ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಗಾಳ, ಅಸ್ಸಾಂನಲ್ಲಿ ಶಾಂತಿಯುತ ಮತದಾನ, ಬಿಜೆಪಿ ಗೆಲುವಿನ ಮುನ್ಸೂಚನೆ: ಅಮಿತ್ ಶಾ

|
Google Oneindia Kannada News

ನವದೆಹಲಿ, ಮಾರ್ಚ್ 28: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ ಶಾಂತಿಯುತ ಮತದಾನ ನಡೆದಿರುವುದು ಬಿಜೆಪಿ ಗೆಲುವಿನ ಮುನ್ಸೂಚನೆಯಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ 200ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಮಗೆ ಮತನೀಡಿದ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂಜನತೆಗೆ ಧನ್ಯವಾದಗಳು ಈ ಬಾರಿ ಚುನಾವಣೆಯಲ್ಲಿ ನಾವೇ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೊದಲ ಹಂತ: ಬಂಗಾಳ ಶೇ.79, ಅಸ್ಸಾಂ ಶೇ.72ರಷ್ಟು ಮತದಾನಮೊದಲ ಹಂತ: ಬಂಗಾಳ ಶೇ.79, ಅಸ್ಸಾಂ ಶೇ.72ರಷ್ಟು ಮತದಾನ

ಹಲವು ವರ್ಷಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಯಾವುದೇ ಹಿಂಸಾಚಾರವಿಲ್ಲದೆ ಮತದಾನ ನಡೆದಿದೆ. ಬಿಜೆಪಿಗೆ ಮತ ನೀಡಿರುವ ಪಶ್ಚಿಮ ಬಂಗಾಳದ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.

Peaceful Voting In Assam, West Bengal Positive Sign For Coming Days: Amit Shah

ಈ ಬಾರಿ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ಚುನಾವಣೆಯಲ್ಲಿ ಉತ್ಸಾಹವಿತ್ತು, ಚುನಾವಣೆ ಮುಗಿದ ಬಳಿಕ ಅಮಿತ್ ಶಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದ್ದರು.

ಅದರೊಂದಿಗೆ 30 ಕ್ಷೇತ್ರಗಳಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ತಿಳಿದುಬಂದಿದೆ. ಅಸ್ಸಾಂನಲ್ಲಿ 47 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, 37ಕ್ಕಿಂತಲೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಒಟ್ಟು 8 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಮಾರ್ಚ್ 27 ರಂದು ಶುರುವಾಗಿದೆ.

English summary
Union Home Minister Amit Shah on Sunday expressed his confidence that Bhartiya Janata Party (BJP) will form government in West Bengal with more than 200 seats after the first phase of state Assembly Elections were conducted on Saturday in West Bengal and Assam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X