವಂತೆ ಪರಿಸರ ತಜ್ಞರು ಶಿಫಾರಸು ಮಾಡಿದ್ದಾರೆ" ಎಂದುರು.

ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ಅಪಾಯದ ಮಟ್ಟ ತಲುಪಿದಾಗ ಸಮ-ಬೆಸ ವಾಹನ ಸಂಚಾರವನ್ನು ಜಾರಿಗೆ ತರಲಾಗುತ್ತದೆ. ಸದ್ಯ, 3ನೇ ಬಾರಿಗೆ ಈ ನಿಯಮ ಜಾರಿಗೆ ಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+