ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಗಾಸಸ್ ಬೇಹುಗಾರಿಗೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ಚಿದಂಬರಂ 'ಸರಳ ಪ್ರಶ್ನೆ'

|
Google Oneindia Kannada News

ನವದೆಹಲಿ, ಆಗಸ್ಟ್ 3: ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ನೇರ ಪ್ರಶ್ನೆಯೊಂದನ್ನು ಕೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಿದ ಅವರು, ಇಸ್ರೇಲಿ ಸಂಸ್ಥೆಯ NSO ಗ್ರೂಪ್‌ನ ಗ್ರಾಹಕರಾಗಿದ್ದಾರೆಯೇ ಇಲ್ಲವೇ ಎಂಬುದರ ಕುರಿತು ನೇರ ಉತ್ತರವನ್ನು ನೀಡುವುದು ಕೇಂದ್ರ ಸರ್ಕಾರಕ್ಕೆ ಏಕೆ ಕಷ್ಟವಾಗಿದ್ದೆ ಎಂದು ಪ್ರಶ್ನಿಸಿದ್ದಾರೆ. ಈಗಾಗಲೇ ಈ NGO ಗ್ರೂಪ್ 100ಕ್ಕೂ ಹೆಚ್ಚು ಗ್ರಾಹಕರಣನ್ನು ಹೊಂದಿದ್ದು, ಈ ಪೈಕಿ 40 ಸರ್ಕಾರಗಳು ಮತ್ತು 60 ಏಜೆನ್ಸಿಗಳು ಸೇರಿವೆ ಎಂದರು.

ಪೆಗಾಸಸ್ ಬಳಕೆಗೆ ಪರವಾನಗಿ ಪಡೆದುಕೊಂಡಿದೆಯಾ ಕೇಂದ್ರ ಸರ್ಕಾರ!? ಪೆಗಾಸಸ್ ಬಳಕೆಗೆ ಪರವಾನಗಿ ಪಡೆದುಕೊಂಡಿದೆಯಾ ಕೇಂದ್ರ ಸರ್ಕಾರ!?

ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಭಾರತದಲ್ಲಿ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ತೀವ್ರ ಚರ್ಚೆಯನ್ನು ಹುಟ್ಟು ಹಾಕಿದೆ. ದೇಶದ ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ ಎಂದ ಆರೋಪವಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

Pegasus Scandal: P Chidambarams Simple Question To Centre Govt

ಪೆಗಾಸಸ್ ಬಗ್ಗೆ ಸಾಮಾನ್ಯ ಪ್ರಶ್ನೆ:

"ಒಂದು ಸಾಮಾನ್ಯ ಪ್ರಶ್ನೆ: NSO ಗ್ರೂಪ್‌ನ 40 ಗ್ರಾಹಕ ಸರ್ಕಾರಗಳ ಪೈಕಿ ಭಾರತೀಯ ಸರ್ಕಾರವೂ ಸೇರಿದೆಯೇ?, ಇಂಥ ಸಾಮಾನ್ಯ ಪ್ರಶ್ನೆಗೆ ನೇರವಾಗಿ ಉತ್ತರಿಸಲು ಕೇಂದ್ರ ಸರ್ಕಾರಕ್ಕೆ ಏಕೆ ಕಷ್ಟವಾಗುತ್ತಿದೆ," ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಕೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೇ ಉತ್ತರ ನೀಡಬೇಕು

"ಕೆಲವೇ ಕೆಲವು ತಂಡಗಳು ಈ ಬೇಹುಗಾರಿಕೆಯಲ್ಲಿ ತೊಡಗಿವೆ. ಆದರೆ ದೇಶದಲ್ಲಿರುವ ಎಲ್ಲ ಇಲಾಖೆಗಳ ತಂಡಗಳ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಿಡಿತ ಸಾಧಿಸಿರುತ್ತಾರೆ. ಪ್ರತಿಯೊಬ್ಬ ಸಚಿವರು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಏನಾಗುತ್ತಿದೆ ಎಂಬುದನ್ನು ತಿಳಿದುಕೊಂಡಿರುತ್ತಾರೆ. ಆದರೆ ಪ್ರಧಾನಮಂತ್ರಿಗೆ ಎಲ್ಲಾ ಇಲಾಖೆಗಳಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಗೊತ್ತಿರುತ್ತದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರೇ ಮುಂದೆ ಬಂದು ಬೇಹುಗಾರಿಕೆ ನಡೆದಿದೆಯೋ ಇಲ್ಲವೋ, ನಡೆದಿದ್ದರೆ ವೈಫಲ್ಯ ಆಗಿರುವುದು ಎಲ್ಲಿ ಎಂಬುದರ ಬಗ್ಗೆ ಉತ್ತರ ನೀಡಬೇಕಿದೆ ಎಂದು ಪಿ ಚಿದಂಬರಂ ಆಗ್ರಹಿಸಿದ್ದಾರೆ.

ವಿರೋಧ ಪಕ್ಷಗಳ ಆರೋಪ ತಳ್ಳಿ ಹಾಕಿದ ಕೇಂದ್ರ ಸರ್ಕಾರ:

ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ವರದಿಯು ಆಧಾರ ರಹಿತ ಆರೋಪವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು. "ಈ ಬೇಹುಗಾರಿಕೆ ಆರೋಪದ ಹಿಂದೆ ಎಲ್ಲ ಪ್ರತಿಪಕ್ಷಗಳ ಕೈವಾಡವಿದೆ. ಪೆಗಾಸಸ್ ಮೂಲಕ ಗೂಢಾಚಾರಿಕೆ ನಡೆಸಿರುವ ಬಗ್ಗೆ ಯಾವುದೇ ಆಧಾರಗಳಿಲ್ಲದೇ ಆರೋಪಿಸಲಾಗುತ್ತಿದೆ," ಎಂದು ಹೇಳಿದ್ದರು. ಅಲ್ಲದೇ, "ಪೆಗಾಸಸ್ ತಂತ್ರಾಂಶದ ಬಗ್ಗೆ ನಾವು ತರ್ಕಬದ್ಧವಾಗಿ ವಿಶ್ಲೇಷಣೆ ಮಾಡಿದಾಗ ಇದರ ಹಿಂದೆ ಯಾವುದೇ ಆಧಾರವಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ನಮ್ಮ ಸಂಸ್ಥೆಗಳ ಕಣ್ಗಾವಲಿನಲ್ಲಿ ಇರುವ ಕಾನೂನು ಮತ್ತು ದೃಢವಾದ ಅಂಕಿ-ಅಂಶಗಳಲ್ಲಿ ಯಾವುದೇ ರೀತಿ ಅಕ್ರಮ ಪ್ರವೇಶಕ್ಕೆ ಅವಕಾಶವೇ ಇಲ್ಲ. ಭಾರತದಲ್ಲಿ ರಾಷ್ಟ್ರೀಯ ಭದ್ರತೆಯ ಉದ್ದೇಶಕ್ಕಾಗಿ ಎಲೆಕ್ಟ್ರಾನಿಕ್ ಸಂವಹನದ ಕಾನೂನುಬದ್ಧ ಪ್ರತಿಬಂಧನದ ಒಂದು ಸುಸ್ಥಾಪಿತ ಕಾರ್ಯವಿಧಾನವಿದೆ," ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದರು.

ಪೆಗಾಸಸ್ ಗೂಢಾಚಾರಿಕೆ ಬಗ್ಗೆ ತನಿಖೆ ವರದಿ ಪ್ರಕಟ

ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಬೇಹುಗಾರಿಕೆಗೆ ಸಂಬಂಧಿಸಿದಂತೆ ಫ್ರಾನ್ಸ್ ತನಿಖೆ

ಫ್ರಾನ್ಸ್ ಅಧ್ಯಕ್ಷ ಎಮ್ಯಾನುವೆಲ್ ಮ್ಯಾಕ್ರೋನ್ ಮೊಬೈಲ್ ಸಂಖ್ಯೆ ಹ್ಯಾಕ್ ಆಗಿರುವ ಬಗ್ಗೆ ಗೊತ್ತಾಗುತ್ತಿದ್ದಂತೆ ಫ್ರಾನ್ಸ್ ಸರ್ಕಾರವು ತನಿಖೆಗೆ ಆದೇಶಿಸಿತು. ರಾಷ್ಟ್ರೀಯ ಭದ್ರತಾ ಸಮಿತಿಗೆ ತನಿಖೆ ಹೊಣೆಯನ್ನು ವಹಿಸಲಾಯಿತು. ಎರಡು ಪ್ರಮುಖ ರಾಷ್ಟ್ರಗಳು ತನಿಖೆಗೆ ಆದೇಶಿಸಿವೆ ಎಂದಾಗ ಭಾರತ ಮಾತ್ರ ಏಕೆ ಈ ಕುರಿತು ತನಿಖೆ ನಡೆಸುವುದಕ್ಕೆ ಮುಂದಾಗಿಲ್ಲ. ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಷಯವಾಗಿದ್ದು, ಬೇಹುಗಾರಿಕೆ ನಡೆದಿದೆಯೋ ಇಲ್ಲವೋ ಎನ್ನುವುದು ಸ್ಪಷ್ಟವಾಗಬೇಕಿದೆ. ಸರ್ಕಾರಕ್ಕೆ ಮಾಹಿತಿ ಇಲ್ಲದೇ ವಿದೇಶಿ ತಂಡವೊಂದು ದೇಶದ ಮೊಬೈಲ್ ಸಂಖ್ಯೆಯನ್ನು ಕದಿಯುತ್ತದೆ ಎಂದರೆ ಅದು ಸಾಧ್ಯವೇ. ಹಾಗೊಂದು ವೇಳೆ ಕದಿಯುವುದಕ್ಕೆ ಅವಕಾಶ ನೀಡುವುದಾದರೆ ಸರ್ಕಾರದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ. ಈ ಬಗ್ಗೆ ಗಂಭೀರವಾಗಿ ಆಲೋಚಿಸಬೇಕಿದೆ ಎಂದು ಹೇಳಿದ್ದಾರೆ.

English summary
Pegasus Scandal: P Chidambaram's Simple Question To Centre Govt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X