ಜೂನ್ 29ಕ್ಕೆ ಕರ್ತಾರ್‌ಪುರ ಕಾರಿಡಾರ್ ತೆರೆಯಲು ಪಾಕ್ ಸಿದ್ಧತೆ

ದೆಹಲಿ, ಜೂನ್ 27: ಕೊರೊನಾ ವೈರಸ್ ಭೀತಿಯಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿಯಾಚೆಗಿನ ಸಂಚಾರ ನಿರ್ಬಂಧವಾಗಿತ್ತು. ಇದೀಗ, ಸಿಖ್ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ತಾರ್‌ಪುರ ಕಾರಿಡಾರ್ ತೆರೆಯಲು ಪಾಕ್ ನಿರ್ಧರಿಸಿದೆ.

Recommended Video

      Shivraj Singh Chouhan MP CM visits Mandya's melukote with family | Oneindia Kannada

      ಇದೇ ತಿಂಗಳು 29 ರಿಂದ ಕರ್ತಾರ್‌ಪುರ ಕಾರಿಡಾರ್ ತೆರೆಯವುದಾಗಿ ಶನಿವಾರ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹ್ಮೊದ್ ಟ್ವೀಟ್ ಮಾಡಿ ಭಾರತಕ್ಕೆ ತಿಳಿಸಿದ್ದಾರೆ.

      ಜಗತ್ತಿನಾದ್ಯಂತ ಧಾರ್ಮಿಕ ಕೇಂದ್ರಗಳು ತೆರೆದಿದೆ. ಕರ್ತಾರ್‌ಪುರ ಕಾರಿಡಾರ್ ತೆರೆಯಲು ಪಾಕಿಸ್ತಾನ ಸಜ್ಜಾಗಿದೆ. ಸಿಖ್ ಯಾತ್ರಾರ್ಥಿಗಳಿಗೆ ಕರ್ತಾರ್‌ಪುರ ಕಾರಿಡಾರ್ ತೆರೆಯವುದಾಗಿ ಭಾರತಕ್ಕೆ ತಿಳಿಸಲಾಗಿದೆ ಎಂದು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

      Pakistan ready to open Gurdwara Kartarpur Sahib for sikh pilgrims on 29 June

      ಆದರೆ, ಕೊರೊನಾ ವೈರಸ್ ತಡೆಗಟ್ಟುವ ಕಾರಣದಿಂದ ಗಡಿಯಾಚೆಗಿನ ಪ್ರಯಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆರೋಗ್ಯ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಇತರರೊಂದಿಗೆ ಸಮಾಲೋಚಿಸಿ ಹೆಚ್ಚಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ನಿರ್ಧರಿಸುವುದಾಗಿ ಮೂಲಗಳ ತಿಳಿಸಿವೆ.

      ಕೊರೊನಾ ಸೋಂಕು ಹರಡುತ್ತಿರುವ ಕಾರಣ, ಪಾಕಿಸ್ತಾನದಲ್ಲಿರುವ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರ ಯಾತ್ರಗೆ ನೋಂದಣಿಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಿತ್ತು. ಇದೀಗ, ಪಾಕಿಸ್ತಾನದಲ್ಲಿ ಹಂತ ಹಂತವಾಗಿ ಲಾಕ್‌ಡೌನ್‌ ತೆರವುಗೊಳಿಸಲು ತೀರ್ಮಾನಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+