ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಕಾಂಗ್ರೆಸ್ ಧೂಳಿಪಟ; ಪಿ. ಸಿ. ಚಾಕೋ ರಾಜೀನಾಮೆ

|
Google Oneindia Kannada News

ನವದೆಹಲಿ, ಫೆಬ್ರವರಿ 12 : ದೆಹಲಿ ವಿಧಾಸನಭೆ ಚುನಾವಣೆ ಫಲಿತಾಂಶದ ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಳಪೆ ಸಾಧನೆ ಮಾಡಿದೆ. ಹಿರಿಯ ಕಾಂಗ್ರೆಸ್ ನಾಯಕ ಪಿ. ಸಿ. ಚಾಕೋ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.

ಪಿ. ಸಿ. ಚಾಕೋ ದೆಹಲಿ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಮಂಗಳವಾರ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿತ್ತು. ಬುಧವಾರ ಪಿ. ಸಿ. ಚಾಕೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಶೀಲ ದೀಕ್ಷಿತ್‌ ಅವರ ವಿರುದ್ಧ ಆರೋಪ ಮಾಡಿದ್ದಾರೆ.

ದೆಹಲಿ ಚುನಾವಣೆ; ಕೇಜ್ರಿವಾಲ್ ಗೆಲುವಿಗೆ ಪ್ರಮುಖ 10 ಕಾರಣಗಳುದೆಹಲಿ ಚುನಾವಣೆ; ಕೇಜ್ರಿವಾಲ್ ಗೆಲುವಿಗೆ ಪ್ರಮುಖ 10 ಕಾರಣಗಳು

70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿತ್ತು. ಎಎಪಿ 62 ಸ್ಥಾನಗಳಲ್ಲಿ ಜಯಗಳಿಸಿ ಪುನಃ ಅಧಿಕಾರ ಪಡೆಯುವತ್ತ ಹೆಜ್ಜೆ ಇಟ್ಟಿದೆ. ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲುವು ಕಂಡು ಮುಖಭಂಗ ಅನುಭವಿಸಿತ್ತು.

ದೆಹಲಿ ಫಲಿತಾಂಶ; 'ಚಾಣಕ್ಯ' ಬಲದ ಬಗ್ಗೆ ಎಚ್‌ಡಿಕೆ ಟ್ವೀಟ್ ದೆಹಲಿ ಫಲಿತಾಂಶ; 'ಚಾಣಕ್ಯ' ಬಲದ ಬಗ್ಗೆ ಎಚ್‌ಡಿಕೆ ಟ್ವೀಟ್

ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸುಭಾಷ್ ಚೋಪ್ರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಹಿರಿಯ ನಾಯಕ ಪಿ. ಸಿ. ಚಾಕೋ ರಾಜೀನಾಮೆ ಕೊಟ್ಟಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟಾಗುತ್ತಿದೆ.

ದೆಹಲಿ ಚುನಾವಣೆ: ಅರವಿಂದ ಕೇಜ್ರಿವಾಲ್, ಬಿಜೆಪಿ ರಾಜಕೀಯದ ಸುತ್ತಾದೆಹಲಿ ಚುನಾವಣೆ: ಅರವಿಂದ ಕೇಜ್ರಿವಾಲ್, ಬಿಜೆಪಿ ರಾಜಕೀಯದ ಸುತ್ತಾ

2013ರಲ್ಲಿಯೇ ಆರಂಭ

2013ರಲ್ಲಿಯೇ ಆರಂಭ

"ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪತನ ಶೀಲಾ ದೀಕ್ಷಿತ್ ಮುಖ್ಯಮಂತ್ರಿಯಾಗಿದ್ದ 2013ರಲ್ಲಿಯೇ ಆರಂಭವಾಯಿತು. ಹೊಸದಾಗಿ ಅಸ್ತಿತ್ವಕ್ಕೆ ಬಂದ ಎಎಪಿ ಪಕ್ಷ ಕಾಂಗ್ರೆಸ್‌ನ ಎಲ್ಲಾ ಮತಗಳನ್ನು ಕಸಿದುಕೊಂಡಿತು. ಇದು ಇನ್ನೂ ಎಎಪಿಯ ಜೊತೆಯಲ್ಲಿಯೇ ಇದೆ" ಎಂದು ಪಿ. ಸಿ. ಚಾಕೋ ಹೇಳಿದ್ದಾರೆ

ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ

ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ

"ಶೀಲಾ ದೀಕ್ಷಿತ್ ಉತ್ತಮ ಆಡಳಿತಗಾರರು. ತಮ್ಮ ಆಡಳಿತದ ಅವಧಿಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರು ಶಕ್ತಿ ತುಂಬಿದರು. ಅವರು ತಮ್ಮ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕಾಗಿ ಮುಡುಪಾಗಿಟ್ಟಿದ್ದರು" ಎಂದು ಪಿ. ಸಿ. ಚಾಕೋ ಹೇಳಿದ್ದಾರೆ.

ಕಾಂಗ್ರೆಸ್ ಕಳಪೆ ಸಾಧನೆ

ಕಾಂಗ್ರೆಸ್ ಕಳಪೆ ಸಾಧನೆ

ದೆಹಲಿಯಲ್ಲಿ ಕಾಂಗ್ರೆಸ್‌ ಪಕ್ಷದ ಕಳಪೆ ಸಾಧನೆ ಮುಂದುವರೆದಿದೆ. ಈ ಬಾರಿಯ ಚುನಾವಣೆಯಲ್ಲಿಯೂ ಪಕ್ಷ ಯಾವುದೇ ಸ್ಥಾನವನ್ನು ಗಳಿಸುವಲ್ಲಿ ವಿಫಲವಾಗಿದೆ. 2015ರಲ್ಲಿ ಶೇ 9.7ರಷ್ಟು ಮತಗಳನ್ನು ಪಕ್ಷ ಪಡೆದಿತ್ತು. 2020ರ ಚುನಾವಣೆಯಲ್ಲಿ ಶೇ 4.27ರಷ್ಟು ಮತಗಳನ್ನು ಮಾತ್ರ ಪಡೆದಿದೆ.

ಬಿಜೆಪಿ-ಎಎಪಿ ಪೈಪೋಟಿ

ಬಿಜೆಪಿ-ಎಎಪಿ ಪೈಪೋಟಿ

ಕಾಂಗ್ರೆಸ್ ಪಕ್ಷ ದೆಹಲಿಯಲ್ಲಿ ತನ್ನ ಕಳಪೆ ಸಾಧನೆ ಮುಂದುವರೆಸಿದೆ. 2015ರಲ್ಲಿಯೂ ಯಾವುದೇ ಸ್ಥಾನ ಗೆದ್ದಿರಲಿಲ್ಲ. ಈ ಬಾರಿಯೂ ಒಂದು ಸ್ಥಾನ ಗೆದ್ದಿಲ್ಲ. ಆದರೆ, ಕಳೆದ ಬಾರಿ 9.7ರಷ್ಟು ಮತಗಳನ್ನು ಪಡೆದಿತ್ತು.

English summary
P. C. Chako quit the Delhi Congress in-charge post after the party poor performance in Delhi assembly elections 2020. Polls result announced on Wednesday AAP bagged 63 seat and Congress fail to get one seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X