ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಸಚಿವ ಸತ್ಯಂದರ್ ಜೈನ್ ಸ್ಥಿತಿ ಗಂಭೀರ, ಪ್ಲಾಸ್ಮಾ ಥೆರಪಿಗೆ ನಿರ್ಧಾರ

|
Google Oneindia Kannada News

ದೆಹಲಿ, ಜೂನ್ 19: ದೆಹಲಿ ಆರೋಗ್ಯ ಸಚಿವ ಸತ್ಯಂದರ್ ಜೈನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವ ಜೈನ್ ಅವರಿಗೆ ಶ್ವಾಸಕೋಶದ ಸಮಸ್ಯೆ ಹೆಚ್ಚಾಗಿದ್ದು, ಆಕ್ಸಿಜನ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.

Recommended Video

ಕೊರೋನಾ ಸೋಂಕಿತರಲ್ಲಿ ಕೆಲವರಿಗೆ ಹಾರ್ಟ್ ಅಟ್ಯಾಕ್ ಆಗ್ತಿರೋದು ಯಾಕೆ? | Oneindia Kannada

ಕೊವಿಡ್ ಸೋಂಕಿಗೆ ತುತ್ತಾಗಿರುವ ಸತ್ಯೇಂದರ್ ಜೈನ್ ಅವರಿಗೆ ನ್ಯುಮೋನಿಯಾ ರೋಗವಿರುವುದರಿಂದ ಶ್ವಾಸಕೋಶದ ಸಮಸ್ಯೆ ಉಲ್ಬಣವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Breaking: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್‌ ಆಸ್ಪತ್ರೆಗೆ ದಾಖಲುBreaking: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್‌ ಆಸ್ಪತ್ರೆಗೆ ದಾಖಲು

ಸದ್ಯ ಜೈನ್ ಅವರ ಆರೋಗ್ಯ ಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಅವರನ್ನು ಸಾಕತ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರಿಗೆ ಪ್ಲಾಸ್ಮಾ ಚಿಕಿತ್ಸೆಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.

Plasma therapy treatment for Delhi Minister Satyendar Jain

ಇನ್ನು ಆಮ್ ಆದ್ಮಿ ಪಕ್ಷದ ಶಾಸಕ ಅತಿಶಿ ಮತ್ತು ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಲಹೆಗಾರ ಅಕ್ಷಯ್ ಮರಾಠೆ ಹಾಗೂ ಉಪ ಸಿಎಂ ಮನೀಶ್ ಸಿಸೋಡಿಯಾ ಅವರ ಸಲಹೆಗಾರ ಅನಿಂದಿತಾ ಮಾಥುರ್ ಅವರಿಗೆ ಸಹ ಕೊವಿಡ್ ದೃಢಪಟ್ಟಿತ್ತು. ಇವರು ಕೂಡ ಉಸಿರಾಟದ ಕಾಯಿಲೆಗೆ ಗುರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಸತ್ಯಂದರ್ ಜೈನ್ ಅವರು ಆದಷ್ಟೂ ಬೇಗ ಚೇತರಿಸಿಕೊಳ್ಳಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವಿಟ್ಟರ್ ಮೂಲಕ ಶುಭಹಾರೈಸಿದ್ದರು.

English summary
Delhi Minister Satyendar Jain being shifted to Saket's Max Hospital, where he will be administered Plasma therapy for COVID19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X