Winter Session Day 7 Roundup: ಕಲಾಪದ ಪ್ರಮುಖಾಂಶಗಳು

ನವದೆಹಲಿ, ಡಿಸೆಂಬರ್ 07: ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿ 7 ದಿನಗಳು ಕಳೆದಿವೆ ರಾಜ್ಯಸಭೆ 12 ಸಂಸದರ ಅಮಾನತು ಮುಂದುವರೆದಿದೆ.

ಅಮಾನತು ಹಿಂಪಡೆಯುವಂತೆ ವಿರೋಧಪಕ್ಷಗಳು ಪ್ರತಿಭಟನೆ ನಡೆಸಿದರು. ಲೋಕಸಭೆಯಲ್ಲಿ ವರ್ಷಪೂರ್ತಿ ನಡೆದ ರೈತರ ಪ್ರತಿಭಟನೆಯ ವಿಷಯವನ್ನೇ ಪ್ರಮುಖವಾಗಿ ಚರ್ಚೆ ನಡೆಸಿದರು.

ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಪರಿಹಾರ ನೀಡುವಂತೆ ರಾಹುಲ್ ಒತ್ತಾಯ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸಿದ ಪ್ರತಿಭಟನೆಯಲ್ಲಿ ಸುಮಾರು 700 ರೈತರು ಸಾವನ್ನಪ್ಪಿದ್ದಾರೆ. ಪ್ರಧಾನಿಯವರು ದೇಶದ ರೈತರಲ್ಲಿ ಕ್ಷಮೆಯಾಚಿಸಿದ್ದಾರೆ. ತಾನು ತಪ್ಪು ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

Parliament Winter Session 2021, Day 7 Roundup: Key Questions, Bills, Decisions, News and Highlights in Kannada

ಮೃತ ರೈತರಿಗೆ ಪರಿಹಾರ ನೀಡಲ್ಲ ಎಂಬ ಸರ್ಕಾರದ ಹೇಳಿಕೆಯನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ, ನವೆಂಬರ್‌ 30ರಂದು ಕೃಷಿ ಸಚಿವರು ಮಾತನಾಡಿ ಪ್ರತಿಭಟನೆಯಲ್ಲಿ ಎಷ್ಟು ರೈತರು ಸತ್ತರು? ನಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಹರಿಯಾಣದ 70 ರೈತರ ಮತ್ತೊಂದು ಪಟ್ಟಿಯನ್ನು ಮಾಡಿದ್ದೇವೆ. ಆದರೆ, ನೀವು ಮೃತ ರೈತರ ಮಾಹಿತಿ ಇಲ್ಲ ಎನ್ನುತ್ತಿದ್ದೀರಿ. ರೈತರಿಗೆ ಅವರ ಹಕ್ಕುಗಳನ್ನು ನೀಡಬೇಕು. ಅವರಿಗೆ ಪರಿಹಾರದ ಜೊತೆಗೆ ಅವರ ಕುಟುಂಬಗಳಿಗೆ ಉದ್ಯೋಗ ನೀಡಬೇಕು ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ.

ಪಂಜಾಬ್ ಸರ್ಕಾರವು ಸುಮಾರು 400 ರೈತರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಿರುವುದನ್ನು ನೋಡಿದ್ದೇವೆ. ಇದರಲ್ಲಿ 152 ಮಂದಿಯ ಕುಟುಂಬಗಳಿಗೆ ಉದ್ಯೋಗ ನೀಡಿದೆ. ನನ್ನ ಬಳಿ ಪಟ್ಟಿ ಇದೆ ಎಂದಿದ್ದಾರೆ.

ಸಂಸದರ ಅಮಾನತು ವಿರುದ್ಧ ಪ್ರತಿಭಟನೆ ಮುಂದುವರೆಯಲಿದೆ: ಸಂಸದರ ಅಮಾನತು ವಿರುದ್ಧ ಪ್ರತಿಭಟನೆ ಮುಂದುವರೆಯಲಿದೆ ಎಂದು ಎಂದು ವಿರೋಧೊಕ್ಷ ನಾಯಕರು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಸಂಸದರ ಅಮಾನತು ಕಾನೂನು ವಿರೋಧಿಯಾಗಿದ್ದು, ಅಮಾನತು ಹಿಂಪಡೆಯುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಹೇಳಿದರು.

ಆಗಸ್ಟ್ 11 ರಂದು ನಡೆದ ಅಧಿವೇಶನವನ್ನು ಗಮನದಲ್ಲಿಟ್ಟುಕೊಂಡು ಈ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸಂಸದರನ್ನು ಅಮಾನತು ಮಾಡಿರುವುದು ಸರಿಯಲ್ಲ.

ಕ್ಷಮೆ ಕೇಳಿದರೆ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದ ಪ್ರಲ್ಹಾದ್ ಜೋಶಿ: ಅಮಾನತುಗೊಂಡಿರುವ ಸಂಸದರು ಕ್ಷಮೆ ಕೇಳಿದಲ್ಲಿ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಪ್ರಧಾನಿ ನರಂದ್ರ ಮೋದಿ ಭಾಗವಹಿಸಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸಚಿವರುಗಳು ಸಂಸದರ ಅಮಾನತು ಆದೇಶದ ಬಗ್ಗೆ ವಿವರಣೆ ನೀಡಿದ್ದಾರೆ ಎಂದೂ ಜೋಶಿ ತಿಳಿಸಿದ್ದಾರೆ.

ಮುಂಗಾರು ಅಧಿವೇಶನದ ಕೊನೆಯ ದಿನದಂದು ಸಂಸತ್ ನಲ್ಲಿ ತೀವ್ರ ಗದ್ದಲ ಉಂಟುಮಾಡಿದ್ದ ಕಾರಣ ವಿಪಕ್ಷಗಳ 12 ಸಂಸದರನ್ನು ಚಳಿಗಾಲದ ಉಳಿದ ಅಧಿವೇಶನದ ರಾಜ್ಯಸಭೆಯ ಕಲಾಪದಿಂದ ಅಮಾನತುಗೊಳಿಸಲಾಗಿತ್ತು.

ಇದೇ ವೇಳೆ, ಬಿಜೆಪಿ ಸಂಸದೀಯ ಮಂಡಳಿ ಸಭೆಯ ಬಗ್ಗೆ ವಿವರ ನೀಡಿರುವ ಅವರು, ಪದ್ಮ ಪ್ರಶಸ್ತಿ ಪುರಸ್ಕೃತರನ್ನೊಳಗೊಂಡ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನಾವು ಸಂಸದರನ್ನು ಏಕೆ ಅಮಾನತು ಮಾಡಲಾಯಿತು ಎಂಬುದನ್ನು ವಿವರಿಸಿದ್ದೇವೆ. ಏನಾಯಿತು ಎಂಬುದನ್ನು ದೇಶವೇ ನೋಡಿದೆ. ದಾಖಲೆಗಳಲ್ಲಿದೆ. ಅವರು ಇಂದಿಗೂ ಕ್ಷಮೆ ಕೇಳಿದರೆ ನಾವು ಅಮಾನತು ಆದೇಶವನ್ನು ಹಿಂಪಡೆಯುವುದಕ್ಕೆ ಸಿದ್ಧರಿದ್ದೇವೆ ಎಂದು ಜೋಶಿ ಸಂಸದೀಯ ಮಂಡಳಿ ಸಭೆಯ ಬಳಿಕ ತಿಳಿಸಿದ್ದಾರೆ.

12 ಸಂಸದರನ್ನು ಸದನದದಿಂದ ಅಮಾನತು ಮಾಡಿರುವುದನ್ನು ರದ್ದುಪಡಿಸಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಗಿದೆ.

ಸದನ ಸಮಾವೇಶಗೊಳ್ಳುತ್ತಿದ್ದಂತೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಟಿಆರ್ ಎಸ್, ಆಮ್ ಆದ್ಮಿ ಪಾರ್ಟಿ ಮತ್ತು ಎಡಪಕ್ಷಗಳು ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಮಧ್ಯಾಹ್ನದವರೆಗೂ ಕಲಾಪವನ್ನು ಮುಂದೂಡಲಾಯಿತು.

ಸಂಸದರ ಹಾಜರಾತಿ ಕೇಳಿದ ಮೋದಿ: ಪ್ರಧಾನಿ ನರೇಂದ್ರ ಮೋದಿ ಸಂಸತ್‌ನಲ್ಲಿ ಸಂಸದರ ಹಾಜರಾತಿ ಕುರಿತು ಪ್ರಶ್ನೆ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+