ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲೆಕ್ಟ್ರಿಕ್ ವಾಹನ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ: 90ಕ್ಕೂ ಹೆಚ್ಚು ವಾಹನ ಭಸ್ಮ

|
Google Oneindia Kannada News

ನವದೆಹಲಿ, ಜೂನ್ 8: ಬುಧವಾರ ದೆಹಲಿಯ ಜಾಮಿಯಾ ನಗರದ ಎಲೆಕ್ಟ್ರಿಕ್ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 10 ಕಾರುಗಳು ಸೇರಿ 90ಕ್ಕೂ ಹೆಚ್ಚು ವಾಹಗಳು ಸುಟ್ಟು ಭಸ್ಮವಾಗಿವೆ.

11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಕಾರು, ಇ-ರಿಕ್ಷಾಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

Breaking; ದೆಹಲಿ ಬಳಿಯ ಘಾಜಿಯಾಬಾದ್‌ನ ಗೋಡೌನ್‌ನಲ್ಲಿ ಅಗ್ನಿ ಅವಘಡBreaking; ದೆಹಲಿ ಬಳಿಯ ಘಾಜಿಯಾಬಾದ್‌ನ ಗೋಡೌನ್‌ನಲ್ಲಿ ಅಗ್ನಿ ಅವಘಡ

ಜಾಮಿಯಾ ನಗರದದಲ್ಲಿರುವ ಪಾರ್ಕಿಂಗ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಮುಂಜಾನೆ ದೂರವಾಣಿ ಕರೆ ಬಂದಿತ್ತು ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.

Over 90 Vehicle include 10 cars were gutted in Massive Fire broke in Delhi.

ಘಟನೆಯಲ್ಲಿ ಒಟ್ಟು 10 ಕಾರುಗಳು, ಒಂದು ಮೋಟಾರ್ ಸೈಕಲ್, ಎರಡು ಸ್ಕೂಟಿ, 30 ಹೊಸ ಇ-ರಿಕ್ಷಾಗಳು ಮತ್ತು 50 ಹಳೆಯ ಇ-ರಿಕ್ಷಾಗಳು ಬೆಂಕಿಗೆ ಆಹುತಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

Breaking; ದೆಹಲಿ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕBreaking; ದೆಹಲಿ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ

ಈ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಇ-ರಿಕ್ಷಾದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಇನ್ನು ಈ ಘಟನೆ ನಡೆಯುವ ಕೆಲವು ಗಂಟೆಗಳ ಹಿಂದೆ ಮತ್ತೊಂದು ಬೆಂಕಿ ಅವಘಡ ನಡೆದಿದೆ. ದೆಹಲಿಯ ಉತ್ತರ ಬ್ಲಾಕ್‌ನಲ್ಲಿರುವ ಗೃಹ ವ್ಯವಹಾರಗಳ ಸಚಿವಾಲಯದ ದೂರವಾಣಿ ವಿನಿಮಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

Over 90 Vehicle include 10 cars were gutted in Massive Fire broke in Delhi.

ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಪ್ರಕಾರ, ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಕರೆ ಬಂದಿತ್ತು, ಉತ್ತರ ಬ್ಲಾಕ್‌ನಲ್ಲಿರುವ ದೂರವಾಣಿ ವಿನಿಮಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದರು.

ತಕ್ಷಣ ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿವೆ. ಇದುವರೆಗೂ ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.

ಶಾಖದ ಅಲೆಗಳ ಹೊಡೆತಕ್ಕೆ ಸಿಲುಕಿರುವ ರಾಷ್ಟ್ರ ರಾಜಧಾನಿಯಲ್ಲಿ ಬೆಂಕಿ ಅವಘಡಗಳು ನಡೆಯುತ್ತಲೇ ಇದೆ. ಇತ್ತೀಚೆಗಷ್ಟೆ ದೆಹಲಿಯ ಮುಂಡ್ಕಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 27 ಜನ ಸಾವನ್ನಪ್ಪಿದ್ದರು.

Recommended Video

ಕೊಹ್ಲಿ ಮಾಡಿರೋ ಕೆಟ್ಟ ದಾಖಲೆಯಲ್ಲಿ KL ರಾಹುಲ್ ಪಾಲು ಪಡೆಯುತ್ತಾರಾ?? | OneIndia Kanada

ದುರಂತದಲ್ಲಿ ಕೆಲವರ ದೇಹಗಳು ಸುಟ್ಟು ಕರಕಲಾಗಿದ್ದವು, ಡಿಎನ್‌ಎ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಮೃತದೇಹಗಳನ್ನು ಪತ್ತೆಹಚ್ಚಿ, ಕುಟುಂಬಸ್ಥರಿಗೆ ನೀಡಲಾಗಿತ್ತು.

English summary
90 Vehicle include 10 cars were gutted in Massive Fire broke in Delhi. No casualties have been reported so far.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X