• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರಧಾನಿ ಮೋದಿಯಿಂದ ಕೋವಿಡ್ 19 ಪರಿಸ್ಥಿತಿ ಅವಲೋಕನ

|
Google Oneindia Kannada News

ನವದೆಹಲಿ, ಮೇ 15: ದೇಶದ ಕೊರೊನಾ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ಅವಲೋಕನ ನಡೆಸಿದರು.

ಗ್ರಾಮೀಣ ಪ್ರದೇಶದಲ್ಲಿ ಮನೆ ಬಾಗಿಲಿಗೆ ಕೋವಿಡ್-19 ಪರೀಕ್ಷೆ, ಕಣ್ಗಾವಲಿನ ಕಡೆಗೆ ಗಮನ ಹರಿಸಿ ಆರೋಗ್ಯ ಸಂಪನ್ಮೂಲಗಳನ್ನು ಹೆಚ್ಚಿಸಬೇಕು ಎಂದರು.

ನರೇಂದ್ರ ಮೋದಿಗೆ 'ಗರಿಷ್ಠ ಅಹಂಕಾರ, ಕನಿಷ್ಠ ಅನುಭೂತಿ': ಜೈರಾಮ್ ರಮೇಶ್ ಕಿಡಿನರೇಂದ್ರ ಮೋದಿಗೆ 'ಗರಿಷ್ಠ ಅಹಂಕಾರ, ಕನಿಷ್ಠ ಅನುಭೂತಿ': ಜೈರಾಮ್ ರಮೇಶ್ ಕಿಡಿ

ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಯತ್ನಗಳಿಗೆ ಪ್ರತಿಕೂಲವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ಬಂದರೂ ಯಾವುದೇ ಒತ್ತಡಕ್ಕೊಳಗಾಗದೆ ಕೋವಿಡ್-19 ಸಂಖ್ಯೆಗಳ ಪಾರದರ್ಶಕ ವರದಿಯನ್ನು ರಾಜ್ಯಗಳು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ಕೋವಿಡ್-19 ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯನ್ನು ಅನೇಕ ರಾಜ್ಯಗಳು ಮರೆ ಮಾಚುತ್ತಿವೆ ಎಂಬ ವರದಿಗಳ ಬೆನ್ನಲ್ಲೇ ಪ್ರಧಾನಿ ಈ ರೀತಿಯ ಹೇಳಿಕೆ ನೀಡಿದರು.

ಪಾಸಿಟಿವಿಟಿ ದರ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಸ್ವಲ್ಪ ಅವಧಿಯ ಸ್ಥಳೀಯ ಕಂಟೈನ್ ಮೆಂಟ್ ಕಾರ್ಯತಂತ್ರದ ಅಗತ್ಯವಿರುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಕೋವಿಡ್-19 ಮೊದಲ ಅಲೆಯಲ್ಲಿ ಗ್ರಾಮೀಣ ಪ್ರದೇಶಗಳು ಹೆಚ್ಚಿನ ಬಾಧಿತವಾಗಿರಲಿಲ್ಲ. ಆದರೆ, ಎರಡನೇ ಅಲೆಯಲ್ಲಿ ಅನೇಕ ರಾಜ್ಯಗಳಲ್ಲಿ ಗ್ರಾಮೀಣ ಪ್ರದೇಶಗಳೂ ಗಂಭೀರ ಪರಿಣಾಮ ಎದುರಿಸುತ್ತಿವೆ. ಎಲ್ಲಾ ಅಗತ್ಯ ಸಲಕರಣೆಗಳೊಂದಿಗೆ ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರನ್ನು ಬಲಪಡಿಸಬೇಕು ಎಂದು ಪ್ರಧಾನಿ ಮೋದಿ ಕೋರಿದ್ದಾರೆ.

ಹೆಚ್ಚಿನ ಪಾಸಿಟಿವಿಟಿ ದರಗಳು ಇರುವ ಪ್ರದೇಶಗಳಲ್ಲಿ ಆರ್ ಟಿ- ಪಿಸಿಆರ್, ರಾಪಿಡ್ ಟೆಸ್ಟ್ ಗಳನ್ನು ಹೆಚ್ಚಿಸಬೇಕು ಎಂದು ಮೋದಿ ಹೇಳಿದರು. ಮಾರ್ಚ್ ಆರಂಭದಲ್ಲಿ ವಾರಕ್ಕೆ ಸುಮಾರು 50 ಲಕ್ಷ ಪರೀಕ್ಷೆಗಳನ್ನು ಮಾಡಲಾಗುತಿತ್ತು. ಅದು ಈಗ ವಾರಕ್ಕೆ ಸುಮಾರು 1.3 ಕೋಟಿಗೆ ಹೆಚ್ಚಳವಾಗಿದೆ ಎಂದು ಪಿಎಂಒ ಕಚೇರಿ ತಿಳಿಸಿದೆ.

English summary
Prime Minister Narendra Modi on Saturday chaired a high-level meeting on the COVID-19 situation and the ongoing vaccination drive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X