ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆ ಚುನಾವಣೆ 2021: ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

|
Google Oneindia Kannada News

ನವದೆಹಲಿ,ಫೆಬ್ರವರಿ 21: ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಮಾರ್ಗದರ್ಶನ ನೀಡಿದ್ದಾರೆ. ಹೊಸ ಕೃಷಿ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳ,ಉತ್ತರ ಪ್ರದೇಶ, ಹರ್ಯಾಣ ಹಾಗೂ ಪಂಜಾಬ್‌ನ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವದ್ದಾಗಿದೆ.

ನರೇಂದ್ರ ಮೋದಿ ಬಿಜೆಪಿ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿಗಳು,ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕೃಷಿ ಉತ್ಪನ್ನ ಆಮದಿಗೆ ಮಾಡುವ ವೆಚ್ಚ ರೈತರಿಗೆ ಸಿಗುವಂತಾಗಬೇಕು: ಮೋದಿಕೃಷಿ ಉತ್ಪನ್ನ ಆಮದಿಗೆ ಮಾಡುವ ವೆಚ್ಚ ರೈತರಿಗೆ ಸಿಗುವಂತಾಗಬೇಕು: ಮೋದಿ

ಪ್ರಧಾನಿ ರಾಷ್ಟ್ರೀಯ ಪದಾಧಿಕಾರಿಗಳನ್ನುದ್ದೇಶಿ ಮಾರ್ಗದರ್ಶನ ನೀಡಿದ ಬಳಿಕ, ರಾಜ್ಯಗಳಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗಳು, ಆತ್ಮನಿರ್ಭರಭಾರತ ಅಭಿಯಾನ ಮತ್ತು ಕೃಷಿ ಕಾಯ್ದೆಗಳ ಕುರಿತು ಚರ್ಚೆ ನಡೆಯುತ್ತಿದೆ. ರಾಜ್ಯ ಮಟ್ಟದ ತಂಡಗಳ ಸಭೆಗಳುಹಾಗೂ ಸಂವಾದಗಳನ್ನುಆಯೋಜಿಸಲಾಗುತ್ತಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.

PM Attending Strategy Session Ahead Of Coming Round Of State Elections

ಕಳೆದ ವರ್ಷ ಜೆಪಿ ನಡ್ಡಾ ಅವರು ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ರಾಷ್ಟ್ರೀಯ ಪದಾಧಿಕಾರಿಗಳ ನೇಮಕ ಮಾಡಲಾಗಿತ್ತು. ಆ ಬಳಿಕ ಕರೊನಾ ಸೋಂಕಿನಿಂದಾಗಿ ಅವರು ಸಭೆ ಸೇರಲು ಸಾಧ್ಯವಾಗಿರಲಿಲ್ಲ.

ಪ್ರತಿಭಟನೆಯನ್ನು ದೇಶದ ಇತರೆ ಪ್ರದೇಶಗಳಿಗೂ ವಿಸ್ತರಿಸಲು ಹಾಗೂ ಮೋದಿ ಸರ್ಕಾದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಪ್ರಯತ್ನಿಸುತ್ತಿವೆ.
ಈ ಮಧ್ಯೆ ಪಶ್ಚಿಮ ಬಂಗಾಳ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ಧವಾಗುತ್ತಿದೆ.

English summary
Prime Minister Narendra Modi is participating in a daylong election strategy session in Delhi today. Elections in five states are due over the coming months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X