• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಾರತ ಬಂದ್‌ನಲ್ಲಿ ಪಾಲ್ಗೊಂಡ ಕಾರ್ಮಿಕರಿಗೆ ಅಭಿನಂದನೆ ತಿಳಿಸಿದ ರಾಹುಲ್ ಗಾಂಧಿ

|

ನವದೆಹಲಿ, ಜನವರಿ 8: ಭಾರತ ಬಂದ್‌ನಲ್ಲಿ ಪಾಲ್ಗೊಂಡಿರುವ 25 ಕೋಟಿಗೂ ಅಧಿಕ ಕಾರ್ಮಿಕರಿಗೆ ನನ್ನ ವಂದನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಮೋದಿ-ಶಾ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾರಕಕ್ಕೇರಿದೆ. ಮೋದಿಯವರ ಬಂಡವಾಳಶಾಹಿ ಧೋರಣೆಯಿಂದ ಸಾರ್ವಜನಿಕ ವಲಯಗಳು ಇಂದು ದುರ್ಬಲಗೊಂಡಿವೆ. ಇಂದು 20ಕೋಟಿಗೂ ಅಧಿಕ ಕಾರ್ಮಿಕರು ಭಾರತ ಬಂದ್ ನಡೆಸುತ್ತಿದ್ದು ಅವರಿಗೆ ನನ್ನ ವಂದನೆಗಳು ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ: ಜನಜಾಗೃತಿ ಅಭಿಯಾನದಲ್ಲೂ ಬಿಜೆಪಿಗೆ ಹಿನ್ನಡೆ!

ಕೇಂದ್ರ ಸರ್ಕಾರದ ಆರ್ಥಿಕ ನೀತಿ, ಬ್ಯಾಂಕಿಂಗ್ ವ್ಯವಸ್ಥೆ ಸುಧಾರಣೆ ಕ್ರಮಗಳಿಗೆ ವಿರೋಧ, ಕನಷ್ಠ ವೇತನ 21 ಸಾವಿರದಿಂದ 24 ಸಾವಿರ ರೂ. ಏರಿಕೆಗೆ ಆಗ್ರಹ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ವಿರೋಧ, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಹಿಂಪಡೆದುಕೊಳ್ಳಲು ಆಗ್ರಹ, 10 ಸಾರ್ವಜನಿಕ ವಲಯದ ಬ್ಯಾಂಕ್​ಗಳನ್ನು ವಿಲೀನಗೊಳಿಸಿ 4 ಅತಿದೊಡ್ಡ ಬ್ಯಾಂಕ್​ಗಳಾಗಿ ಪರಿವರ್ತಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಭಾರತ ಬಂದ್​ಗೆ ಕರೆ ನೀಡಲಾಗಿದೆ.

ಕಾರ್ಮಿಕ ಸಂಘಟನೆಗಳು, ಕೇಂದ್ರ-ರಾಜ್ಯ ಸರ್ಕಾರಿ ನೌಕರರು, ಬ್ಯಾಂಕ್ ನೌಕರರು, ಎಲ್​ಐಸಿ ನೌಕರರು, ಸಹಕಾರಿ ಬ್ಯಾಂಕ್ ನೌಕರರು, ಸರ್ಕಾರಿ ಶಿಕ್ಷಕರು ಹಾಗೂ ಸಂಘಟಿತ ವಲಯದ ಕಾರ್ಮಿಕರು ಬಂದ್​ಗೆ ಬೆಂಬಲ ನೀಡಿದ್ದಾರೆ.

English summary
Congress Leader Rahul Gandhi said that The Modi-Shah Govt’s anti people, anti labour policies have created catastrophic unemployment and are weakening our PSUs to justify their sale to Modi’s crony capitalist friends.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X