ಬೆಂಗಳೂರು-ದೆಹಲಿ ವಿಮಾನದಲ್ಲಿ ಮದ್ಯದ ಅಮಲಿನಲ್ಲಿ ಬೆತ್ತಲಾದ ಪ್ರಯಾಣಿಕ!
ನವದೆಹಲಿ, ಏಪ್ರಿಲ್ 9: ಬೆಂಗಳೂರಿನಿಂದ ದೆಹಲಿಗೆ ಏರ್ ಏಷ್ಯಾ ವಿಮಾನದಲ್ಲಿ ತೆರಳುತ್ತಿದ್ದ ಅಮಲಿನಲ್ಲಿದ್ದ ಪ್ರಯಾಣಿಕನೊಬ್ಬ ಬಟ್ಟೆಗಳನ್ನು ಕಳಚಿ ಬೆತ್ತಲಾಗಿ, ವಿಮಾನದ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ.
ಆ ಪ್ರಯಾಣಿಕ ಲೈಫ್ ಜಾಕೆಟ್ ತೆಗೆದುಕೊಂಡು ಅದರಲ್ಲಿ ಆಟವಾಡುತ್ತಿದ್ದ. ವಿಮಾನದಲ್ಲಿ ಬಾಂಬ್ ತಂದಿರುವುದಾಗಿ ಬೆದರಿಕೆಗಳನ್ನು ಹಾಕುತ್ತಿದ್ದ. ಕೊನೆಗೆ ಎದ್ದು ನಿಂತು ತನ್ನ ಬಟ್ಟೆಗಳನ್ನು ಕಳಚಿ ಬೆತ್ತಲಾದ. ಅವನನ್ನು ನಿಯಂತ್ರಿಸಲು ವಿಮಾನದ ಸಿಬ್ಬಂದಿ ಹರಸಾಹಸಪಡಬೇಕಾಯಿತು. ಈ ಘಟನೆ ಮಂಗಳವಾರ ಬೆಂಗಳೂರು-ದೆಹಲಿ ವಿಮಾನದಲ್ಲಿ ಸಂಭವಿಸಿದೆ.
'ಅಮಲಿನಲ್ಲಿದ್ದ ಅತಿಥಿಯೊಬ್ಬರು 2021ರ ಏಪ್ರಿಲ್ 6ರಂದು ಬೆಂಗಳೂರಿನಿಂದ ನವದೆಹಲಿಗೆ ತೆರಳುವ i5-722 ವಿಮಾನವೇರಿದ್ದರು. ವಿಮಾನದಲ್ಲಿ ಕರ್ತವ್ಯದಲ್ಲಿದ್ದ ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ಎಲ್ಲರ ಜತೆಗೆ ಅನುಚಿತ ರೀತಿಯಲ್ಲಿ ವರ್ತಿಸಲಾರಂಭಿಸಿದರು. ಆ ಅತಿಥಿಗೆ ತಮ್ಮನ್ನು ನಿಯಂತ್ರಿಸಿಕೊಳ್ಳುವಂತೆ ಪದೇಪದೇ ಸಲಹೆ ನೀಡಲಾಯಿತು. ವಿಮಾನದ ಸಿಬ್ಬಂದಿಯು ಅನೇಕ ಬಾರಿ ಮನವಿ ಮಾಡಿದ ಬಳಿಕ ಅವರು ತಮ್ಮನ್ನು ನಿಯಂತ್ರಿಸಿಕೊಂಡರು' ಎಂದು ಏರ್ ಏಷ್ಯಾ ಹೇಳಿಕೆ ಬಿಡುಗಡೆ ಮಾಡಿದೆ.

'ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಭೂಸ್ಪರ್ಶ ಮಾಡಿದ ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಅಡ್ಡಿಯುಂಟುಮಾಡುವ ಪ್ರಯಾಣಿಕರ ನಿರ್ವಹಣೆ ನೀತಿಯದಡಿ ವಿಮಾನ ಹಾಗೂ ಪ್ರಯಾಣಿಕರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಿಯಂತ್ರಣ ನಿಯಮಗಳ ಆಧಾರದಲ್ಲಿ ಏರ್ ಏಷ್ಯಾ ಇಂಡಿಯಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ' ಎಂದು ಅದು ತಿಳಿಸಿದೆ.
ಈ ಘಟನೆಯನ್ನು ಖಂಡಿಸಿರುವ ವಿಮಾನಯಾನ ಸಂಸ್ಥೆ, ವಿಮಾನದಲ್ಲಿ ಅನುಚಿತ ವರ್ತನೆಗಳನ್ನು ಯಾವುದೇ ರೀತಿ ಸಹಿಸುವುದಿಲ್ಲ ಎಂದು ಹೇಳಿದೆ.
Recommended Video
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications