ಇ.ಡಿ ಎದುರು ಪಿ. ಚಿದಂಬರಂ ವಿಚಾರಣೆಗೆ ಹಾಜರಾಗುವ ಸಾಧ್ಯತೆ

ನವದೆಹಲಿ, ಜೂನ್ 12: ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಏರ್‌ಸೆಲ್- ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗುವ ಸಾಧ್ಯತೆ ಇದೆ.

ಇದೇ ಪ್ರಕರಣದಲ್ಲಿ ಅವರು ಕೆಲವು ದಿನಗಳ ಹಿಂದೆ ಕೇಂದ್ರ ತನಿಖಾ ದಳ (ಸಿಬಿಐ) ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಏರ್‌ಸೆಲ್-ಮ್ಯಾಕ್ಸಿಸ್ ಹಣ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಪಿ. ಚಿದಂಬರಂ ಅವರು, ಜಾರಿ ನಿರ್ದೇಶನಾಲಯವು ತಮ್ಮನ್ನು ಜುಲೈ 10ರವರೆಗೆ ಬಂಧಿಸದಂತೆ ಪಾಟಿಯಾಲ ಹೌಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

p. chidambaram expected to appear before ED

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರ ಪಾತ್ರದ ಕುರಿತು ವಿವರವಾದ ಪ್ರತಿಕ್ರಿಯೆ ನೀಡಲು ಜಾರಿ ನಿರ್ದೇಶನಾಲಯ ಕಾಲಾವಕಾಶ ಕೋರಿದೆ.

2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯು (ಎಫ್‌ಐಪಿಬಿ) ಏರ್‌ಸೆಲ್‌ನಲ್ಲಿ ಹೂಡಿಕೆ ಮಾಡಲು ಎಂ/ಎಸ್ ಗ್ಲೋಬಲ್ ಕಮ್ಯುನಿಕೇಷನ್ ಹೋಲ್ಡಿಂಗ್ ಸರ್ವೀಸಸ್ ಲಿಮಿಟೆಡ್‌ಗೆ ಅನುಮೋದನೆ ನೀಡಿತ್ತು.

ಚಿದಂಬರಂ ಅವರು ತಮ್ಮ ಅಧಿಕಾರದ ಮಿತಿಯಾಚೆ 2006ರಲ್ಲಿ ಎಫ್‌ಐಪಿಬಿ ಅನುಮೋದನೆ ನೀಡಿದ್ದರು. ಆದರೆ ಅವರಿಗೆ 600 ಕೋಟಿವರೆಗಿನ ಯೋಜನಾ ಪ್ರಸ್ತಾವನೆಗಳಿಗೆ ಮಾತ್ರ ಅನುಮೋದನೆ ನೀಡಲು ಅಧಿಕಾರವಿತ್ತು ಎಂದು ಇಡಿ ಆರೋಪಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+