ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿರೋಧ ಪಕ್ಷಗಳೇ ರೈತವಿರೋಧಿ ಎಂದ BJP ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ

|
Google Oneindia Kannada News

ನವದೆಹಲಿ, ಸಪ್ಟೆಂಬರ್.20: ಉಭಯ ಸದನಗಳಲ್ಲಿ ಕೃಷಿ ಸಂಬಂಧಿತ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಪ್ರತಿಪಕ್ಷಗಳೇ ರೈತರ ವಿರೋಧಿಗಳು ಎಂದು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಆರೋಪಿಸಿದ್ದಾರೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರು ತಮ್ಮ ಜವಾಬ್ದಾರಿಯನ್ನು ಮರೆತು ವರ್ತಿಸುತ್ತಿದ್ದಾರೆ. ಶಿಷ್ಟಾಚಾರವನ್ನು ಉಲ್ಲಂಘಿಸಿ ವರ್ತಿಸಿದ ನಾಯಕರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವಂತೆ ಸದನದ ಅಧ್ಯಕ್ಷರಿಗೆ ಮನವಿ ಮಾಡಿಕೊಳ್ಳಲಾಗಿದೆ.

ರೈತರ ಪಾಲಿಗೆ ಕೃಷಿ ಸಂಬಂಧಿತ ಮಸೂದೆಯೇ ಡೆತ್ ವಾರಂಟ್!ರೈತರ ಪಾಲಿಗೆ ಕೃಷಿ ಸಂಬಂಧಿತ ಮಸೂದೆಯೇ ಡೆತ್ ವಾರಂಟ್!

ಕೇಂದ್ರ ಸರ್ಕಾರವು ಜಾರಿಗೊಳಿಸಲು ಹೊರಟಿರುವ ಮಸೂದೆಗೆ ವಿರೋಧ ವ್ಯಕ್ತಪಡಿಸುವ ಮೂಲಕ ವಿರೋಧ ಪಕ್ಷಗಳು ರೈತರ ವಿಮೋಚನೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ರೈತ ವಿರೋಧಿಗಳಂತೆ ವರ್ತಿಸುತ್ತಿರುವ ವಿರೋಧ ಪಕ್ಷಗಳ ನಡೆಯನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ.

 Opposition Parties Are Behave Like Anti-Farmers In Farm Bill- Says J P Nadda

ರೈತರಿಗೆ ಅನ್ಯಾಯದಿಂದ ವಿಮೋಚನೆ:

ಭಾರತದಲ್ಲಿ ಕಳೆದ 70 ವರ್ಷಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯ ತಡೆಯುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ಕೃಷಿ ಸಂಬಂಧಿತ ಮಸೂದೆಗಳನ್ನು ಜಾರಿಗೊಳಿಸಲು ಹೊರಟಿದ್ದೇವೆ. ಆದರೆ ಕಾಂಗ್ರೆಸ್ ರೈತರ ವಿರೋಧಿ ನಿಲುವು ಪ್ರದರ್ಶಿಸುತ್ತಿರುವುದೇ ಏಕೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಶ್ನೆ ಮಾಡಿದ್ದಾರೆ.

ಭಾನುವಾರ ರಾಜ್ಯಸಭೆಯಲ್ಲಿ ಕೃಷಿ ಸಂಬಂಧಿತ ಮಸೂದೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋದ ಹಿನ್ನೆಲೆ ರಾಜ್ಯಸಭೆ ಕಲಾಪವನ್ನು ಸಭಾಪತಿಗಳು ಸೋಮವಾರ ಬೆಳಗ್ಗೆ 9 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.

English summary
"Opposition Parties Are Behave Like Anti-Farmers In Farm Bill"- Says BJP National President JP Nadda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X