ಭಾರತದಲ್ಲಿ ಶೇ.60 ಕ್ಕಿಂತ ಹೆಚ್ಚು ವಯಸ್ಕರಿಗೆ ಸಂಪೂರ್ಣ ಲಸಿಕೆ
ನವದೆಹಲಿ ಡಿಸೆಂಬರ್ 23: ಕೊರೊನಾ ವಿರುದ್ಧ ಹೋರಾಡುವಲ್ಲಿ ದೇಶ ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಇದೆಲ್ಲದಕ್ಕಿಂತ ಮುಖ್ಯವಾಗಿ ಲಸಿಕೆಗೆ ಹೆಚ್ಚು ಪ್ರಾಶಸ್ತ್ಯ ನೀಡಿದೆ. ಹೀಗಾಗಿ ದೇಶಾದ್ಯಂತ ಕೆಲವೆಡೆ ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಮಹಾಮಾರಿ ಕೊರೋನಾ ವೈಸರ್ ವಿರುದ್ಧದ ಹೋರಾಟದ ನಿಟ್ಟಿನಲ್ಲಿ ಇದೇ ವರ್ಷದ ಜನವರಿ 16ರಂದು ದೇಶದಾದ್ಯಂತ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಭಾರತದಲ್ಲಿ ಅರ್ಹ ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ವಯಸ್ಕರು ಸಂಪೂರ್ಣ ಎರಡೂ ಡೋಸ್ ಕೋವಿಡ್-19 ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ಹೇಳಿದ್ದಾರೆ.
"ಹೊಸ ಸಾಧನೆಗಳನ್ನು ಮಾಡುತ್ತಿರುವ ಭಾರತಕ್ಕೆ ಅಭಿನಂದನೆಗಳು. ಸಾರ್ವಜನಿಕ ಭಾಗವಹಿಸುವಿಕೆ ಮತ್ತು ನಮ್ಮ ಆರೋಗ್ಯ ಕಾರ್ಯಕರ್ತರ ಸಮರ್ಪಿತ ಪ್ರಯತ್ನಗಳ ನೆರವಿನಿಂದ, ದೇಶದ ಶೇ. 60 ಕ್ಕಿಂತ ಹೆಚ್ಚು ವಯಸ್ಕರು ಈಗ ಸಂಪೂರ್ಣವಾಗಿ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ" ಎಂದು ಮಾಂಡವಿಯಾ ಅವರು ಟ್ವೀಟ್ ಮಾಡಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ಪ್ರಕಾರ, ಭಾರತದ ವಯಸ್ಕರಲ್ಲಿ ಸುಮಾರು ಶೇ 89 ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 70,17,671 ಡೋಸ್ ಲಸಿಕೆ ನೀಡುವುದರೊಂದಿಗೆ ದೇಶದಲ್ಲಿ COVID-19 ಲಸಿಕೆ ಪಡೆದ ಡೋಸ್‌ಗಳ ಸಂಖ್ಯೆ 139.70 ಕೋಟಿ ದಾಟಿದೆ.
https://twitter.com/mansukhmandviya/status/1473880563215790080?ref_src=twsrc%5Etfw%7Ctwcamp%5Etweetembed%7Ctwterm%5E1473880563215790080%7Ctwgr%5E%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2021%2Fdec%2F23%2F60-per-cent-of-indias-adult-population-fully-vaccinated-health-minister-460718.html
ಅಕ್ಟೋಬರ್ 21 ರಂದು ದೇಶದಲ್ಲಿ ಸಂಚಿತ ವ್ಯಾಕ್ಸಿನೇಷನ್ 100 ಕೋಟಿ ಗಡಿ ದಾಟಿದ ಕಾರಣ ಕೋವಿಡ್-19 ವಿರುದ್ಧದ ತನ್ನ ಯುದ್ಧದಲ್ಲಿ ಭಾರತವು ಪ್ರಮುಖ ಮೈಲಿಗಲ್ಲನ್ನು ಸಾಧಿಸಿತ್ತು. ಭಾರತವು 100 ಕೋಟಿ ಡೋಸ್ ದಾಟುತ್ತಿರುವ ವಿಶ್ವದ 2ನೇ ರಾಷ್ಟ್ರವಾಗಿದೆ. ಇದಕ್ಕೂ ಮೊದಲು ಚೀನಾ ಈ ಸಾಧನೆ ಮಾಡಿದ್ದಾಗಿ ಹೇಳಿಕೊಂಡಿದೆ.

ಮೇ 1 ರಿಂದ ಭಾರತ 18+ ವಯೋಮಾನದವರಿಗೆ ಸಾಮೂಹಿಕ ಲಸಿಕೆ ಅಭಿಯಾನವನ್ನು ಘೋಷಿಸಿತು. 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಮೇ 1 ರಿಂದ ಕೊರೋನವೈರಸ್ ವಿರುದ್ಧ ಲಸಿಕೆಯನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಘೋಷಿಸಿತು. ಇದು ರಾಜ್ಯಗಳು, ಖಾಸಗಿ ಆಸ್ಪತ್ರೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ತಯಾರಕರಿಂದ ನೇರವಾಗಿ ಡೋಸ್‌ಗಳನ್ನು ಪಡೆಯಲು ಅನುವು ಮಾಡಿಕೊಡುವ ಲಸಿಕೆ ಅಭಿಯಾನವನ್ನು ಉದಾರಗೊಳಿಸಿದೆ.
ಜನವರಿ 16ರಂದು ವಿಶ್ವದ ಅತಿದೊಡ್ಡ ಕೊರೋನಾ ಲಸಿಕೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಒಂದೇ ದಿನದಲ್ಲಿ ದೇಶದ ವಿವಿಧ ಮೂಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸುಮಾರು 3 ಲಕ್ಷ ಆರೋಗ್ಯ ಮತ್ತು ಪೌರ ಕಾರ್ಮಿಕರು ಸೇರಿದಂತೆ ಮುಂಚೂಣಿ ಕಾರ್ಮಿಕರಿಗೆ ಕೋವಿಡ್-19 ಲಸಿಕೆ ನೀಡಲು ಉದ್ದೇಶಿಸಲಾಗಿತ್ತು.
ಕೋವಿಡ್ 19 ಸಾಂಕ್ರಾಮಿಕಕ್ಕೆ ಸುಮಾರು ಒಂದು ವರ್ಷವಾದ ಬಳಿಕ, ಭಾರತದಲ್ಲಿ ಮೊದಲ ಬಾರಿಗೆ ಜನವರಿ 4ರಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಬ್ರಿಟಿಷ್-ಸ್ವೀಡಿಷ್ ಕಂಪನಿ ಅಸ್ಟ್ರಾಜೆನೆಕಾ ಸಹ-ಅಭಿವೃದ್ಧಿಪಡಿಸಿದ ಕೊರೊನಾವೈರಸ್ ಲಸಿಕೆಯನ್ನು ಸಾರ್ವಜನಿಕರಿಗೆ ಬಳಸಲು ಅನುಮೋದನೆ ನೀಡಲಾಯಿತು. ಭಾರತದಲ್ಲಿ ಈ ಲಸಿಕೆಯನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ, ಇದು ಕೊರೊನಾವೈರಸ್ ಹರಡುವುದನ್ನು ತಡೆಯುವ ಪ್ರಮುಖ ಹೆಜ್ಜೆಯಾಗಿದೆ.
ಭಾರತದ ಔಷಧೀಯ ನಿಯಂತ್ರಕವಾದ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಹಾಗೂ ಫಾರ್ಮಾಸ್ಯೂಟಿಕಲ್ ನಿಯಂತ್ರಕ ಸಂಸ್ಥೆಯಿಂದ ಸೂಕ್ತ ಪರೀಕ್ಷೆ ಮಾಡಿದ ನಂತರ ಕೋವಿಶೀಲ್ಡ್ ಲಸಿಕೆಗೆ ಅನುಮೋದನೆ ನೀಡಲಾಗಿದೆ ಎಂದು ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ಡಾ ವಿಜಿ ಸೋಮಾನಿ ಹೇಳಿದ್ದರು.












Click it and Unblock the Notifications