ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾಘಟಬಂಧನಕ್ಕೆ ಮುಹೂರ್ತ: ಇಂದು ವಿರೋಧ ಪಕ್ಷಗಳ ಸಭೆ

|
Google Oneindia Kannada News

Recommended Video

Lok Sabha Elections 2019 : ಮಹಾಘಟಬಂಧನಕ್ಕೆ ಮುಹೂರ್ತ: ಇಂದು ವಿರೋಧ ಪಕ್ಷಗಳ ಸಭೆ

ನವದೆಹಲಿ, ಡಿಸೆಂಬರ್ 10: 2019 ರ ಲೋಕಸಭಾ ಚುನಾವಣೆಗೆ ಸಂಭಾವ್ಯ ಮಹಾಘಟಬಂಧನಕ್ಕೆ ಮುಹೂರ್ತ ಸಿದ್ಧವಾಗಿದೆ!

ಮಹಾಘಟಬಂಧನದ ಮೊದಲ ಸಭೆ ಇಂದು ನಡೆಯಲಿದ್ದು, 2019 ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಚಿಂತನೆ ನಡೆಯುವ ಸಾಧ್ಯತೆಗಳಿವೆ. ಇದೇ ಮೊದಲ ಬಾರಿಗೆ ಮಹಾಘಟಬಂಧನದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರೂ ಕಾಣಿಸಿಕೊಳ್ಳಲಿದ್ದಾರೆ.

ಐದು ರಾಜ್ಯಗಳಲ್ಲಿ ಮುಂದೇನು ಎಂಬ ಚರ್ಚೆಯಲ್ಲಿ ತೊಡಗಿದ ಅಮಿತ್ ಶಾಐದು ರಾಜ್ಯಗಳಲ್ಲಿ ಮುಂದೇನು ಎಂಬ ಚರ್ಚೆಯಲ್ಲಿ ತೊಡಗಿದ ಅಮಿತ್ ಶಾ

Opposition will meet today to talk about grand alliance in 2019 elections

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರು ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಬೇರೆ ಬೇರೆ ಪಕ್ಷಗಳನ್ನು ಒಂದೆಡೆ ಸೇರಿಸಿ ಆಡಳಿತಾರೂಢ ಎನ್ ಡಿಎ ಮೈತ್ರಿ ಕೂಟವನ್ನು ಅಧಿಕಾರದಿಂದ ಕೆಳಗಿಳಿಸಲು ಕಾರ್ಯತಂತ್ರ ರೂಪಿಸಲಿದ್ದಾರೆ.

ಐದು ರಾಜ್ಯಗಳ ಎಕ್ಸಿಟ್ ಪೋಲ್ ಫಲಿತಾಂಶ : ರಾಜಸ್ಥಾನದಲ್ಲಿ ಬಿಜೆಪಿಗೆ ಮುಖಭಂಗ?ಐದು ರಾಜ್ಯಗಳ ಎಕ್ಸಿಟ್ ಪೋಲ್ ಫಲಿತಾಂಶ : ರಾಜಸ್ಥಾನದಲ್ಲಿ ಬಿಜೆಪಿಗೆ ಮುಖಭಂಗ?

ಮೇ ತಿಂಗಳಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿಯವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಒಮ್ಮೆ ಅನಧಿಕೃತವಾಗಿ 'ಮಹಾಘಟಬಂಧನ'ದ ಶಕ್ತಿ ಪ್ರದರ್ಶನವಾಗಿತ್ತು. ಆದರೆ ಅದಾದ ನಂತರ ಕೇಜ್ರಿವಾಲ್ ಮತ್ತು ಕಾಂಗ್ರೆಸ್ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಎದ್ದಿದ್ದವು. ಇದೀಗ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ರಾಜಿ ಸಂಧಾನ ನಡೆದಿದ್ದು, ಮಹಾಘಟಬಂಧನದಲ್ಲಿ ಕೇಜ್ರಿವಾಲ್ ಅವರ ಎಎಪಿ ಸಹ ಭಾಗಿಯಾಗುವ ಸಾಧ್ಯತೆ ಇದೆ.

English summary
Aam Aadmi Party chief Arvind Kejriwal will attend his first meeting with opposition leaders in Chandrababu Naidu's big push for a grand alliance for 2019 today, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X