ಚುನಾವಣಾ ಪ್ರಚಾರ ವೇಳೆ ಮಾಸ್ಕ್‌ ಕಡ್ಡಾಯ: ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ನವದೆಹಲಿ, ಏಪ್ರಿಲ್ 8: ಚುನಾವಣಾ ಪ್ರಚಾರದ ವೇಳೆ ಮಾಸ್ಕ್ ಕಡ್ಡಾಯ ಮಾಡಬೇಕೆ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ.

ಪ್ರಸ್ತುತ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆ ಸಂದರ್ಭದಲ್ಲಿ ಪ್ರಚಾರ ವೇಳೆ ಭಾಗಿಯಾಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಆದೇಶ ಹೊರಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿ ಬಗ್ಗೆ ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ.

ಮುಂದಿನ ವಿಚಾರಣೆಯನ್ನು ಏಪ್ರಿಲ್ 30ಕ್ಕೆ ನಿಗದಿಪಡಿಸಿದ ನ್ಯಾಯಾಲಯ ಕೋವಿಡ್-19 ಸಾಂಕ್ರಾಮಿಕ ನಂತರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ನಿರಂತರವಾಗಿ ಉಲ್ಲಂಘಿಸುತ್ತಿರುವ ಪ್ರಚಾರಕರು ಮತ್ತು ಅಭ್ಯರ್ಥಿಗಳನ್ನು ಬಹಿಷ್ಕರಿಸಬೇಕೆಂದು ವಿಕ್ರಮ್ ಸಿಂಗ್ ಕೋರಿದ್ದರು.

Plea For Compulsory Masking During Poll Campaigns: HC Seeks Stand Of Centre, EC

ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್ ಹೊರಡಿಸಿದ್ದು, ಉತ್ತರ ಪ್ರದೇಶದ ಮಾಜಿ ಡಿಜಿಪಿ ವಿಕ್ರಮ್ ಸಿಂಗ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ನೋಟಿಸ್ ಜಾರಿ ಮಾಡಿದೆ.

ಸಿಂಗ್ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ವಿರಾಗ್ ಗುಪ್ತ, ಚುನಾವಣಾ ಆಯೋಗ ಮಾಸ್ಕ್ ಧರಿಸುವ ಬಗ್ಗೆ ಸೋಷಿಯಲ್ ಮೀಡಿಯಾ, ಎಲೆಕ್ಟ್ರಾನಿಕ್ಸ್, ಪ್ರಿಂಟ್ ಮೀಡಿಯಾ ಮೂಲಕ ಅರಿವು, ಪ್ರಚಾರ ಮೂಡಿಸಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+