ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರಿಗಾಗಿ 'ಪದ್ಮವಿಭೂಷಣ ಗೌರವ' ಹಿಂತಿರುಗಿಸಿದ ಪ್ರಕಾಶ್ ಸಿಂಗ್ ಬಾದಲ್

|
Google Oneindia Kannada News

ನವದೆಹಲಿ, ಡಿಸೆಂಬರ್.03: ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಪದ್ಮವಿಭೂಷಣ ಪ್ರಶಸ್ತಿಯನ್ನು ವಾಪಸ್ ನೀಡಿದ್ದಾರೆ.

ಕೇಂದ್ರ ಸರ್ಕಾರವು ಕೃಷಿ ಸಂಬಂಧಿತ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ರೈತರಿಗೆ ಅನ್ಯಾಯ ಮಾಡುವುದಕ್ಕೆ ಹೊರಟಿದೆ. ರೈತರ ಪರವಾಗಿ ಬೆಂಬಲಿಸುವುದಕ್ಕೆ ಹಾಗೂ ರೈತರೊಂದಿಗೆ ನಾವಿದ್ದೇವೆ ಎಂದು ಒಗ್ಗಟ್ಟು ಪ್ರದರ್ಶಿಸುವುದಕ್ಕೆ ನನ್ನ ಬಳಿ ಏನೂ ಇಲ್ಲ. ಈ ವಿಷಯದಲ್ಲಿ ನಾನೂ ತೀರಾ ಬಡವನಾಗಿದ್ದು, ರೈತರ ಹೋರಾಟವನ್ನು ಬೆಂಬಲಿಸುವುದಕ್ಕಾಗಿ ತಾವು ಪಡೆದಿರುವ ಪದ್ಮವಿಭೂಷಣ ಗೌರವವನ್ನು ಕೇಂದ್ರ ಸರ್ಕಾರಕ್ಕೆ ವಾಪಸ್ ನೀಡುತ್ತಿದ್ದೇನೆ" ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿ ದಳದ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಹೇಳಿದ್ದಾರೆ.

ದೆಹಲಿ ಗಡಿ ರಸ್ತೆಗಳಲ್ಲೇ ಬಂದ್: ಇಲ್ಲಿದೆ ಬದಲಿ ಮಾರ್ಗಗಳ ವಿವರದೆಹಲಿ ಗಡಿ ರಸ್ತೆಗಳಲ್ಲೇ ಬಂದ್: ಇಲ್ಲಿದೆ ಬದಲಿ ಮಾರ್ಗಗಳ ವಿವರ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ ರೈತರ ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಸಂಧಾನ ಸಭೆ ನಡೆಸಲಾಗುತ್ತಿದ್ದು, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೂಡಾ ಸಭೆಯಲ್ಲಿ ಭಾಗಿಯಾಗಿದ್ದಾರೆ.

Parkash Singh Badal Returns Padma Vibhushan Award Over Farmers Protest

ದೆಹಲಿಯಲ್ಲಿ ರೈತರ ಉಗ್ರ ಹೋರಾಟ:

Recommended Video

Burevi ಚಂಡಮಾರುತ ಕೇರಳ ಪ್ರವೇಶಿಸಿದ್ದಕ್ಕೆ , ನಮ್ಮ ರಾಜ್ಯದಲ್ಲಿ ಮಳೆ | Oneindia Kannada

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ 32 ರೈತ ಸಂಘಟನೆಗಳ ಮುಖಂಡರೊಂದಿಗೆ ಕೇಂದ್ರ ಸರ್ಕಾರವು ಡಿಸೆಂಬರ್.03ರಂದು ಸಂಧಾನ ಸಭೆ ನಡೆಸಲಿದೆ. ಗುರುವಾರ ನಡೆಯಲಿರುವ ಸಭೆಯು ಕೇಂದ್ರ ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳಲಿರುವ ಕೊನೆಯ ಅವಕಾಶ ಎಂದು ರೈತ ಮುಖಂಡರು ಈಗಾಗಲೇ ಷರತ್ತು ವಿಧಿಸಿದ್ದಾರೆ. ಇದರ ನಡುವೆ ದೆಹಲಿಯ ಹಲವು ರಸ್ತೆಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ. ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ಆಗಮಿಸುವ ಮತ್ತು ನಿರ್ಗಮಿಸುವ ಪ್ರಯಾಣಿಕರು ಬೇರೆ ಮಾರ್ಗದಲ್ಲಿ ಸಂಚರಿಸುವಂತೆ ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ. ದೆಹಲಿಯ ಸಿಂಘು ಮತ್ತು ಟಿಕ್ರಿ ಗಡಿ ಪ್ರದೇಶದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

English summary
Parkash Singh Badal Returns Padma Vibhushan Award Over Farmers Protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X