ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಗಾಸಸ್ ಬೇಹುಗಾರಿಕೆ ಆರೋಪಕ್ಕೆ ಆಧಾರವಿಲ್ಲ ಎಂದ ಐಟಿ ಸಚಿವರು

|
Google Oneindia Kannada News

ನವದೆಹಲಿ, ಜುಲೈ 22: ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ವರದಿಯು ಆಧಾರ ರಹಿತ ಆರೋಪವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಸಂಸತ್ ಅಧಿವೇಶನದ ಮೂರನೇ ದಿನವಾದ ಗುರುವಾರ ರಾಜ್ಯಸಭೆಯಲ್ಲಿ ಅವರು ಮಾತನಾಡಿದರು. "ಈ ಬೇಹುಗಾರಿಕೆ ಆರೋಪದ ಹಿಂದೆ ಎಲ್ಲ ಪ್ರತಿಪಕ್ಷಗಳ ಕೈವಾಡವಿದೆ. ಪೆಗಾಸಸ್ ಮೂಲಕ ಗೂಢಾಚಾರಿಕೆ ನಡೆಸಿರುವ ಬಗ್ಗೆ ಯಾವುದೇ ಆಧಾರಗಳಿಲ್ಲದೇ ಆರೋಪಿಸಲಾಗುತ್ತಿದೆ," ಎಂದು ಹೇಳಿದರು.

ಪೆಗಾಸಸ್‌ ಬೇಹುಗಾರಿಕೆ ಬಗ್ಗೆ ಎಸ್‌ಐಟಿ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿಪೆಗಾಸಸ್‌ ಬೇಹುಗಾರಿಕೆ ಬಗ್ಗೆ ಎಸ್‌ಐಟಿ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಹೇಳಿಕೆ ನೀಡುತ್ತಿದ್ದಂತೆ ಪ್ರತಿಪಕ್ಷ ನಾಯಕರು ಕೆಂಡಾಮಂಡಲರಾದರು. ಟಿಎಂಸಿ ಸಂಸದ ಶಾಂತಾನು ಸೇನ್ ಮಧ್ಯ ಪ್ರವೇಶಿಸುತ್ತಿದ್ದಂತೆ ಕಲಾಪದಲ್ಲಿ ಗದ್ದಲ ಗಲಾಟೆ ಹೆಚ್ಚಾಯಿತು. ಈ ಹಿನ್ನೆಲೆ ರಾಜ್ಯಸಭೆಯನ್ನು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.

 Pegasus Spyware is Baseless Allegation; Central IT minister Ashwini Vaishnaw Reaction In RS

ಸೋಮವಾರ ಪೆಗಾಸಸ್ ಬಗ್ಗೆ ಅಶ್ವಿನಿ ವೈಷ್ಣವ್ ಉತ್ತರ:

"ಪೆಗಾಸಸ್ ತಂತ್ರಾಂಶದ ಬಗ್ಗೆ ನಾವು ತರ್ಕಬದ್ಧವಾಗಿ ವಿಶ್ಲೇಷಣೆ ಮಾಡಿದಾಗ ಇದರ ಹಿಂದೆ ಯಾವುದೇ ಆಧಾರವಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ನಮ್ಮ ಸಂಸ್ಥೆಗಳ ಕಣ್ಗಾವಲಿನಲ್ಲಿ ಇರುವ ಕಾನೂನು ಮತ್ತು ದೃಢವಾದ ಅಂಕಿ-ಅಂಶಗಳಲ್ಲಿ ಯಾವುದೇ ರೀತಿ ಅಕ್ರಮ ಪ್ರವೇಶಕ್ಕೆ ಅವಕಾಶವೇ ಇಲ್ಲ. ಭಾರತದಲ್ಲಿ ರಾಷ್ಟ್ರೀಯ ಭದ್ರತೆಯ ಉದ್ದೇಶಕ್ಕಾಗಿ ಎಲೆಕ್ಟ್ರಾನಿಕ್ ಸಂವಹನದ ಕಾನೂನುಬದ್ಧ ಪ್ರತಿಬಂಧನದ ಒಂದು ಸುಸ್ಥಾಪಿತ ಕಾರ್ಯವಿಧಾನವಿದೆ," ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು.

 Pegasus Spyware is Baseless Allegation; Central IT minister Ashwini Vaishnaw Reaction In RS

ಭಾರತದಲ್ಲಿ ಯಾರ ಮೇಲೆ ಪೆಗಾಸಸ್ ಬೇಹುಗಾರಿಕೆ?

Recommended Video

Pegasus ಫೋನ್ ನಲ್ಲಿ ಒಮ್ಮೆ ಇನ್ಸ್ಟಾಲ್ ಆದ್ರೆ ಏನೇನ್ ಮಾಡುತ್ತೆ? | How it Hacks into WhatsApp ? | Oneindia Kannada

ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಭಾರತದಲ್ಲಿ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ತೀವ್ರ ಚರ್ಚೆಯನ್ನು ಹುಟ್ಟು ಹಾಕಿದೆ. ದೇಶದ ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ ಎಂದ ಆರೋಪವಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

English summary
Pegasus Spyware is Baseless Allegation; Central IT minister Ashwini Vaishnaw Reaction In Rajya Sabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X