• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಭಾರತಕ್ಕೆ ಬೇಕು: ಮೋದಿ

|

ನವದೆಹಲಿ, ನವೆಂಬರ್ 26: ಒಂದು ರಾಷ್ಟ್ರ, ಒಂದು ಚುನಾವಣೆ ಕೇವಲ ಚರ್ಚೆಯ ವಿಷಯವಲ್ಲ ಇದು ಭಾರತದ ಅವಶ್ಯಕತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಂವಿಧಾನ ದಿನದ ಸಂದರ್ಭದಲ್ಲಿ ಮಾತನಾಡಿದ ಅವರು, ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಏಕೆ ಮತದಾರರ ಪಟ್ಟಿಯನ್ನು ತರಬೇಕು ಎಂದು ಸಲಹೆ ನೀಡಿದರು.

ಇಂದು ಭಾರತದ ಸಂವಿಧಾನ ದಿನ: ನಮ್ಮ ಸಂವಿಧಾನದ ವೈಶಿಷ್ಯತೆಗಳೇನು?

ಪ್ರತ್ಯೇಕ ಪಟ್ಟಿಯಿಂದ ಸಂಪನ್ಮೂಲ ವ್ಯರ್ಥವಾಗಲಿದೆ. ಸಂವಿಧಾನದ ಕುರಿತು ಜನರಲ್ಲಿ ಅರಿವು ಮೂಡಿಸಲು ಹಲವು ಯೋಜನೆಗಳನ್ನು ರೂಪಿಸಬೇಕಾಗಿದೆ.

ಸಂವಿಧಾನದ ಒಂದು ವಿಶೇಷ ಲಕ್ಷಣವೆಂದರೆ ಕರ್ತವ್ಯಕ್ಕೆ ನೀಡುವ ಪ್ರಾಮುಖ್ಯತೆ, ಮಹಾತ್ಮಾ ಗಾಂಧಿಯವರು ಹಕ್ಕುಗಳು ಮತ್ತು ಕರ್ತವ್ಯಗಳ ನಡುವೆ ನಿಕಟ ಸಂಪರ್ಕ ಹೊಂದಿದ್ದರು ಎಂದು ಮೋದಿ ಹೇಳಿದರು.

ಸರ್ದಾರ್ ಸರೋವರ ಅಣೆಕಟ್ಟು ಯೋಜನೆ ವಿಳಂಬದ ಬಗ್ಗೆಕಾಂಗ್ರೆಸ್ ಬಗ್ಗೆ ಮಾತನಾಡಿದ ಅವರು, ವಿಳಂಬಕ್ಕೆ ಕಾರಣರಾದವರಿಗೆ ಇನ್ನೂ ಪಶ್ಚಾತಾಪವಿಲ್ಲ ಎಂದರು.

ಪ್ರತಿ ಕೆಲವು ತಿಂಗಳಿಗೆ ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಚುನಾವಣೆ ನಡೆಯುತ್ತಲೇ ಇರುತ್ತದೆ. ಇದು ಅಭಿವೃದ್ಧಿಯ ಮೇಲೆ ಪರಿಣಾಮ ಬೀರುವುದು ಎಲ್ಲರಿಗೂ ತಿಳಿದಿರುವ ವಿಚಾರ.

ಈ ಸಮಸ್ಯೆ ಬಗ್ಗೆ ಅಧ್ಯಯನ ನಡೆಯಬೇಕಿದೆ. ಇದಕ್ಕೆ ಅಧಿಕಾರಿಗಳು ಮಾರ್ಗದರ್ಶಕರಾಗಬಲ್ಲರು. ಒಂದು ರಾಷ್ಟ್ರ, ಒಂದು ಚುನಾವಣೆ ಎಂಬುದನ್ನು ಸಂವಿಧಾನದಲ್ಲಿ ಅಳವಡಿಸಬೇಕಿದೆ ಎಂದರು.

ದೇಶದಲ್ಲಿ ನಡೆದ ಮೊದಲ ಮೂರು ಚುನಾವಣೆಗಳಲ್ಲಿ (1952, 57 ಮತ್ತು 62) ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲಕ್ಕೆ ಮತದಾನ ನಡೆದಿದ್ದವು.

ಆ ಬಳಿಕ 1968 ಮತ್ತು 1969ರಲ್ಲಿ ಹಲವು ವಿಧಾನಸಭೆಗಳ ಅವಧಿಪೂರ್ವ ವಿಸರ್ಜನೆ ಹಾಗೂ 1970ರಲ್ಲಿ 4ನೇ ಲೋಕಸಭೆಯ ಅವಧಿಪೂರ್ವ ವಿಸರ್ಜನೆಯಿಂದಾಗಿ ಏಕಕಾಲದ ಚುನಾವಣೆ ಪ್ರಕ್ರಿಯೆಗೆ ತೆರೆ ಬಿದ್ದಿತ್ತು.

ನಂತರ ಆಗಾಗ ರಾಜಕೀಯ ತಜ್ಞತೆಯ ವಲಯದಲ್ಲಿ ಈ ವಿಚಾರದ ಸಾಧಕ-ಬಾಧಕಗಳು ಚರ್ಚೆಯಾಗುತ್ತಿದ್ದವು. 2014ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಈ ಪ್ರಸ್ತಾಪವನ್ನು ಮುಂದಿರಿಸಿ, ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲೂ ಇದು ಉಲ್ಲೇಖಗೊಂಡಾಗ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿತ್ತು.

ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕಾದ ಅಗತ್ಯ ಇಂದು ಹಿಂದೆಂದಿಗಿಂತಲೂ ಹೆಚ್ಚಾಗಿದೆ.

ಪ್ರಸ್ತುತ ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಬೇರೆ ಬೇರೆ ಸಮಯದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಪ್ರತಿವರ್ಷವೂ ಒಂದಲ್ಲ ಒಂದು ರಾಜ್ಯಕ್ಕೆ ಚುನಾವಣೆ ಇದ್ದೇ ಇರುತ್ತದೆ. ಪದೇಪದೆ ಚುನಾವಣೆಗಳಿಂದ ಸರ್ಕಾರಗಳಿಂದ ಕೋಟ್ಯಂತರ ರೂ. ಖರ್ಚಾಗುತ್ತದೆ.

English summary
Prime Minister Narendra Modi on Thursday said that one nation, one election is not a matter of debate only, but this is the need for India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X