ದೆಹಲಿ ಪೊಲೀಸರಿಂದ ಪಾಕ್ ಹೈ ಕಮಿಷನ್ ಅಧಿಕಾರಿ ಬಂಧನ

Posted By:
Subscribe to Oneindia Kannada

ನವದೆಹಲಿ, ಅಕ್ಟೋಬರ್ 27: ಪಾಕಿಸ್ತಾನ ರಾಯಭಾರಿ ಕಚೇರಿಯ ಸಿಬ್ಬಂದಿಯೊಬ್ಬರನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ರಕ್ಷಣಾ ಇಲಾಖೆಗೆ ಸಂಬಂಧಿಸಿದ ಕೆಲ ಸೂಕ್ಷ್ಮ ದಾಖಲೆಗಳನ್ನು ಹೊಂದಿದ್ದ ಆರೋಪದ ಮೇಲೆ ಅಧಿಕಾರಿಯನ್ನು ಬಂಧಿಸಲಾಗಿದೆ.

ಬಂಧಿತ ಅಧಿಕಾರಿಯ ಹೆಸರು ಮೆಹಮೂದ್ ಅಖ್ತರ್ ಎಂದು ತಿಳಿದು ಬಂದಿದೆ. ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ದೆಹಲಿ ಪೊಲೀಸರು ಅಖ್ತರ್ ಅವರನ್ನು ಬಂಧಿಸಿದ್ದಾರೆ.

Pak high commission official arrested by Delhi police on espionage charge

ಬಂಧಿತ ಅಧಿಕಾರಿಯನ್ನು ಚಾಣಕ್ಯಪುರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ವಿಚಾರಣೆ ಮುಂದುವರೆದಿದೆ. ಈ ಘಟನೆ ಕುರಿತಂತೆ ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ ಅವರಿಗೆ ಭಾರತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Delhi Police has arrested an officer in the Pakistan High Commission on charges of espionage. The officer was said to be in possession of documents relating to defence. The officer has been identified as Mehmood Akhtar.
Please Wait while comments are loading...