ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಣ್ಣ ಪ್ರಮಾಣ ಅಸಾಂವಿಧಾನಿಕ : ತ್ವರಿತ ವಿಚಾರಣೆಗೆ ಸುಪ್ರೀಂ ನಕಾರ

By Prasad
|
Google Oneindia Kannada News

ನವದೆಹಲಿ, ಮೇ 22 : ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಅಸಾಂವಿಧಾನಿಕವಾಗಿದೆ ಎಂದು ಸಲ್ಲಿಸಲಾಗಿರುವ ಅರ್ಜಿಯ ತ್ವರಿತ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ.

ಮೇ 23ರಂದು, ಗುರುವಾರ ಜಾಜ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದನ್ನು ಪ್ರಶ್ನಿಸಿ ಹಿಂದೂ ಮಹಾಸಭಾ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.

ಪದಗ್ರಹಣಕ್ಕೆ ಸೋನಿಯಾ, ರಾಹುಲ್ ಗಾಂಧಿಗೆ ಆಹ್ವಾನ ನೀಡಿದ ಎಚ್ಡಿಕೆ ಪದಗ್ರಹಣಕ್ಕೆ ಸೋನಿಯಾ, ರಾಹುಲ್ ಗಾಂಧಿಗೆ ಆಹ್ವಾನ ನೀಡಿದ ಎಚ್ಡಿಕೆ

ಕುಮಾರಸ್ವಾಮಿಯವರು 23ನೇ ತಾರೀಖಿನಂದೇ ಪ್ರಮಾಣ ಸ್ವೀಕರಿಸುತ್ತಿರುವುದರಿಂದ ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಿ, ಪ್ರಮಾಣ ವಚನ ಸಮಾರಂಭಕ್ಕೆ ತಡೆಯೊಡ್ಡಬೇಕು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಇದನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದ್ದಾರೆ.

ಶಾಸ್ತ್ರೋಕ್ತವಾಗಿ ನಡೆಯಲಿದೆ ಎಚ್.ಡಿ.ಕುಮಾರಸ್ವಾಮಿ ಪ್ರಮಾಣವಚನಶಾಸ್ತ್ರೋಕ್ತವಾಗಿ ನಡೆಯಲಿದೆ ಎಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ

Petition challenging oath taking ceremony of Kumaraswamy before SC

ಇದು, ಕರ್ನಾಟಕದ ಚುನಾವಣೆ ಮತ್ತು ಸರಕಾರಕ್ಕೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಸರ್ವೋಚ್ಚ ನ್ಯಾಯಲಯದ ಮುಂದೆ ಸಲ್ಲಿಸಲಾಗಿರುವ ಮೂರನೇ ಅರ್ಜಿ. ಮೊದಲನೇ ಅರ್ಜಿಯನ್ನು, ರಾಜ್ಯಪಾಲ ವಜುಭಾಯಿ ವಾಲಾ ಅವರು ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರಕಾರ ರಚಿಸಲು ಆಹ್ವಾನ ನೀಡಿದ್ದನ್ನು ಪ್ರಶ್ನಿಸಿ ಮೇ 16ರ ಮಧ್ಯರಾತ್ರಿ ಸಲ್ಲಿಸಲಾಗಿತ್ತು.

ರೇಷ್ಮೆ ದಿರಿಸಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನರೇಷ್ಮೆ ದಿರಿಸಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನ

ಇದರ ವಿಚಾರಣೆಯನ್ನು ರಾತ್ರಿ 2 ಗಂಟೆಗೆ ನಡೆಸಿದ ಮೂವರು ನ್ಯಾಯಮೂರ್ತಿಗಳ ಪೀಠ, ರಾಜ್ಯಪಾಲರ ತೀರ್ಮಾನಕ್ಕೆ ತಡೆ ವೊಡ್ಡಲಿಲ್ಲವಾದರೂ, ಬಹುಮತವನ್ನು ಒಂದೇ ದಿನದಲ್ಲಿ ಸಾಬೀತುಪಡಿಸಬೇಕೆಂದು ಆದೇಶ ನೀಡಿ, ಯಡಿಯೂರಪ್ಪನವರನ್ನು ಇಕ್ಕಟ್ಟಿನಲ್ಲಿ ತಳ್ಳಿತ್ತು. ವಿರೋಧಪಕ್ಷದ ಶಾಸಕರನ್ನು ಸೆಳೆಯಲು ಸಮಯ ಸಾಲದೆ, ಯಡಿಯೂರಪ್ಪನವರ ಸರಕಾರ ಮೂರೇ ದಿನದಲ್ಲಿ ಬಿದ್ದುಹೋಯಿತು.

ನನ್ನ ನಿದ್ದೆಗೆಡಿಸಲು ಯಾರಿಂದಲೂ ಸಾಧ್ಯವಿಲ್ಲ : ಕುಮಾರಸ್ವಾಮಿನನ್ನ ನಿದ್ದೆಗೆಡಿಸಲು ಯಾರಿಂದಲೂ ಸಾಧ್ಯವಿಲ್ಲ : ಕುಮಾರಸ್ವಾಮಿ

ಮತ್ತೊಂದು ಅರ್ಜಿಯನ್ನು, ಇದೇ ರಾಜ್ಯಪಾಲರು ಹಂಗಾಮಿ ಸ್ಪೀಕರನ್ನಾಗಿ ಕೆಜಿ ಬೋಪಯ್ಯ ಅವರನ್ನು ಆಯ್ಕೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿತ್ತು. ಅವರಿಗಿಂತ ಹಿರಿಯ ನಾಯಕರಿದ್ದರೂ ಬಿಜೆಪಿ ಪರವಾಗಿರುವ ಬೋಪಯ್ಯನವರನ್ನೇಕೆ ನೇಮಿಸಲಾಗಿದೆ ಎಂದು ಪ್ರಶ್ನಿಸಲಾಗಿತ್ತು. ಈ ಅರ್ಜಿಯನ್ನು ಹಿಂದಿನ ರಾತ್ರಿ ಆಲಿಸಲು ನಿರಾಕರಿಸಿದ್ದ ಕೋರ್ಟ್, ಮರುದಿನ ಬಹುಮತ ಸಾಬೀತಿನ ದಿನದಂತೆ ವಿಚಾರಣೆ ನಡೆಸಿ, ಅರ್ಜಿಯನ್ನು ತಿರಸ್ಕರಿಸಿತ್ತು.

In Pics: ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಕುಮಾರಸ್ವಾಮಿ

ಈಗ ಸುಪ್ರೀಂ ಕೋರ್ಟಿನ ಮುಂದೆ ಮತ್ತೊಂದು ಅರ್ಜಿಯನ್ನು ಗುಜರಾಯಿಸಲಾಗಿದೆ. ತ್ವರಿತವಾಗಿ ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಕುಮಾರಸ್ವಾಮಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಗುರುವಾರ ಸಂಜೆ 4.30ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ನಿರಾತಂಕವಾಗಿ ನಡೆಯಲಿದೆ. ಈ ಸಮಾರಂಭಕ್ಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಅರವಿಂದ್ ಕೇಜ್ರಿವಾಲ್, ಮಾಯಾವತಿ, ಮಮತಾ ಬ್ಯಾನರ್ಜಿ, ಅಖಿಲೇಶ್, ಕಮಲ್ ಹಾಸನ್ ಮುಂತಾದವರು ಬರುತ್ತಿದ್ದಾರೆ.

English summary
Supreme court refused to give an early hearing into the petition filed by Hindu Mahasabha that challenged the oath taking ceremony and appointment of H D Kumaraswamy as the Karnataka Chief Minister, stating it is unconstitutional.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X