ಸಹಾಯಕ ಪ್ರಾಧ್ಯಾಪಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಪಿಎಚ್‌ಡಿ ಕಡ್ಡಾಯವಲ್ಲ ಎಂದ ಯುಜಿಸಿ
ನವದೆಹಲಿ, ಅಕ್ಟೋಬರ್ 14: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಪಿಎಚ್‌ಡಿ ಕಡ್ಡಾಯವಾಗಿದೆ. ಆದರೆ ಈ ಬಾರಿ ನಿಯಮದಿಂದ ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ಸಡಿಲಿಕೆ ನೀಡಿದೆ.
ಕಡ್ಡಾಯವಾಗಿ ಪಿಎಚ್‌ಡಿ ಹೊಂದಿರಲೇಬೇಕು ಎಂದಿರುವ ತನ್ನ ಆದೇಶವನ್ನು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಆಯೋಗ, ಕಡ್ಡಾಯವಾಗಿ ಪಿಎಚ್‌ಡಿ ಹೊಂದುವ ಅಗತ್ಯವಿಲ್ಲ ಎಂದು ಹೇಳಿದೆ.
ಕಳೆದ ಎರಡು ವರ್ಷಗಳಿಂದ ಕೊರೊನಾ ಸೋಂಕು ಹಿನ್ನೆಲೆಯಲ್ಲಿ, ಈ ವರ್ಷ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಿಕೊಳ್ಳಲು ಪಿಎಚ್‌ಡಿಯನ್ನು ಕನಿಷ್ಠ ಅರ್ಹತೆಯನ್ನಾಗಿ ಮಾಡುವ ಯೋಜನೆಯನ್ನು ಮುಂದುವರಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಆದ್ದರಿಂದ, ಈ ಆದೇಶ ಹೊರಡಸಲಾಗಿದೆ ಎಂದಿರುವ ವಿಶ್ವವಿದ್ಯಾಲಯಗಳ ಅನುದಾನ ಆಯೋಗ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಎಚ್‌ಡಿ ಕಡ್ಡಾಯ ಎಂಬ ಆದೇಶವನ್ನು ಜುಲೈ 2023ರ ಜುಲೈ 1ರವರೆಗೆ ಮುಂದೂಡಿದೆ. ಇದರ ಅರ್ಥ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್‌ಡಿ ಕಡ್ಡಾಯವಲ್ಲ ಎಂದ ಈ ಆದೇಶವು 2023ರ ಜುಲೈ1ರವರೆಗೆ ಚಾಲ್ತಿಯಲ್ಲಿ ಇರುತ್ತದೆ.
2018 ರಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗವು, ವಿಶ್ವವಿದ್ಯಾಲಯಗಳು ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶ ಮಟ್ಟದ ಹುದ್ದೆಗಳ ನೇಮಕಾತಿಗಳ ಮಾನದಂಡಗಳನ್ನು ನಿಗದಿ ಮಾಡಿತ್ತು. ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಮೂರು ವರ್ಷಗಳ ಗಡುವು ನೀಡಲಾಗಿತ್ತು.
2021-22ರ ಅವಧಿಗೆ ಇವರಿಗೆ ಬಡ್ತಿ ನೀಡುವ ಸಮಯದಲ್ಲಿ ಪಿಎಚ್‌ಡಿ ಕಡ್ಡಾಯವನ್ನು ಪರಿಗಣಿಸಬೇಕು ಎಂದು ಸೂಚಿಸಲಾಗಿತ್ತು. ಈ ಅವಧಿಯಲ್ಲಿ ಅವರು ಪಿಎಚ್‌ಡಿ ಮುಗಿಸಬೇಕು ಎಂದು ಹೇಳಲಾಗಿತ್ತು. ಅದನ್ನೀಗ ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪಾಸಾದ ಸ್ನಾತಕೋತ್ತರ ಪದವೀಧರರು ಈ ಹುದ್ದೆಯಲ್ಲಿ ಸದ್ಯ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications