ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿ.ಚಿದಂಬರಂ ಗೆ ಜಾಮೀನು: ಆದರೂ ಇಲ್ಲ ಬಿಡುಗಡೆ ಭಾಗ್ಯ

|
Google Oneindia Kannada News

ನವದೆಹಲಿ, ಅಕ್ಟೋಬರ್ 22: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್‌ ಜಾಮೀನು ನೀಡಿದೆ. ಆದರೂ ಸಹ ಅವರಿಗೆ ಜೈಲಿನಿಂದ ಬಿಡುಗಡೆ ಆಗುವ ಭಾಗ್ಯವಿಲ್ಲ.

ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಪಿ.ಚಿದಂಬರಂ ಮೇಲೆ ಕೇಸು ದಾಖಲಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

Recommended Video

INX media Corruption Case: supreme Court Grants Chidambaram Bail | Oneindia Kannada

ಆದರೆ ಪಿ.ಚಿದಂಬರಂ ಅವರು ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧನಕ್ಕೆ ಒಳಗಾಗಿದ್ದರು. ಆದರೆ ಈ ಇಡಿ ದಾಖಲಿಸಿರುವ ಪ್ರಕರಣದಲ್ಲಿ ಅವರಿಗೆ ಜಾಮೀನು ದೊರೆತಿಲ್ಲ. ಹಾಗಾಗಿ ಜೈಲು ವಾಸ ಇನ್ನಷ್ಟು ದಿನ ಮುಂದುವರೆಯುವ ಸಾಧ್ಯತೆ ಇದೆ.

P Chidambaram Granted Bail In INX Media Case By SC

ಪಿ.ಚಿದಂಬರಂ ಅವರನ್ನು ಆಗಸ್ಟ್ 21 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ವಿಚಾರಣೆ ಬಳಿಕ ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು ತಿಹಾರ್ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ.

ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಗೆ ಜಾಮೀನು ಸಿಕ್ಕಿರುವುದು ಭರವಸೆ ಮೂಡಿಸಿದ್ದು, ಇಡಿ ಪ್ರಕರಣದಲ್ಲಿಯೂ ಜಾಮೀನು ಸಿಗಬಹುದೆಂಬ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.

English summary
Supreme Court grant bail to P Chidambaram in INX media case lodged by CBI. This gives hope that he might given bail in ED case too.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X