ದೆಹಲಿ: ಶೇ.56ರಷ್ಟು ಮಂದಿಯಲ್ಲಿ ಕೊರೊನಾ ವಿರುದ್ಧ ಹೋರಾಡುವ ಪ್ರತಿಕಾಯಗಳು ಪತ್ತೆ
ನವದೆಹಲಿ, ಫೆಬ್ರವರಿ 02:ಐದನೇ ಸಿರೊ ಸಮೀಕ್ಷೆಯ ವರದಿ ಕೈಸೇರಿದೆ.ಈ ವರದಿ ಪ್ರಕಾರ ದೇಶದಲ್ಲಿ ಶೇ.56ರಷ್ಟು ಮಂದಿಯಲ್ಲಿ ಪ್ರತಿಕಾಯಗಳು ಸೃಷ್ಟಿಯಾಗಿದೆ ಎಂದು ಹೇಳಿದೆ.
ಶೇ.56ರಷ್ಟು ಮಂದಿಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರತಿಕಾಯಗಳು ಸೃಷ್ಟಿಯಾಗಿವೆ. ನಗರದಲ್ಲಿ ಹರ್ಡ್ ಇಮ್ಯುನಿಟಿ ಬಂದಿದೆ ಎಂದು ಜನರು ತಮ್ಮ ಎಚ್ಚರಿಕೆಯನ್ನು ಬಿಡಬಾರದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಹ್ಯಾಂಡ್ ವಾಶ್, ಸ್ಯಾನಿಟೈಸರ್ ಬಳಕೆ ಸೇರಿದಂತೆ ಹಲವು ಕ್ರಮಗಳನ್ನು ಮುಂದುವರೆಸಬೇಕು ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.
ದೆಹಲಿಯಲ್ಲಿ ಶೇ.56.13ರಷ್ಟು ಜನಸಂಖ್ಯೆಯಲ್ಲಿ ಪ್ರತಿಕಾಯಗಳು ಸೃಷ್ಟಿಯಾಗಿವೆ. 28,000 ಮಂದಿಯನ್ನು ಸಮೀಕ್ಷೆಯಲ್ಲಿ ತೆಗೆದುಕೊಳ್ಳಲಾಗಿದೆ.

ಕೊರೊನಾ ವೈರಸ್ ಇಳಿಮುಖದ ಹಾದಿ
ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಇಳಿಮುಖದ ಹಾದಿ ಭಾರತದಲ್ಲಿ ಮುಂದುವರೆದಿದ್ದು, ದೇಶದಲ್ಲಿಂದು ಅತ್ಯಂತ ಕನಿಷ್ಟ 8,635 ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 16,311 ಹೊಸ ಕೇಸ್ ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,07,66,245 ಏರಿಕೆಯಾಗಿದೆ.

ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆ
ಈ ನಡುವೆ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆ ಕಂಡು ಬಂದಿದ್ದು, ನಿನ್ನೆ ಕೇವಲ 94 ಮಂದಿ ಸಾವನ್ನಪ್ಪಿರುವುದು ವರದಿಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 1,54,486ಕ್ಕೆ ತಲುಪಿದೆ.

ಆಸ್ಪತ್ರೆಯಿಂದ ಬಿಡುಗಡೆಯಾದವರೆಷ್ಟು?
ಇನ್ನು ಒಟ್ಟಾರೆ 1,07,66,245 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 19,299 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಈ ವರೆಗೂ ಬರೋಬ್ಬರಿ 1,04,48,406 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ
ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾವಿನ ಸಂಖ್ಯೆ ಕಡಿಮೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,63,353ಕ್ಕೆ ಇಳಿಕೆಯಾಗಿದೆ.
ಇನ್ನು ಭಾರತದಲ್ಲಿ ಒಂದೇ ದಿನ 6,59,422 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 19,77,52,057 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.












Click it and Unblock the Notifications